ಬೆಂಗಳೂರು : ಲಿಂಗಾಯತ ಸಿಎಂಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಅವರೊಬ್ಬ ಹಿರಿಯ ನಾಯಕ. ಅವರು ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಅನ್ನೋದು ತಪ್ಪು. ಅವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಇಂದು ಬಸವ ಜಯಂತಿ. ಇಂದಿನಿಂದ ನಮ್ಮ ಪ್ರಚಾರ ಆರಂಭಿಸುತ್ತಿದ್ದೇವೆ. ನಾವು ಬಸವ ತತ್ವದಡಿ ಆಡಳಿತ ನಡೆಸಿದ್ದೇವೆ. ಅದರ ಮೂಲಕವೇ ಪ್ರಚಾರ ಆರಂಭಿಸುತ್ತೇವೆ. ಸಿದ್ದರಾಮಯ್ಯ ಅವರು ಒಬ್ಬ ಹಿರಿಯ ನಾಯಕರಾಗಿ ಈ ರೀತಿಯ ಹೇಳಿಕೆ ನೀಡಬಾರದಿತ್ತು. ಅವರವರ ಸಮಾಜದ ನಾಯಕರು ಅವರ ಯೋಗ್ಯತೆ, ಕ್ಷಮತೆಯಲ್ಲಿ ಕೆಲಸ ಮಾಡುತ್ತಾರೆ. ಅವರ ಘನತೆಗೆ ಇದು ತಕ್ಕ ಹೇಳಿಕೆ ಅಲ್ಲ ಎಂದರು.
ರಾಹುಲ್ ಗಾಂಧಿ ಅವರು ಈ ಹಿಂದೆ ಮೋದಿ ಅವರ ಹೆಸರಿಗೆ ಕೊಟ್ಟ ಹೇಳಿಕೆಯ ರೀತಿಯಲ್ಲಿ ಸಿದ್ದರಾಮಯ್ಯ ಈಗ ಮಾತಡಿದ್ದಾರೆ. ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ಉತ್ತರ ಕೊಡುತ್ತಾರೆ. ತಕ್ಕ ಪಾಠ ಕಲಿಸುತ್ತಾರೆ ಎಂದರು.
ಮಾಜಿ ಸಿಎಂ ಹೇಳಿದ್ದೇನು? : ರಾಜ್ಯದ ಮುಖ್ಯಮಂತ್ರಿ, ಲಿಂಗಾಯತ ಸಮುದಾಯದವರೇ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಪ್ರತಿಪಕ್ಷದ ನಾಯಕ, ವರುಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯ ಆರೋಪಿಸಿದ್ದರು. ‘‘ಚುನಾವಣಾ ಪ್ರಚಾರ ಸಮಯದಲ್ಲಿ ಕಾಂಗ್ರೆಸ್‌ನಲ್ಲಿ ಲಿಂಗಾಯತರಿಗೆ ಮುಖ್ಯಮಂತ್ರಿ ಸ್ಥಾನ ನೀಡುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸುತ್ತಾ, ಈಗಿರುವ ಲಿಂಗಾಯತ ಮುಖ್ಯಮಂತ್ರಿ ಮಾಡಿರುವ ಭ್ರಷ್ಟಾಚಾರ ಸಾಕಲ್ಲವೇ,’’ ಎಂದು ದೂರಿದ್ದರು.
ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…
ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…