BREAKING NEWS

ವಂದೇ ಭಾರತ್‌ ಸೇರಿದಂತೆ 8 ರೈಲುಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಅಯೋಧ್ಯೆ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು (ಶನಿವಾರ) ಅಯೋಧ್ಯೆಯ ಮರು ಅಭಿವೃದ್ಧಿಗೊಂಡ ಅಯೋಧ್ಯೆ ರೈಲು ನಿಲ್ದಾಣವನ್ನು ಉದ್ಘಾಟಿಸಿದರು. ಜೊತೆಗೆ ಅಯೋಧ್ಯೆ ವಿಮಾನ ನಿಲ್ದಾಣ, ಎರಡು ಅಮೃತ ಭಾರತ್ ಮತ್ತು 6 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಉತ್ತರ ಪ್ರದೇಶದ ಹಲವಾರು ಅಭಿವೃದ್ಧಿ ಯೋಜನೆಗಳಿಗೆ ಪಿಎಂ ಶಂಕುಸ್ಥಾಪನೆ ಮಾಡಿದ್ದಾರೆ.

ರೈಲು ನಿಲ್ದಾಣವನ್ನು ಉದ್ಘಾಟಿಸಿದ ನಂತರ ಪ್ರಧಾನಿ ಮೋದಿ ನರೈಲ್ವೆ ನಿಲ್ದಾಣ ಸೌಲಭ್ಯದ ವೀಕ್ಷಣೆ ನಡೆಸಿದರು. ಅವರರೊಂದಿಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಮತ್ತಿತರರು ಜೊತೆಯಾಗಿದ್ದರು.

https://x.com/airnewsalerts/status/1740986541282075066?s=20

ಮರು ಅಭಿವೃದ್ಧಿಗೊಂಡ ನಿಲ್ದಾಣದ ಹಂತ-1 240 ಕೋಟಿ ರೂಪಾಯಿಗೂ ಹೆಚ್ಚು ವೆಚ್ಚದಲ್ಲಿ ಅಯೋಧ್ಯಾ ಧಾಮ್ ಜಂಕ್ಷನ್ ರೈಲು ನಿಲ್ದಾಣ ಪೂರ್ಣಗೊಂಡಿದೆ. ಈ ನಿಲ್ದಾಣ ಮೂರು ಅಂತಸ್ತಿನದ್ದಾಗಿದ್ದು, ರೈಲು ನಿಲ್ದಾಣದ ಕಟ್ಟಡ ಲಿಫ್ಟ್‌ಗಳು, ಎಸ್ಕಲೇಟರ್‌ಗಳು, ಫುಡ್ ಪ್ಲಾಜಾಗಳು, ಪೂಜೆ ಸಮಾನುಗಳ ಅಂಗಡಿಗಳು, ಕ್ಲೋಕ್ ರೂಮ್‌ಗಳು, ಮಕ್ಕಳ ಆರೈಕೆ ಕೊಠಡಿಗಳು, ವೈಟಿಂಗ್ ರೂಂಗಳಂತಹ ವೈಶಿಷ್ಟ್ಯತೆಗಳಿಂದ ಕೂಡಿದೆ.

ಎರಡು ಅಮೃತ್ ಭಾರತ್ ರೈಲು: ದರ್ಬಾಂಗ್-ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ಅಮೃತ್ ಭಾರತ್ ಎಕ್ಸ್‌ಪ್ರೆಸ್ ಮತ್ತು ಮಾಲ್ಡಾ ಟೌನ್-ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಸ್ (ಬೆಂಗಳೂರು) ಅಮೃತ್ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಅವರು ಇದೇ ಸಂದರ್ಭದಲ್ಲಿ ಚಾಲನೆ ನೀಡಿದರು.

ನೂತನ ಆರು ವಂದೇ ಭಾರತ್ ರೈಲುಗಳಿಗೆ ಪಿಎಂ ಚಾಲನೆ: ಶ್ರೀ ಮಾತಾ ವೈಷ್ಣೋದೇವಿ ಕತ್ರಾ-ನವದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ಅಮೃತಸರ-ದೆಹಲಿ ವಂದೇ ಭಾರತ್ ಎಕ್ಸ್‌ಪ್ರೆಸ್, ಕೊಯಮತ್ತೂರು-ಬೆಂಗಳೂರು ಕ್ಯಾಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್, ಮಂಗಳೂರು-ಮಡ್ಗಾಂವ್ ವಂದೇ ಭಾರತ್ ಎಕ್ಸ್‌ಪ್ರೆಸ್, ಜಲ್ನಾ-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಅಯೋಧ್ಯೆ-ಆನಂದ್ ವಿಹಾರ್ ಟರ್ಮಿನಲ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಪಿಎಂ ಮೋದಿ ಚಾಲನೆ ಕೊಟ್ಟರು.

ಕರಾವಳಿ ಜಿಲ್ಲೆಯ ಬಹುದಿನದ ಬೇಡಿಕೆಯಾದ ಮಹಾನಗರಗಳನ್ನು ಜೋಡಿಸುವ ಸೆಮಿ ಹೈ ಸ್ಪೀಡ್ ಮಂಗಳೂರು-ಮಡಗಾಂವ್ ವಂದೇ ಭಾರತ್ ಮತ್ತು ಕೊಯಮತ್ತೂರು-ಬೆಂಗಳೂರು ಕ್ಯಾಂಟ್ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದರು.

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಆಯೋಜಿಸಿದ್ದ ಉದ್ಘಾಟನಾ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್‌ ಮಾತನಾಡಿ, ದೇಶದಲ್ಲಿ ಸ್ವಾತಂತ್ರ್ಯ ಬಳಿಕ ಎರಡು ಯುಗಗಳು ಕಾಣುತ್ತಿದ್ದು, 2014 ರ ಬಳಿಕ ಪರಿವರ್ತನೆ ಯುಗ ಆರಂಭವಾಗಿದೆ. ರೈಲ್ವೆ ಇಲಾಖೆಯಲ್ಲಿ ಮಹತ್ತರ ಬದಲಾವಣೆಯಾಗಿದೆ ಎಂದರು.

https://x.com/nalinkateel/status/1740993232161661071?s=20

andolanait

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

8 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

9 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

10 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

11 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

16 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

16 hours ago