BREAKING NEWS

ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ: ಬಿಜೆಪಿ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ

ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆಯ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿಯ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಕರೆದಿದ್ದಾರೆ.

ಭಾರತೀಯ ಆರ್ಥಿಕತೆಯು ಜಿಡಿಪಿಯಲ್ಲಿ ವರ್ಷಕ್ಕೆ ಕನಿಷ್ಠ 10 ಪ್ರತಿಶತದಷ್ಟು ಬೆಳೆಯುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ನಿರುದ್ಯೋಗವನ್ನು ಕೊನೆಗೊಳಿಸಬಹುದು ಮತ್ತು 10 ವರ್ಷಗಳಲ್ಲಿ ಬಡತನವನ್ನು ತೊಡೆದು ಹಾಕಬಹುದಾಗಿದೆ.

https://twitter.com/Swamy39/status/1669881974197026820?s=20

ಆದರೆ ಹಣಕಾಸು ಸಚಿವಾಲಯಕ್ಕೆ ಇದರ ಸುಳಿವಿಲ್ಲ. ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ಟ್ವೀಟ್​ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಟ್ವೀಟ್​ ಮಾಡಿದ್ದಾರೆ. ಈ ಹಿಂದೆ ಕೂಡ ಸುಬ್ರಮಣಿಯನ್ ಸ್ವಾಮಿ, ಕೇಂದ್ರ ಸರ್ಕಾರದ ಬಜೆಟ್ ಸೇರಿದಂತ ಹಲವು ವಿಚಾರಗಳಲ್ಲಿ ಹಣಕಾಸು ಸಚಿವಾಲಯದ ನಡೆಯನ್ನು​ ಟೀಕಿಸಿದ್ದರು.

ಅಲ್ಲದೇ, ಲೋಕಸಭೆಯ ಸದಸ್ಯತ್ವದಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದಾಗ ದೇಶ-ವಿದೇಶದ ರಾಜಕಾರಣಿಗಳು, ಚಿಂತಕರು ಸೇರಿದಂತೆ ಅಮೇರಿಕಾವ ವಿದೇಶಾಂಗ ಇಲಾಖೆಯೂ ಅನರ್ಹತೆ ಕುರಿತು ಖಂಡಿಸಿತ್ತು. ಆಗ ಸುಬ್ರಮಣಿಯನ್ ಸ್ವಾಮಿ, ಸರ್ಕಾರದ ಕ್ರಮವನ್ನು ಅಮೆರಿಕ ವಿದೇಶಾಂಗ ಇಲಾಖೆ ಖಂಡಿಸಿದೆ. ಇದಕ್ಕೆ ಮೋದಿ ಸರ್ಕಾರದ ಉತ್ತರವೇನು? ಎಂದು ಪ್ರಶ್ನಿಸಿದ್ದರು.

andolanait

Recent Posts

ಷೇರುಪೇಟೆ ವಹಿವಾಟಿನಲ್ಲಿ ಇಳಿಕೆ ; ಟಾಪ್-10 ಕಂಪನಿಗಳಲ್ಲಿ 7ಕ್ಕೆ ಭಾರೀ ನಷ್ಟ

ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…

3 hours ago

ಎಲ್‌ಪಿಜಿ ಹೊತ್ತ ಮತ್ತೆರಡು ಹಡಗು ಭಾರತದತ್ತ

ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…

3 hours ago

ಮೇಲುಕೋಟೆ ಜಾತ್ರೆ | ವೈರಮುಡಿ ಕಿರೀಟಧಾರಣಾ ಮಹೋತ್ಸವದಲ್ಲಿ 2 ಲಕ್ಷ ಜನರು ಭಾಗಿ

ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…

3 hours ago

ಅಸ್ಸಾಂ ಚುನಾವಣೆ | ಪಂಚ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್‌

ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…

3 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ : ​ಆಹಾರ,ನಾಗರಿಕ ಸರಬರಾಜು ಇಲಾಖೆ ಸ್ಪಷ್ಟನೆ

ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ‌ ಎಲ್.ಪಿ.ಜಿಗೆ ಯಾವುದೇ…

4 hours ago

ಹನೂರು | ಮಧ್ಯರಾತ್ರಿ ಮಾರಕಾಸ್ತ್ರ ಹಿಡಿದು ಓಡಾಟ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಹನೂರು : ಶನಿವಾರ ಮಧ್ಯರಾತ್ರಿ ಎರಡು ಗಂಟೆ ವೇಳೆಯಲ್ಲಿ ಯಾರೋ ಆಸಾಮಿಗಳು ಮಾರಕಾಸ್ತ್ರಗಳನ್ನು ಹಿಡಿದು ಐದಾರು ಜನರು ಓಡಾಡುತ್ತಿರುವ ದೃಶ್ಯ…

4 hours ago