ಮೈಸೂರು : ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ಸಂಬಂಧ ಮುನ್ನೆಚ್ಚರಿಕೆಯಾಗಿ ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿ ಸರ್ಕಾರದ ಮಾರ್ಗಸೂಚಿಯಂತೆ ನಿಗದಿತ ಪರೀಕ್ಷೆಗಳನ್ನು ನಡೆಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಬೆಡ್‌ಗಳ ವ್ಯವಸ್ಥೆ, ಅಗತ್ಯ ಔಷಧಿಗಳ ದಾಸ್ತಾನಿಗೆ ಕ್ರಮವಹಿಸಿ ಎಂದರಲ್ಲದೆ, ಅಂಬುಲೆನ್ಸ್ ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದರ ಜೊತೆಗೆ ಆಕ್ಸಿಜನ್ ಪ್ಲಾಂಟ್ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಶೀತ, ನೆಗಡಿ, ಕೆಮ್ಮು ಸಾಮಾನ್ಯವಾಗಿ ಬರುತ್ತದೆ ಅದಕ್ಕೆ ಹೆದರುವುದು ಬೇಡ ಮುನ್ನೆಚ್ಚರಿಕೆಯಿಂದ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಯವರು ತಿಳಿಸಿದರು.
ವೃದ್ದರು ರಕ್ತದ ಒತ್ತಡ, ಸಕ್ಕರೆ ಕಾಯಿಲೆ ಕಡಿಮೆ ಮಾಡುವ ಬಗ್ಗೆ ಹಾಗೂ ಆರೋಗ್ಯದ ಕಡೆ ಹೆಚ್ಚು ಗಮನಹರಿಸಲು ಅರಿವು ಮೂಡಿಸಿ ಎಂದು ತಿಳಿಸಿದರು.
ಕೋವಿಡ್ RTPCR ಪರೀಕ್ಷೆ ಪ್ರತಿ ತಾಲೂಕಿನಲ್ಲಿಯೂ ಮಾಡಿಸಲಾಗುತ್ತಿದೆ. ಬೆಂಗಳೂರು ಬಿಟ್ಟರೆ ಮೈಸೂರಿನಲ್ಲಿ ಪಾಸಿಟಿವಿಟಿ ಜಾಸ್ತಿ ಇದೆ. ಕಳೆದ 8 ದಿನಗಳಲ್ಲಿ ಮೂರು ಸಾವಾಗಿದ್ದು 84 ಕೋವಿಡ್ ಪ್ರಕರಣಗಳು ಸಕ್ರಿಯವಾಗಿದೆ. ನಿನ್ನೆ 25 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. 20 ಕೋವಿಡ್ ಸೋಂಕಿತರು ಹಾಸ್ಪಿಟಲ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾ ಆರೋಗ್ಯ ಸರ್ವೇಕ್ಷಣಾಧಿಕಾರಿಗಳಾದ ಡಾ. ಮಹಾದೇವ ಪ್ರಸಾದ್ ಅವರು ಸಭೆಯಲ್ಲಿ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಎಂ.ಗಾಯಿತ್ರಿ, ಅಪರ ಜಿಲ್ಲಾಧಿಕಾರಿ ಆರ್. ಲೋಕನಾಥ್, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಕುಮಾರ ಸ್ವಾಮಿ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…