ಬ್ರೆಜಿಲ್ : ವಿಮಾನವೊಂದು ಪತನಗೊಂಡು 14 ಜನ ಮೃತಪಟ್ಟ ಘಟನೆ ಬ್ರೆಜಿಲ್‍ನ ಜನಪ್ರಿಯ ಪ್ರವಾಸಿ ತಾಣವಾದ ಬಾರ್ಸಿಲೋಸ್‍ನಲ್ಲಿ ನಡೆದಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಲ್ಯಾಂಡ್ ಆಗಲು ಪ್ರಯತ್ನಿಸಿದ ಕಾರಣ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತರಲ್ಲಿ 12 ಮಂದಿ ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಎಂದು ತಿಳಿದು ಬಂದಿದೆ. ಭಾರೀ ಮಳೆ ಹಾಗೂ ಬಿರುಗಾಳಿಯ ನಡುವೆ ಪೈಲೆಟ್ ವಿಮಾನವನ್ನು ಇಳಿಸಲು ಪ್ರಯತ್ನಿಸಿದ್ದಾರೆ. ಇದರಿಂದಾಗಿ ಎದುರಿನ ರನ್ ವೇ ಪೈಲೆಟ್‍ಗೆ ಕಾಣಿಸದೆ ಮಧ್ಯದಲ್ಲಿ ವಿಮಾನ ಇಳಿದಿದೆ. ಈ ವೇಳೆ ವೇಗ ನಿಯಂತ್ರಣಕ್ಕೆ ಬರದೆ ವಿಮಾನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಪಘಾತದ ಬಳಿಕ ಮೃತಪಟ್ಟವರನ್ನು ಅಮೆರಿಕ ಮೂಲದವರು ಎನ್ನಲಾಗಿತ್ತು. ಪರಿಶೀಲನೆಯ ಬಳಿಕ ಅವರೆಲ್ಲರು ಬ್ರೆಜಿಲ್‍ನ ಪ್ರಜೆಗಳು ಎಂದು ತಿಳಿದು ಬಂದಿದೆ. ಅವಘಡದ ಬಗ್ಗೆ ಬ್ರೆಜಿಲ್ ವಾಯುಪಡೆ ತನಿಖೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದೇ ಸಮಯದಲ್ಲಿ ಬಾರ್ಸಿಲೋಸ್‍ಗೆ ಆಗಮಿಸುತ್ತಿದ್ದ ಎರಡು ವಿಮಾನಗಳನ್ನು ಹವಾಮಾನದ ಕಾರಣದಿಂದಾಗಿ ಮನೌಸ್‍ಗೆ ವಾಪಸ್ ಕಳುಹಿಸಲಾಗಿದೆ. ಅಲ್ಲದೇ ಅವಘಡದಲ್ಲಿ ಸಾವನ್ನಪ್ಪಿದವರ ಮೃತ ದೇಹಗಳನ್ನು ಅವರ ಕುಟುಂಬಸ್ಥರಿಗೆ ತಲುಪಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಹೆಚ್ಚಿನ ಮಳೆಯ ಕಾರಣದಿಂದ ವಿಮಾನ ಸಂಚಾರಕ್ಕೆ ಅನುಮತಿ ಸಿಕ್ಕಿಲ್ಲ. ಅನುಮತಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಲ್ಲಿನ ವಾಯು ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…