BREAKING NEWS

ಪೆನ್‌ಡ್ರೈವ್‌ ಪ್ರಕರಣ: ಹಾಸನದಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಮಹಿಳೆಯರ ಬೃಹತ್ ಪ್ರತಿಭಟನೆ

ಹಾಸನ: ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಡಿ ವಿದೇಶಕ್ಕೆ ಹಾರಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಬಂಧನಕ್ಕೆ ಆಗ್ರಹಿಸಿ 113ಕ್ಕೂ ಹೆಚ್ಚು ವಿವಿಧ ಸಂಘಟನೆಗಳು, ಮಹಿಳಾ ಸಾಹಿತಿಗಳು, ವೈದ್ಯರು ಬೃಹತ್‌ ಮೆರವಣಿಗೆಯಲ್ಲಿ ಭಾಗವಹಿಸಿ ಪ್ರತಿಭಟನೆ ನಡೆಸಿದರು.

ʼಹೋರಾಟದ ನಡಿಗೆ ಹಾಸನದ ಕಡೆಗೆʼ ಎಂಬ ಟ್ಯಾಗ್‌ ಲೈನ್‌ ಮೂಲಕ ಸಾಹಿತಿಗಳು ಹೋರಾಟ ನಡೆಸಿದ್ದಾರೆ. ಹಾಸನದ ಹೇಮಾವತಿ ವೃತ್ತದಿಂದ ಆರಂಭವಾದ ಮೆರವಣಿಗೆ ನಗರದ ಡಿಸಿ ಕಚೇರಿ ಬಳಿ ಕೊನೆಗೊಳ್ಳಲಿದ್ದು ಬಳಿಕ ಬೃಹತ್‌ ಸಮಾವೇಶ ನಡೆಸಲಿದ್ದಾರೆ.

ವಿವಿಧ ಮಹಿಳಾ ಸಂಘಟನೆಗಳು, ವೈದ್ಯರು, ಸಾಹಿತಿಗಳು ಸೇರಿದಂತೆ ರಾಜ್ಯಾದ ವಿವಿಧ ಊರುಗಳ ಸಾವಿರಾರು ಮಂದಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮಹಿಳಾ ವಿಡಿಯೋಗಳನ್ನು ಹರಿಬಿಡುತ್ತಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಪಾಪಿ ಪ್ರಜ್ವಲ್‌ನನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ರ್ಯಾಲಿಯುದ್ದಕ್ಕೂ ಮಹಿಳೆಯರು ಘೋಷಣೆ ಕೂಗುವ ಮೂಲಕ, ಅಲ್ಲಲ್ಲಿ ಪ್ರಜ್ವಲ್‌ ರೇವಣ್ಣ ವಿರುದ್ಧ ಹಾಡುಗಳನ್ನು ಹಾಡುವ ಮೂಲಕ ಪ್ರತಿಭಟನೆ ಮಾಡುತ್ತಿದ್ದಾರೆ

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

3 mins ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

6 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

6 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

6 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

6 hours ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

6 hours ago