ಹಾಸನ: ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ವಿದೇಶಕ್ಕೆ ಹಾರಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ 113ಕ್ಕೂ ಹೆಚ್ಚು ವಿವಿಧ ಸಂಘಟನೆಗಳು, ಮಹಿಳಾ ಸಾಹಿತಿಗಳು, ವೈದ್ಯರು ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿ ಪ್ರತಿಭಟನೆ ನಡೆಸಿದರು.
ʼಹೋರಾಟದ ನಡಿಗೆ ಹಾಸನದ ಕಡೆಗೆʼ ಎಂಬ ಟ್ಯಾಗ್ ಲೈನ್ ಮೂಲಕ ಸಾಹಿತಿಗಳು ಹೋರಾಟ ನಡೆಸಿದ್ದಾರೆ. ಹಾಸನದ ಹೇಮಾವತಿ ವೃತ್ತದಿಂದ ಆರಂಭವಾದ ಮೆರವಣಿಗೆ ನಗರದ ಡಿಸಿ ಕಚೇರಿ ಬಳಿ ಕೊನೆಗೊಳ್ಳಲಿದ್ದು ಬಳಿಕ ಬೃಹತ್ ಸಮಾವೇಶ ನಡೆಸಲಿದ್ದಾರೆ.
ವಿವಿಧ ಮಹಿಳಾ ಸಂಘಟನೆಗಳು, ವೈದ್ಯರು, ಸಾಹಿತಿಗಳು ಸೇರಿದಂತೆ ರಾಜ್ಯಾದ ವಿವಿಧ ಊರುಗಳ ಸಾವಿರಾರು ಮಂದಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಮಹಿಳಾ ವಿಡಿಯೋಗಳನ್ನು ಹರಿಬಿಡುತ್ತಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪಾಪಿ ಪ್ರಜ್ವಲ್‌ನನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ರ್ಯಾಲಿಯುದ್ದಕ್ಕೂ ಮಹಿಳೆಯರು ಘೋಷಣೆ ಕೂಗುವ ಮೂಲಕ, ಅಲ್ಲಲ್ಲಿ ಪ್ರಜ್ವಲ್ ರೇವಣ್ಣ ವಿರುದ್ಧ ಹಾಡುಗಳನ್ನು ಹಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದಾರೆ
ಬೆಂಗಳೂರು: ಮಾರ್ಚ್.30ಕ್ಕೆ ನಡೆಯಬೇಕಿದ್ದ ಎಸ್‌ಎಸ್‌ಎಲ್‌ಸಿ ಹಿಂದಿ ಪರೀಕ್ಷೆ ಮಾರ್ಚ್.31ಕ್ಕ ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಪರೀಕ್ಷಾ ಬೋರ್ಡ್ ಮಾಹಿತಿ ನೀಡಿದ್ದು,…
ಬೆಂಗಳೂರು: ಆರು ವರ್ಷ ತುಂಬದ ಮಕ್ಕಳ ಪೋಷಕರಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ. ಒಂದನೇ ತರಗತಿಗೆ 6 ವರ್ಷ ತುಂಬಬೇಕೆಂಬ…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದು ವಿಧಾನಪರಿಷತ್ತಿನಲ್ಲಿ ಬಜೆಟ್ ಕುರಿತು ನಡೆಸಿದ ಚರ್ಚೆಯ ಮೇಲಿನ ಉತ್ತರದ ಪ್ರಮುಖ ಅಂಶಗಳು ಈ ಕೆಳಕಂಡಂತಿವೆ.…
ಬೆಂಗಳೂರು: ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರ ಕುಟುಂಬದ ವಾರಸುದಾರರಿಗೆ ಸರ್ಕಾರಿ ನೌಕರಿ ನೀಡಲು ಸರ್ಕಾರಿ ಆದೇಶದನ್ವಯ ಅವಕಾಶ ಇರುವುದಿಲ್ಲ ಎಂದು ಅರಣ್ಯ,…
ಜೆರುಸೇಲಂ: ಬಂದರ್ ಅಬ್ಬಾಸ್‌ನಲ್ಲಿ ಅಮೇರಿಕಾ-ಇಸ್ರೇಲಿ ದಾಳಿಯಲ್ಲಿ ಇಸ್ಲಾಮಿಕ ರೆವಲ್ಯೂಷನರಿ ಗಾರ್ಡ್ ಕಾಪ್ಸ್ ನೌಕಾ ಕಮಾಂಡರ್ ಅಲಿರೆಜಾ ತಂಗ್ ಸಿರಿ ಮೃತಪಟ್ಟಿದ್ದಾರೆ.…
ಬೆಂಗಳೂರು: ಮೈಸೂರು ಮುಡಾ ಅಕ್ರಮ ಸೈಟ್ ಹಂಚಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಪಾರ್ವತಿ…