ದೆಹಲಿ ಏಮ್ಸ್‌ನಲ್ಲಿ ಕೋವಿಡ್‌-19 ಲಸಿಕೆ ಪಡೆದ ಪ್ರಧಾನಿ ನರೇಂದ್ರ ಮೋದಿ

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯ ಏಮ್ಸ್‌ನಲ್ಲಿ ಸೋಮವಾರ ಬೆಳಿಗ್ಗೆ ಕೋವಿಡ್‌ ಲಸಿಕೆಯ ಮೊದಲ ಡೋಸ್ ಪಡೆದರು.

ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ʻಕೋವಿಡ್‌-19 ವಿರುದ್ಧದ ಹೋರಾಟದಲ್ಲಿ ಜಾಗತಿಕ ಮಟ್ಟದಲ್ಲಿ ಸಾಮರ್ಥ್ಯ ಹೆಚ್ಚಿಸುವ ವೈದ್ಯರು ಹಾಗೂ ವಿಜ್ಞಾನಿಗಳು ಕಾರ್ಯ ಮಾಡುತ್ತಿದ್ದಾರೆ. ಅರ್ಹ ಫಲಾನುಭವಿಗಳು ಕೋವಿಡ್‌ ಲಸಿಕೆ ಪಡೆಯುವಂತೆ ಮನವಿ ಮಾಡುತ್ತೇನೆ. ಆ ಮೂಲಕ ಭಾರತವನ್ನು ಕೋವಿಡ್‌ ಮುಕ್ತರಾಗಿಸೋಣʼ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಮೊದಲ ಹಂತದಲ್ಲಿ 1 ಕೋಟಿ 30 ಲಕ್ಷ ಜನರಿಗೆ ಲಸಿಕೆ ನೀಡಲಾಗಿದ್ದು, ಇಂದಿನಿಂದ 2ನೇ ಹಂತದ ಲಸಿಕೆ ಅಭಿಯಾನ ಶುರುವಾಗಲಿದೆ. ಇದರಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ.

× Chat with us