ಅಯೋಧ್ಯೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಶನಿವಾರ) ಅಯೋಧ್ಯೆಯ ಮರು ಅಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಜೊತೆಗೆ ಅಯೋಧ್ಯೆ ವಿಮಾನ ನಿಲ್ದಾಣ, ಎರಡು ಅಮೃತ ಭಾರತ್ ಮತ್ತು 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಉತ್ತರ ಪ್ರದೇಶದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪಿಎಂ ಶಂಕುಸ್ಥಾಪನೆ ಮಾಡಿದ್ದಾರೆ.
ರೈಲು ನಿಲ್ದಾಣವನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ ನರೈಲ್ವೆ ನಿಲ್ದಾಣ ಸೌಲಭ್ಯದ ವೀಕ್ಷಣೆ ನಡೆಸಿದರು. ಅವರರೊಂದಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತಿತರರು ಜೊತೆಯಾಗಿದ್ದರು.
https://x.com/airnewsalerts/status/1740986541282075066?s=20
ಮರು ಅಭಿವೃದ್ಧಿಗೊಂಡ ನಿಲ್ದಾಣದ ಹಂತ-1 240 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣ ಪೂರ್ಣಗೊಂಡಿದೆ. ಈ ನಿಲ್ದಾಣ ಮೂರು ಅಂತಸ್ತಿನದ್ದಾಗಿದ್ದು, ರೈಲು ನಿಲ್ದಾಣದ ಕಟ್ಟಡ ಲಿಫ್ಟ್‌ಗಳು, ಎಸ್ಕಲೇಟರ್‌ಗಳು, ಫುಡ್ ಪ್ಲಾಜಾಗಳು, ಪೂಜೆ ಸಮಾನುಗಳ ಅಂಗಡಿಗಳು, ಕ್ಲೋಕ್ ರೂಮ್‌ಗಳು, ಮಕ್ಕಳ ಆರೈಕೆ ಕೊಠಡಿಗಳು, ವೈಟಿಂಗ್ ರೂಂಗಳಂತಹ ವೈಶಿಷ್ಟ್ಯತೆಗಳಿಂದ ಕೂಡಿದೆ.
ಎರಡು ಅಮೃತ್ ಭಾರತ್ ರೈಲು: ದರ್ಬಾಂಗ್-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್‌ಪ್ರೆಸ್ ಮತ್ತು ಮಾಲ್ಡಾ ಟೌನ್-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಸ್ (ಬೆಂಗಳೂರು) ಅಮೃತ್ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಅವರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.
ನೂತನ ಆರು ವಂದೇ ಭಾರತ್ ರೈಲುಗಳಿಗೆ ಪಿಎಂ ಚಾಲನೆ: ಶ್ರೀ ಮಾತಾ ವೈಷ್ಣೋದೇವಿ ಕತ್ರಾ-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ಅಮೃತಸರ-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ಕೊಯಮತ್ತೂರು-ಬೆಂಗಳೂರು ಕ್ಯಾಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್, ಜಲ್ನಾ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪಿಎಂ ಮೋದಿ ಚಾಲನೆ ಕೊಟ್ಟರು.
ಕರಾವಳಿ ಜಿಲ್ಲೆಯ ಬಹುದಿನದ ಬೇಡಿಕೆಯಾದ ಮಹಾನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ಮಂಗಳೂರು-ಮಡಗಾಂವ್ ವಂದೇ ಭಾರತ್ ಮತ್ತು ಕೊಯಮತ್ತೂರು-ಬೆಂಗಳೂರು ಕ್ಯಾಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಆಯೋಜಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮಾತನಾಡಿ, ದೇಶದಲ್ಲಿ ಸ್ವಾತಂತ್ರ್ಯ ಬಳಿಕ ಎರಡು ಯುಗಗಳು ಕಾಣುತ್ತಿದ್ದು, 2014 ರ ಬಳಿಕ ಪರಿವರ್ತನೆ ಯುಗ ಆರಂಭವಾಗಿದೆ. ರೈಲ್ವೆ ಇಲಾಖೆಯಲ್ಲಿ ಮಹತ್ತರ ಬದಲಾವಣೆಯಾಗಿದೆ ಎಂದರು.
ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…
ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್ ತಿಳಿಸಿದರು. ವಿಧಾನಪರಿಷತ್ ಕಲಾಪದಲ್ಲಿ…
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…
ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ…
ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…
ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ…