BREAKING NEWS

ಶೌಚಾಲಯದಲ್ಲಿ ವಿಡಿಯೋ ಪ್ರಕರಣದಲ್ಲಿ ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ : ಖುಷ್ಬೂ ಸುಂದರ್

ಉಡುಪಿ : ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಉಡುಪಿಗೆ ಭೇಟಿ ನೀಡಿದ್ದು, ಪ್ರಕರಣದ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಅವರ ಜೊತೆ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು. ಇನ್ನು ಈ ಬಗ್ಗೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇದೊಂದು ಸೂಕ್ಷ್ಮ ವಿಚಾರವಾಗಿದ್ದು,ಯಾರು ಇದನ್ನು ರಾಜಕೀಕರಣಗೊಳಿಸಬಾರದು. ಪೊಲೀಸರಿಂದ ಮಾಹಿತಿ ಪಡೆದಿದ್ದೇನೆ. ತನಿಖೆ ಇನ್ನು ಮುಗಿದಿಲ್ಲ. ಇದು ತುಂಬಾ ಸಮಯ ತೆಗೆದುಕೊಳ್ಳುತ್ತದೆ. ಒಂದು ದಿನದಲ್ಲಿ ನಿರ್ಧಾರ ಮಾಡಲು ಆಗಲ್ಲ. ಪೊಲೀಸರು ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ಹೇಳಿದರು.

ಕಾಲೇಜಿನವರು ಪತ್ರಿಕಾಗೋಷ್ಠಿ ಮಾಡಿ ವಿಡಿಯೋ ಡಿಲೀಟ್ ಮಾಡಿರುವ ಬಗ್ಗೆ ಹೇಳಿದ್ದಾರೆ. ಆಗ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡುವವರು ಕಾನೂನು ಬಗ್ಗೆ ಅರ್ಥ ಮಾಡಿಕೊಳ್ಳಬೇಕು. ಯಾರು ವದಂತಿಗಳನ್ನು ಹರಡಬಾರದು. ಯುವತಿಯರ ರಕ್ಷಣೆ ನಮಗೆ ಮುಖ್ಯ. ಯುವತಿಯರು ನಮ್ಮ ಕುಟುಂಬದವರು. ಅವರ ಸಮಸ್ಯೆಗಳನ್ನು ಬಗೆಹರಿಸಬೇಕಾಗಿರುವುದು ಮುಖ್ಯ. ನಾನು ಧಾರ್ಮಿಕ ಅಥವಾ ರಾಜಕೀಯ ಮಾಡಲು ಇಲ್ಲಿ ಬಂದಿಲ್ಲ, ಒಬ್ಬ ಪೋಷಕರಾಗಿ ಇದನ್ನು ಬಗೆಹರಿಸಬೇಕು. ರಾಜಕಾರಣಿಗಳು ರಾಜಕೀಯ ಪಕ್ಷಗಳು ಇದನ್ನು ರಾಜಕೀಯವಾಗಿ ಬಳಸಿಕೊಳ್ಳಬಾರದು ಎಂದರು.

ವಿದ್ಯಾರ್ಥಿಗಳು ನಮ್ಮ ದೇಶದ ಭವಿಷ್ಯ ಅವರನ್ನು ರಕ್ಷಣೆ ಮಾಡಬೇಕು. ನಾವು ಎಲ್ಲರೂ ಜವಾಬ್ದಾರಿಯಾಗಿ ವರ್ತಿಸಬೇಕು. ನಾನು ಯಾರನ್ನು ದೂಷಿಷಲು ಇಲ್ಲಿಗೆ ಬಂದಿಲ್ಲ. ನಾನು ಇಲ್ಲಿ ರಾಜಕಾರಣಿಯಾಗಿ ಬಂದಿಲ್ಲ. ಒಬ್ಬ ಮಹಿಳಾ ಆಯೋಗದ ಸದಸ್ಯೆಯಾಗಿ ಬಂದಿದ್ದೇನೆ. ಸಂತ್ರಸ್ತೆ ಹಾಗೂ ಆರೋಪಿಗಳನ್ನು ಭೇಟಿ ಮಾಡುತ್ತೇನೆ. ಅವರು ಯಾವ ಕಾರಣಕ್ಕೆ ವಿಡಿಯೋ ಮಾಡಿದ್ದಾರೆ, ಯಾರಾದರೂ ಹೇಳಿದಕ್ಕೆ ವಿಡಿಯೋ ಮಾಡಿದ್ದಾರಾ? ತಮಾಷೆಗೆ ವಿಡಿಯೋ ಮಾಡಿದ್ದ? ಈ ಬಗ್ಗೆ ಅವರಿಂದ ಮಾಹಿತಿ ಪಡೆಯುತ್ತೇನೆ. ಸದ್ಯ ಸಾಮಾಜಿಕ ಜಾಲತಾಣ ತಾಂತ್ರಿಕತೆಯಿಂದ ಪ್ರತಿಯೊಬ್ಬರು ತನಿಖಾಧಿಕಾರಿ ನ್ಯಾಯಾಧೀಶರಾಗಲು ಮುಂದಾಗಿದ್ದಾರೆ. ಇದನ್ನು ಯಾರು ಮಾಡಬೇಡಿ . ವದಂತಿಗಳನ್ನು ಯಾರು ಹರಡಬೇಡಿ. ಕಾನೂನಿಗೆ ಅದರ ಕೆಲಸ ಮಾಡಲು ಬಿಡಿ ಎಂದು ತಿಳಿಸಿದರು.

lokesh

Recent Posts

ನಾನು ಅಶ್ಲೀಲ ಪದ ಬಳಸಿಲ್ಲ : ಪೊಲೀಸರ ಬಳಿ ಸಿ.ಟಿ ರವಿ ಹೇಳಿಕೆ

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್‌ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…

4 mins ago

ವೈದ್ಯ ಮೇಲೆ ಹಲ್ಲೆ: ದೂರು ದಾಖಲು

ಮೈಸೂರು: ನಗರದ ಅಲ್‌ ಅನ್ಸಾರ್‌ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ  ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…

26 mins ago

ವಿಶೇಷ ಚೇತನ ಮಕ್ಕಳು ಸಮಾಜಕ್ಕೆ ಶಾಪವಲ್ಲ, ವರ; ದೀಪಕ್‌ ಅಭಿಮತ

' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…

2 hours ago

ಸಕ್ಕರೆ ನಗರಿ ಅಂದ ಹೆಚ್ಚಿಸಿದ ದೀಪಾಲಂಕಾರ

ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್‌ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…

2 hours ago

ಮಂಡ್ಯ ಸಮ್ಮೇಳನ | ನಗರ ದೀಪಾಲಂಕಾರಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ

ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…

2 hours ago

ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 34 ಲಕ್ಷ ರೂ. ವಂಚನೆ..!

ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…

3 hours ago