BREAKING NEWS

ವಿಮಾನ ಪತನ : 14 ಜನರ ಸಾವು

ಬ್ರೆಜಿಲ್‍ : ವಿಮಾನವೊಂದು ಪತನಗೊಂಡು 14 ಜನ ಮೃತಪಟ್ಟ ಘಟನೆ ಬ್ರೆಜಿಲ್‍ನ ಜನಪ್ರಿಯ ಪ್ರವಾಸಿ ತಾಣವಾದ ಬಾರ್ಸಿಲೋಸ್‍ನಲ್ಲಿ ನಡೆದಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಲ್ಯಾಂಡ್ ಆಗಲು ಪ್ರಯತ್ನಿಸಿದ ಕಾರಣ ಈ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೃತರಲ್ಲಿ 12 ಮಂದಿ ಪ್ರಯಾಣಿಕರು ಹಾಗೂ ಇಬ್ಬರು ಸಿಬ್ಬಂದಿ ಎಂದು ತಿಳಿದು ಬಂದಿದೆ. ಭಾರೀ ಮಳೆ ಹಾಗೂ ಬಿರುಗಾಳಿಯ ನಡುವೆ ಪೈಲೆಟ್ ವಿಮಾನವನ್ನು ಇಳಿಸಲು ಪ್ರಯತ್ನಿಸಿದ್ದಾರೆ. ಇದರಿಂದಾಗಿ ಎದುರಿನ ರನ್ ವೇ ಪೈಲೆಟ್‍ಗೆ ಕಾಣಿಸದೆ ಮಧ್ಯದಲ್ಲಿ ವಿಮಾನ ಇಳಿದಿದೆ. ಈ ವೇಳೆ ವೇಗ ನಿಯಂತ್ರಣಕ್ಕೆ ಬರದೆ ವಿಮಾನ ಪತನಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತದ ಬಳಿಕ ಮೃತಪಟ್ಟವರನ್ನು ಅಮೆರಿಕ ಮೂಲದವರು ಎನ್ನಲಾಗಿತ್ತು. ಪರಿಶೀಲನೆಯ ಬಳಿಕ ಅವರೆಲ್ಲರು ಬ್ರೆಜಿಲ್‍ನ ಪ್ರಜೆಗಳು ಎಂದು ತಿಳಿದು ಬಂದಿದೆ. ಅವಘಡದ ಬಗ್ಗೆ ಬ್ರೆಜಿಲ್ ವಾಯುಪಡೆ ತನಿಖೆ ನಡೆಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದೇ ಸಮಯದಲ್ಲಿ ಬಾರ್ಸಿಲೋಸ್‍ಗೆ ಆಗಮಿಸುತ್ತಿದ್ದ ಎರಡು ವಿಮಾನಗಳನ್ನು ಹವಾಮಾನದ ಕಾರಣದಿಂದಾಗಿ ಮನೌಸ್‍ಗೆ ವಾಪಸ್ ಕಳುಹಿಸಲಾಗಿದೆ. ಅಲ್ಲದೇ ಅವಘಡದಲ್ಲಿ ಸಾವನ್ನಪ್ಪಿದವರ ಮೃತ ದೇಹಗಳನ್ನು ಅವರ ಕುಟುಂಬಸ್ಥರಿಗೆ ತಲುಪಿಸುವ ಪ್ರಯತ್ನ ನಡೆಯುತ್ತಿದೆ. ಆದರೆ ಹೆಚ್ಚಿನ ಮಳೆಯ ಕಾರಣದಿಂದ ವಿಮಾನ ಸಂಚಾರಕ್ಕೆ ಅನುಮತಿ ಸಿಕ್ಕಿಲ್ಲ. ಅನುಮತಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಲ್ಲಿನ ವಾಯು ಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

9 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

11 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

12 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

14 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

15 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

15 hours ago