71ನೇ ವಸಂತಕ್ಕೆ ಕಾಲಿಟ್ಟ ಪ್ರದಾನಿ ಮೋದಿ: ಗಣ್ಯರಿಂದ ಶುಭ ಹಾರೈಕೆ

ಹೊಸದಿಲ್ಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 71ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅವರಿಗೆ ರಾಷ್ಟ್ರಪತಿ ಸೇರಿದಂತೆ ಅನೇಕ ಗಣ್ಯರು ಶುಭಾಶಯ ತಿಳಿಸಿದ್ದಾರೆ.

ಪ್ರಧಾನಿ ಮೋದಿಗೆ ಟ್ವೀಟ್‌ ಮಾಡಿ ಶುಭ ಹಾರೈಸಿರುವ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌, ʻಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೇ, ನಿಮಗೆ ಜನ್ಮದಿನದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಲಭಿಸಲೆಂದು ಭಯಸುತ್ತೇನೆʼ ಎಂದು ಹರಸಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಟ್ವೀಟ್‌ ಮಾಡಿ, ʻನರೇಂದ್ರ ಮೋದಿ ಅವರಿಗೆ 71ನೇ ಹುಟ್ಟುಹಬ್ಬದ ಶುಭಾಶಯಗಳು. ಅವರಿಗೆ ದೇವರು ಉತ್ತಮ ಆರೋಗ್ಯ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆʼ ಎಂದಿದ್ದಾರೆ.

ʻದೇಶದ ನೆಚ್ಚಿನ ನಾಯಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜನ್ಮದಿನದ ಶುಭಾಶಯಗಳು. ನಿಮಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ದೊರೆಯಲೆಂದು ಪ್ರಾರ್ಥಿಸುತ್ತೇನೆ. ಮೋದಿ ಅವರು ದೇಶವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುವ ದೃಢ ಸಂಕಲ್ಪ ಹೊಂದಿದ್ದಾರೆʼ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಟ್ವೀಟ್‌ ಮಾಡಿದ್ದಾರೆ.

ʻಆದರಣೀಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ 71ನೇ ಜನ್ಮದಿನದ ಹಾರ್ದಿಕ ಶುಭಕಾಮನೆಗಳು. ಸದೃಢ, ಸಶಕ್ತ, ಸಮರ್ಥ ನವಭಾರತ ನಿರ್ಮಾಣದೆಡೆಗೆ ದೇಶವನ್ನು ಮುನ್ನಡೆಸುತ್ತಿರುವ ತಮಗೆ, ದೇವರು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ತಮ್ಮ ನಾಯಕತ್ವಕ್ಕೆ ಮತ್ತಷ್ಟು ಶಕ್ತಿಯನ್ನು ಕರುಣಿಸಲಿʼ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್‌ ಮಾಡಿದ್ದಾರೆ.

× Chat with us