Mysore
35
clear sky

Social Media

ಶುಕ್ರವಾರ, 27 ಮಾರ್ಚ್ 2026
Light
Dark

ರಾಮಮಂದಿರ  ಉದ್ಘಾಟನೆಯ ನೇರಪ್ರಸಾರಕ್ಕೆ ಅನುಮತಿ ನಿರಾಕರಿಸುವಂತಿಲ್ಲ: ತಮಿಳುನಾಡು ಸರ್ಕಾರಕ್ಕೆ ಸುಪ್ರೀಂ ನೋಟಿಸ್‌!

ನವದೆಹಲಿ: ರಾಮಮಂದಿರ  ಉದ್ಘಾಟನೆಯ ನೇರಪ್ರಸಾರಕ್ಕೆ ಅನುಮತಿ ನಿರಾಕರಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್  ತಮಿಳುನಾಡು ಸರ್ಕಾರಕ್ಕೆ ನೋಟಿಸ್ ನೀಡಿದೆ.

ಇದೊಂದು ಏಕರೂಪವಾದ ಸಮಾಜವಾಗಿದ್ದು, ಬೇರೆ ಸಮುದಾಯವರು ನೆರೆಹೊರೆಯವರು ವಾಸಿಸುತ್ತಿದ್ದಾರೆ ಎಂಬ ಕಾರಣಕ್ಕೆ ನೇರಪ್ರಸಾರಕ್ಕೆ ಏಕಪಕ್ಷೀಯವಾಗಿ ಅನುಮತಿಗೆ ನಿರಾಕರಿಸಲು ಆಗಲ್ಲ ಎಂದು ಸುಪ್ರೀಂಕೋರ್ಟ್ ತಮಿಳುನಾಡು ಸರ್ಕಾರಕ್ಕೆ ಹೇಳಿದೆ.

ತಮಿಳುನಾಡಿನಲ್ಲಿ ರಾಮಮಂದಿರ ಪ್ರಾಣಪ್ರತಿಷ್ಠೆ ನೇರ ಪ್ರಸಾರಕ್ಕೆ ನಿಷೇಧಿಸಲಾಗಿದೆ ಎಂದು ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಅನುಮತಿ ನಿರಾಕರಿಸುವಂತಿಲ್ಲ ಎಂದು ಹೇಳಿದೆ.

ಪ್ರಾಣ ಪ್ರತಿಷ್ಠಾ/ ರಾಮಮಂದಿರ ಉದ್ಘಾಟನೆ ಸಂದರ್ಭದಲ್ಲಿ ರಾಜ್ಯ ಸರ್ಕಾರವು ಎಲ್ಲಾ ರೀತಿಯ ವಿಶೇಷ ಪೂಜೆ, ಅರ್ಚನೆ ಮತ್ತು ಅನ್ನದಾನ ಮತ್ತು ಭಜನೆ ಕಾರ್ಯಕ್ರಮಗಳ ಮೇಲೆ ನಿಷೇಧಿಸಿದೆ ಎಂದು ಸುಪ್ರೀಂಕೋರ್ಟ್​ಗೆ ಸಲ್ಲಿಸಲಾದ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!