ದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಆರ್ಥಿಕ ನೀತಿ ಹಾಗೂ ಹಣಕಾಸು ಇಲಾಖೆಯ ನೀತಿಗಳ ವಿರುದ್ಧ ವಾಗ್ದಾಳಿ ನಡೆಸಿರುವ ಬಿಜೆಪಿಯ ಹಿರಿಯ ಸಂಸದ ಸುಬ್ರಮಣಿಯನ್ ಸ್ವಾಮಿ, ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥ ಎಂದು ಕರೆದಿದ್ದಾರೆ.
ಭಾರತೀಯ ಆರ್ಥಿಕತೆಯು ಜಿಡಿಪಿಯಲ್ಲಿ ವರ್ಷಕ್ಕೆ ಕನಿಷ್ಠ 10 ಪ್ರತಿಶತದಷ್ಟು ಬೆಳೆಯುವ ಸಾಮರ್ಥ್ಯವನ್ನು ಹೊಂದಿದ್ದು, ಇದರಿಂದ ನಿರುದ್ಯೋಗವನ್ನು ಕೊನೆಗೊಳಿಸಬಹುದು ಮತ್ತು 10 ವರ್ಷಗಳಲ್ಲಿ ಬಡತನವನ್ನು ತೊಡೆದು ಹಾಕಬಹುದಾಗಿದೆ.
https://twitter.com/Swamy39/status/1669881974197026820?s=20
ಆದರೆ ಹಣಕಾಸು ಸಚಿವಾಲಯಕ್ಕೆ ಇದರ ಸುಳಿವಿಲ್ಲ. ಪ್ರಧಾನಿ ಮೋದಿ ಅರ್ಥಶಾಸ್ತ್ರದಲ್ಲಿ ಅನಕ್ಷರಸ್ಥರು ಎಂದು ಟ್ವೀಟ್ ಮೂಲಕ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡು ಟ್ವೀಟ್ ಮಾಡಿದ್ದಾರೆ. ಈ ಹಿಂದೆ ಕೂಡ ಸುಬ್ರಮಣಿಯನ್ ಸ್ವಾಮಿ, ಕೇಂದ್ರ ಸರ್ಕಾರದ ಬಜೆಟ್ ಸೇರಿದಂತ ಹಲವು ವಿಚಾರಗಳಲ್ಲಿ ಹಣಕಾಸು ಸಚಿವಾಲಯದ ನಡೆಯನ್ನು ಟೀಕಿಸಿದ್ದರು.
ಅಲ್ಲದೇ, ಲೋಕಸಭೆಯ ಸದಸ್ಯತ್ವದಿಂದ ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿದಾಗ ದೇಶ-ವಿದೇಶದ ರಾಜಕಾರಣಿಗಳು, ಚಿಂತಕರು ಸೇರಿದಂತೆ ಅಮೇರಿಕಾವ ವಿದೇಶಾಂಗ ಇಲಾಖೆಯೂ ಅನರ್ಹತೆ ಕುರಿತು ಖಂಡಿಸಿತ್ತು. ಆಗ ಸುಬ್ರಮಣಿಯನ್ ಸ್ವಾಮಿ, ಸರ್ಕಾರದ ಕ್ರಮವನ್ನು ಅಮೆರಿಕ ವಿದೇಶಾಂಗ ಇಲಾಖೆ ಖಂಡಿಸಿದೆ. ಇದಕ್ಕೆ ಮೋದಿ ಸರ್ಕಾರದ ಉತ್ತರವೇನು? ಎಂದು ಪ್ರಶ್ನಿಸಿದ್ದರು.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…