BREAKING NEWS

ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ ಎಂಬ ಪ್ರಧಾನಿ ಮೋದಿ ಕರೆ ಅತ್ಯಂತ ಪ್ರಚೋದನಕಾರಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ‘‘ಸನಾತನ ಧರ್ಮದ ಬಗೆಗಿನ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಹೇಳಿಕೆಗೆ ತಕ್ಕ ಪ್ರತ್ಯುತ್ತರ ನೀಡಿ’’ ಎಂಬ ಪ್ರಧಾನಿ ನರೇಂದ್ರ ಮೋದಿ ಕರೆ ಅತ್ಯಂತ ಪ್ರಚೋದನಕಾರಿಯಾದುದು ಮಾತ್ರವಲ್ಲ ಸಂವಿಧಾನ ವಿರೋಧಿಯಾದುದು. ಈ ಪ್ರಚೋದನಕಾರಿ ಹೇಳಿಕೆಯನ್ನು ಹಿಂದಕ್ಕೆ ಪಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʼʼ ವಿಷಯ-ವಿದ್ಯಮಾನಗಳೇನೇ ಇರಲಿ, ಯಾರಾದರೂ ತಪ್ಪು ಮಾಡಿದ್ದರೆ ಕಾನೂನು ಪ್ರಕಾರ ಅಂತಹವರ ವಿರುದ್ಧ ಕ್ರಮಕೈಗೊಳ್ಳಬೇಕಾಗುತ್ತದೆ. ಇದರ ಬದಲಿಗೆ ತಕ್ಕ ಪ್ರತ್ಯುತ್ತರ ನೀಡಿ ಎಂದು ಜನರನ್ನು ಪ್ರಚೋದಿಸುವುದು, ಕಾನೂನನ್ನು ಕೈಗೆತ್ತಿಕೊಳ್ಳಲು ನೀಡುವ ಕರೆಯಾಗುತ್ತದೆ. ಇದನ್ನು ಪ್ರಧಾನಿಯವರು ಮಾಡಿದರೂ ಅಪರಾಧವೇʼʼ ಎಂದು ಹೇಳಿದ್ದಾರೆ.

ʼʼನರೇಂದ್ರ ಮೋದಿ ಅವರು ಕೇವಲ ಬಿಜೆಪಿಯ ನಾಯಕರಲ್ಲ, ಅವರು ಸಾಂವಿಧಾನಿಕ ಹುದ್ದೆಯಾದ ಪ್ರಧಾನಮಂತ್ರಿಯ ಕುರ್ಚಿಯಲ್ಲಿ ಕುಳಿತಿರುವವರು. ಹೀಗಿರುವಾಗ ಅವರ ನಡೆ-ನುಡಿ ಮತ್ತು ಕ್ರಿಯೆ-ಪ್ರತಿಕ್ರಿಯೆ ಆ ಸ್ಥಾನದ ಘನತೆ-ಗೌರವ ಮತ್ತು ಜವಾಬ್ದಾರಿಗಳಿಗೆ ತಕ್ಕಂತೆ ಇರಬೇಕಾಗಿರುವುದು ರಾಜಧರ್ಮವಾಗಿದೆ.ʼʼ ಎಂದು ಅವರು ತಿಳಿಸಿದ್ದಾರೆ.

ʼʼನರೇಂದ್ರ ಮೋದಿ ಅವರು ಇನ್ನೂ ಆರೆಸ್ಸೆಸ್ ನ ತನ್ನ ಪೂರ್ವಾಶ್ರಮದ ಗುಂಗಿನಲ್ಲಿದ್ದಂತೆ ಕಾಣುತ್ತಿದೆ. ತಾನು ಈ ದೇಶದ 140 ಕೋಟಿ ಜನರಿಗೂ ಪ್ರಧಾನಿ ಎನ್ನುವುದನ್ನು ಮರೆತಂತಿದೆ. ಪ್ರಧಾನಿಯವರ ಇಂತಹ ಹೇಳಿಕೆಗಳಿಂದ ಪ್ರಚೋದಿತರಾಗಿ ಅವರದ್ದೇ ಪಕ್ಷ ಮತ್ತು ಸಂಘಟನೆಯ ಅನೇಕ ನಾಯಕರು ಹಿಂಸಾಚಾರಕ್ಕೆ ಕರೆನೀಡುತ್ತಿರುವುದು ಕಳವಳಕಾರಿ ಬೆಳವಣಿಗೆಯಾಗಿದೆʼʼ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ʼʼಪ್ರಧಾನಿ ನರೇಂದ್ರ ಮೋದಿ ಅವರ ಹಿಂದಿನ ನಡವಳಿಕೆಗಳನ್ನು ಗಮನಿಸಿದರೆ ಅವರ ಈಗಿನ ಹೇಳಿಕೆಗಳು ಅಚ್ಚರಿ ಹುಟ್ಟಿಸುವುದಿಲ್ಲ. ಗುಜರಾತ್ ಗಲಭೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾಗಿ ನರೇಂದ್ರ ಮೋದಿಯವರು ನಡೆದುಕೊಂಡ ರೀತಿಯ ಬಗ್ಗೆ ಆಗಿನ ಪ್ರಧಾನಿ ಅಟಲಬಿಹಾರಿ ವಾಜಪೇಯಿ ಅವರೇ ಅಸಮಾಧಾನ ವ್ಯಕ್ತಪಡಿಸಿ, ರಾಜಧರ್ಮ ಪಾಲಿಸಲು ಕರೆ ಕೊಟ್ಟಿದ್ದರು. ದಿವಂಗತ ವಾಜಪೇಯಿ ಅವರ ಆ ಬುದ್ದಿಮಾತನ್ನೇ ಈ ಸಂದರ್ಭದಲ್ಲಿ ಮೋದಿಯವರಿಗೆ ನೆನಪು ಮಾಡಿಕೊಡಲು ಬಯಸುತ್ತೇನೆʼʼ ಎಂದು ಸಿದ್ದರಾಮಯ್ಯ ಟ್ವೀಟ್‌ ನಲ್ಲಿ ಉಲ್ಲೇಖಿಸಿದ್ದಾರೆ.

andolanait

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago