ಬೆಂಗಳೂರು : ಆಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಹಿನ್ನೆಲೆಯಲ್ಲಿ ಜೈಲು ಪಾಲಾಗಿದ್ದ ಚಿತ್ರದುರ್ಗ ಮುರುಘಾಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.
ಒಟ್ಟು ಹತ್ತಕ್ಕೂ ಹೆಚ್ಚಿನ ಷರತ್ತುಗಳನ್ನು ವಿಧಿಸಿರುವ ನ್ಯಾಯಾಲಯ ಭವಿಷ್ಯದಲ್ಲಿ ಇಂತಹ ಪ್ರಕರಣ ಮರುಕಳುಹಿಸಿದರೆ,ಜಾಮೀನು ರದ್ದುಪಡಿಸುವ ಎಚ್ಚರಿಕೆಯನ್ನು ಸಹಾ ನೀಡಿದೆ. ಮುರುಘಮಠದ ಶಿವಮೂರ್ತಿ ಶರಣರಿಗೆ ಜಾಮೀನು ಮಂಜೂರಾಗಿದ್ದರೂ,ಅವರ ಮೇಲೆ ಇನ್ನು ಕ್ರಿಮಿನಲ್ ಪ್ರಕರಣ ವಿಚಾರಣಾ ಹಂತದಲ್ಲಿರುವ ಕಾರಣ, ಸದ್ಯಕ್ಕೆ ಜೈಲೇ ಗತಿ ಎನ್ನುವಂತಾಗಿದೆ.
ಬುಧವಾರ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ಪೀಠ ಕಾಯ್ದಿರಿಸಿದ್ದ ತೀರ್ಪನ್ನು ಪ್ರಕಟಿಸಿತು.
ಕಳೆದ ವರ್ಷ ಸೆ.2 ರಂದು ಮುರುಘಾಶ್ರೀ ಶಿವಮೂರ್ತಿ ಸ್ವಾಮೀಜಿಯನ್ನು ಪೋಕ್ಸೊ ಪ್ರಕರಣದಡಿ ಬಂಧಿಸಲಾಗಿತ್ತು. ಕಳೆದ 13 ತಿಂಗಳಿಂದ ಜೈಲಿನಲ್ಲಿರುವ ಸ್ವಾಮೀಜಿ ಜಾಮೀನು ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿಯನ್ನು ಅ.31 ರಂದು ವಿಚಾರಣೆ ನಡೆಸಿದ್ದ ಪೀಠ ಆದೇಶವನ್ನು ಕಾಯ್ದಿರಿಸಿತ್ತು.
ಈ ಹಿಂದೆ ನಡೆದ ವಿಚಾರಣೆಯಲ್ಲಿ ದೂರು ಸಲ್ಲಿಸಲು ಸಂತ್ರಸ್ತರಿಗೆ ನೆರವಾಗಿದ್ದ ಒಡನಾಡಿ ಸೇವಾ ಸಂಸ್ಥೆಯ ಪರ ವಕೀಲ ಡಿ.ಸಿ.ಶ್ರೀನಿವಾಸ್ ವಾದಿಸಿ, ಪ್ರಕರಣದಲ್ಲಿ ಆರೋಪಿಯಾಗಿರುವ ಶರಣರು ಪ್ರಭಾವಿ ವ್ಯಕ್ತಿ. ಅವರಿಗೆ ಜಾಮೀನು ನೀಡಿದರೆ ಪ್ರಕರಣದಲ್ಲಿನ ಸಂತ್ರಸ್ತರಾದ ಬಡ ಮಕ್ಕಳಿಗೆ ಬೆದರಿಕೆ ಎದುರಾಗುವ ಸಾಧ್ಯತೆ ಇದೆ. ಶರಣರು ತಮ್ಮನ್ನು ಲೈಂಗಿಕವಾಗಿ ಶೋಷಿಸಿದ್ದಾರೆ ಎಂಬುದಾಗಿ ಸಂತ್ರಸ್ತರು ಮ್ಯಾಜಿಸ್ಟ್ರೇಟ್ ಕೋರ್ಟ್ ಮುಂದೆ ಸ್ವಯಂಕೃತ ಹೇಳಿಕೆ ದಾಖಲಿಸಿದ್ದಾರೆ. ಈ ಅಂಶವನ್ನು ಗಂಭೀರವಾಗಿ ಪರಿಗಣಿಸಬೇಕು ಹಾಗೂ ಶರಣರಿಗೆ ಜಾಮೀನು ನೀಡಬಾರದು ಎಂದು ಮನವಿ ಮಾಡಿದ್ದರು.
ಸರ್ಕಾರಿ ಅಭಿಯೋಜಕರು ವಾದ ಮಂಡಿಸಿ, ಶಿವಮೂರ್ತಿ ಶರಣರು ತಮ್ಮ ಮಠದಲ್ಲಿನ ಹಾಸ್ಟೆಲ್‍ನ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಶೋಷಿಸಿರುವುದು ತನಿಖೆಯ ವೇಳೆ ಮೇಲ್ನೋಟಕ್ಕೆ ಕಂಡುಬಂದಿದೆ. ಇದರಿಂದ ಅವರಿಗೆ ಜಾಮೀನು ನೀಡಬಾರದು ಎಂದು ಕೋರಿದ್ದರು.
ಸಂತ್ರಸ್ತೆಯರ ಮೇಲೆ ಅರ್ಜಿದಾರರು ಲೈಂಗಿಕ ದೌರ್ಜನ್ಯ ನಡೆಸಿಲ್ಲ ಎಂಬುದು ವೈದ್ಯಕೀಯ ಪರೀಕ್ಷೆಯಲ್ಲಿ ಸಾಬೀತಾಗಿರುವ ಕಾರಣ ಜಾಮೀನು ನೀಡಬೇಕು ಎಂದು ಶರಣರ ಪರ ವಕೀಲರು ಹೈಕೋರ್ಟ್‍ಗೆ ಮನವಿ ಮಾಡಿದ್ದರು.
ಏನಿದು ಪ್ರಕರಣ?
ಚಿತ್ರದುರ್ಗದ ಮುರುಘಾಮಠದ ಆಡಳಿತದಲ್ಲಿರುವ ವಿದ್ಯಾರ್ಥಿ ನಿಲಯದ ಹಲವು ವಿದ್ಯಾರ್ಥಿನಿಯರಿಗೆ ಸ್ವಾಮೀಜಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ವಿದ್ಯಾರ್ಥಿನಿಯರು ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ಮೊರೆ ಹೋಗಿದ್ದರು. ಚಿತ್ರದುರ್ಗದ ಮಠದ ವಿದ್ಯಾರ್ಥಿ ನಿಲಯದಲ್ಲಿದ್ದ ನಮ್ಮ ಮೇಲೆ ಸ್ವಾಮೀಜಿ ದೌರ್ಜನ್ಯ ಎಸಗಿದ್ದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದರು. ಸ್ವಾಮೀಜಿಯವರಿಗೆ ಹಣ್ಣು ತೆಗೆದುಕೊಂಡು ಹೋಗಿ ಎಂದು ಮಹಿಳಾ ವಾರ್ಡನ್ ನಮ್ಮನ್ನು ಕಳುಹಿಸುತ್ತಿದ್ದರು. ಸ್ವಾಮೀಜಿ ಇದ್ದ ಸ್ಥಳಕ್ಕೆ ತೆರಳಿದರೆ ಅಲ್ಲಿ ನಮಗೆ ಅಮಲು ಬರುವಂತೆ ಮಾಡಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.
ಬಾಲಕಿಯರು ಮೈಸೂರಿನ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ 2022ರ ಆ.26ರಂದು ದೂರು ದಾಖಲಿಸಿದ್ದರು. ನಂತರ ಶರಣರನ್ನು 2022ರ ಸೆ.1ರಂದು ಪೊಲೀಸರು ಬಂಧಿಸಿದ್ದರು. ಅಂದಿನಿಂದಲೂ ಶರಣರು ಚಿತ್ರದುರ್ಗದ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ.
ಷರತ್ತುಗಳೇನು?
1. ಚಿತ್ರದುರ್ಗಕ್ಕೆ ಮುರುಘಾ ಶ್ರೀ ಪ್ರವೇಶಿಸುವಂತಿಲ್ಲ.
2. ಪಾಸ್ ಪೋರ್ಟ್ ಅನ್ನು ಕೋರ್ಟ್ ವಶಕ್ಕೆ ನೀಡತಕ್ಕದ್ದು.
3. ಜಾಮೀನು ಸಿಕ್ಕರೂ ಸದ್ಯಕ್ಕೆ ಮುರುಘಾಶ್ರೀ ಬಿಡುಗಡೆ ಇಲ್ಲ.
4. ಮತ್ತೊಂದು ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಬಾಕಿ.
5. ಇಬ್ಬರು ಶ್ಯೂರಿಟಿಗಳನ್ನು ಒದಗಿಸತಕ್ಕದ್ದು.
6. ಕೋರ್ಟ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಬೇಕು.
7. ಇಂತಹ ಕೃತ್ಯಗಳನ್ನು ಪುನರಾವರ್ತನೆ ಮಾಡುವಂತಿಲ್ಲ.
8. ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡುವಂತಿಲ್ಲ.
9. ಮುರುಘಾ ಶ್ರೀ ಸಾಕ್ಷಿಗಳನ್ನು ಸಂಪರ್ಕಿಸುವಂತಿಲ್ಲ.
10. 2 ಲಕ್ಷ ರೂಪಾಯಿ ಮೌಲ್ಯದ ಬಾಂಡ್ ಒದಗಿಸಬೇಕು.ಜಾಮೀನು ಮಂಜೂರಾತಿ ಆದೇಶವನ್ನು ದುರ್ಬಳಕೆ ಮಾಡಿಕೊಳ್ಳಬಾರದು.ಕೋರ್ಟ್ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಬೇಕು. ಇಂತಹ ಕೃತ್ಯಗಳನ್ನು ಪುನರಾವರ್ತನೆ ಮಾಡುವಂತಿಲ್ಲ.ನ್ಯಾಯಾಲಯದ ವಿಧಿಸಿದ ಯಾವುದೇ ಷರತ್ತು ಉಲ್ಲಂಘಿಸಿದರೆ, ಜಾಮೀನು ತನ್ನಿಂದ ತಾನೇ ರದ್ದಾಗಲಿದೆ ಎಂಬ ಷರತ್ತು ವಿಧಿಸಲಾಗಿದೆ.
ಬಿಡುಗಡೆ ಭಾಗ್ಯ ಇಲ್ಲ.
ಮುರುಘಮಠದ ಶಿವಮೂರ್ತಿ ಶರಣರ ವಿರುದ್ಧ ಮತ್ತೊಂದು ಕ್ರಿಮಿನಲ್ ಪ್ರಕರಣ ಬಾಕಿಯಿರುವ ಕಾರಣ ಜಾಮೀನು ಮಂಜೂರಾದರೂ ಸದ್ಯಕ್ಕೆ ಬಿಡುಗಡೆ ಭಾಗ್ಯವಿಲ್ಲ.ಏಕೆಂದರೆ,ಅವರ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು, ಅವುಗಳ ವಿಚಾರಣೆ ನಡೆಯುತ್ತಿದೆ. ಮತ್ತೊಂದು ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ಬಾಕಿ ಇದ್ದು, ಅದರಲ್ಲಿ ಜಾಮೀನು ದೊರೆಯದೆ ಅವರು ಜೈಲಿನಿಂದ ಬಿಡುಗಡೆಯಾಗಲಾರರು.
ಜಾಮೀನು ಸಿಕ್ಕಿದ್ದು ಯಾವ ಪ್ರಕರಣದಲ್ಲಿ?
ನಜರಾಬಾದ್ನ 2 ಪ್ರಕರಣದಲ್ಲಿ 2 ದೂರು ದಾಖಲಾಗಿತ್ತು. 2 ಪ್ರಕರಣಕ್ಕೆ ಸಂಭಂಧಿಸಿದಂತೆ 1 ಎಫ್ಐಆರ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಮುರುಘ ಶ್ರೀಗೆ ಜಾಮೀನು ಸಿಕ್ಕಿದೆ ಎಂದು ಸಂತ್ರಸ್ತೆ ಪರ ವಕೀಲ ಶ್ರೀನಿವಾಸ್ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ದಾಖಲಾಗಿದ್ದ ಈ ಕೇಸ್ ಚಿತ್ರದುರ್ಗಕ್ಕೆ ವರ್ಗಾವಣೆ ಆಗಿತ್ತು.
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ,…
ಮಂಡ್ಯ: ರಾಜ್ಯದಲ್ಲಿ ಅತಿಭಾಷೆ ಹೆಚ್ಚು ಕನ್ನಡ ಭಾಷೆ ಮಾತನಾಡುವ ಸ್ಥಳ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, ಮೂರು ದಿನಗಳ ಕಾಲ…
ಬೆಳಗಾವಿ: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಲಾಗಿದೆ ಎಂದು…
ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಅದ್ಧೂರಿಯಾಗಿ ನೆರವೇರಿದ್ದು, ಇದರಲ್ಲಿ ಸುಮಾರು 157 ಕಲಾತಂಡಗಳು ಭಾಗವಹಿಸಿ ಸಮ್ಮೇಳನಕ್ಕೆ ಮೆರಗು…
ಮಂಡ್ಯ: ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ…