Mysore
24
scattered clouds

Social Media

ಶುಕ್ರವಾರ, 18 ಅಕ್ಟೋಬರ್ 2024
Light
Dark

ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಜನ ಪಾಠ ಕಲಿಸುತ್ತಾರೆ : ಬೊಮ್ಮಾಯಿ‌

ಬೆಂಗಳೂರು : ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು.

ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇಂದು ಬಸವ ಜಯಂತಿ. ಇಂದಿನಿಂದ ನಮ್ಮ ಪ್ರಚಾರ ಆರಂಭಿಸುತ್ತಿದ್ದೇವೆ. ನಾವು ಬಸವ ತತ್ವದಡಿ ಆಡಳಿತ ನಡೆಸಿದ್ದೇವೆ. ಅದರ ಮೂಲಕವೇ ಪ್ರಚಾರ ಆರಂಭಿಸುತ್ತೇವೆ. ಸಿದ್ದರಾಮಯ್ಯ ಅವರು ಒಬ್ಬ ಹಿರಿಯ ನಾಯಕರಾಗಿ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಅವರವರ ಸಮಾಜದ ನಾಯಕರು ಅವರ ಯೋಗ್ಯತೆ, ಕ್ಷಮತೆಯಲ್ಲಿ ಕೆಲಸ ಮಾಡುತ್ತಾರೆ. ಅವರ ಘನತೆಗೆ ಇದು ತಕ್ಕ ಹೇಳಿಕೆ ಅಲ್ಲ ಎಂದರು.

ರಾಹುಲ್ ಗಾಂಧಿ ಅವರು ಈ ಹಿಂದೆ ಮೋದಿ ಅವರ ಹೆಸರಿಗೆ ಕೊಟ್ಟ ಹೇಳಿಕೆಯ ರೀತಿಯಲ್ಲಿ ಸಿದ್ದರಾಮಯ್ಯ ಈಗ ಮಾತಡಿದ್ದಾರೆ. ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ಉತ್ತರ ಕೊಡುತ್ತಾರೆ. ತಕ್ಕ ಪಾಠ ಕಲಿಸುತ್ತಾರೆ ಎಂದರು.

ಮಾಜಿ ಸಿಎಂ ಹೇಳಿದ್ದೇನು? : ರಾಜ್ಯದ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದವರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಪ್ರತಿಪಕ್ಷದ ನಾಯಕ, ವರುಣ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ಆರೋಪಿಸಿದ್ದರು. ‘‘ಚುನಾವಣಾ ಪ್ರಚಾರ ಸಮಯದಲ್ಲಿ ಕಾಂಗ್ರೆಸ್‌ನಲ್ಲಿ ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಈಗಿರುವ ಲಿಂಗಾಯತ ಮುಖ್ಯಮಂತ್ರಿ ಮಾಡಿರುವ ಭ್ರಷ್ಟಾಚಾರ ಸಾಕಲ್ಲವೇ,’’ ಎಂದು ದೂರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ