ಮಿಯಾಮಿ : ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಿಮಾನದ ಟಾಯ್ಲೆಟ್ನಲ್ಲಿ ಪೈಲಟ್ ಮೃತಪಟ್ಟಿದ್ದು ತಕ್ಷಣವೇ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಯಿತು. 271 ಪ್ರಯಾಣಿಕರೊಂದಿಗೆ ಮಿಯಾಮಿಯಿಂದ ಚಿಲಿಗೆ ಹೊರಟಿದ್ದ ವಾಣಿಜ್ಯ ವಿಮಾನದ ಟಾಯ್ಲೆಟ್ನಲ್ಲಿ ಕುಸಿದುಬಿದ್ದು ಪೈಲಟ್ ಸಾವನ್ನಪ್ಪಿದ್ದಾರೆ.
ತಕ್ಷಣವೇ ವಿಮಾನವನ್ನು ಪನಾಮದಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು, LATAM ಏರ್ಲೈನ್ಸ್ ವಿಮಾನ ಟೇಕ್ ಆಫ್ ಆದ ಮೂರು ಗಂಟೆಗಳ ನಂತರ ಸಾವನ್ನಪ್ಪಿದ್ದಾರೆ, ತಕ್ಷಣವೇ ಸಿಬ್ಬಂದಿ ತಿರ್ತು ಚಿಕಿತ್ಸೆ ನೀಡಿದರೂ ಅವರನ್ನು ಬದುಕಿಸಿಕೊಳ್ಳಲು ಸಾಧ್ಯವಾಗಲಿಲ್ಲ.
ವಿಮಾನವು ಪನಾಮ ಸಿಟಿಯ ಟೊಕುಮೆನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಾಗ, ವೈದ್ಯಕೀಯ ತಜ್ಞರು ಪೈಲಟ್ ಅನ್ನು ಪರೀಕ್ಷಿಸಲು ಧಾವಿಸಿದರು, ಆದರೆ ಅಷ್ಟೊರೊಳಗೆ ಅವರು ಮೃತಪಟ್ಟಿದ್ದರು.ಇವಾನ್ ಅವರು 25 ವರ್ಷಗಳ ಅನುಭವ ಹೊಂದಿರುವ ಅನುಭವಿ ಪೈಲಟ್ ಆಗಿದ್ದರು. ವಿಮಾನವು ಮಂಗಳವಾರ ಪನಾಮ ನಗರದಿಂದ ಹೊರಟು ಚಿಲಿಯ ಕಡೆಗೆ ತನ್ನ ಪ್ರಯಾಣವನ್ನು ಮುಂದುವರೆಸಿತು.
ಇವಾನ್ ಅಂದೌರ್ಗೆ 56 ವರ್ಷ, ಅವರ 25 ವರ್ಷಗಳ ಸೇವೆ, ಸಮರ್ಪಣೆ, ಅಮೂಲ್ಯ ಕೊಡುಗೆಗಾಗಿ ನಾವು ಕೃತಜ್ಞರಾಗಿದ್ದೇವೆ, ಹಾರಾಟದ ಸಮಯದಲ್ಲಿ ಪೈಲಟ್ ಜೀವ ಉಳಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಯಿತು ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.
ಬೆಳಗಾವಿ : ಮುಂಬರುವ ಜನವರಿಯಿಂದ ಹೆಚ್ಚುವರಿ 5 ಕೆ.ಜಿ ಅಕ್ಕಿ ಬದಲಿಗೆ ರಾಜ್ಯಾದ್ಯಂತ ಇಂದಿರಾ ಕಿಟ್‍ಗಳನ್ನು ವಿತರಣೆ ಮಾಡಲಾಗುವುದು ಎಂದು…
ಬೆಂಗಳೂರು: ನಟ ದುನಿಯಾ ವಿಜಯ್ ಅಭಿನಯದ ಲ್ಯಾಂಡ್ ಲಾರ್ಡ್ ಚಿತ್ರದಲ್ಲಿ ನಟ ರಾಜ್ ಬಿ ಶೆಟ್ಟಿ ನಟಿಸುತ್ತಿದ್ದು, ಇಂದು ಸಿನಿಮಾದ…
ಬೆಳಗಾವಿ: ಶಿಕ್ಷಕರ ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆಯ ಸಮಸ್ಯೆ ಇಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ಪ್ರಾಥಮಿಕ…
ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವ…
ಬೆಳಗಾವಿ: ಅನ್ನಭಾಗ್ಯ ಅಕ್ಕಿ ವಿದೇಶಕ್ಕೆ ರಫ್ತಾಗುತ್ತಿದ್ದು, ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಅಕ್ರಮ ಪತ್ತೆಗೆ ಎಸ್‌ಐಟಿ ರಚಿಸುವಂತೆ ಎಂಎಲ್‌ಸಿ ಸಿ.ಟಿ.ರವಿ ಆಗ್ರಹಿಸಿದರು. ಇಂದು…
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…