ಕೋವಿಡ್‌: ಮೈಸೂರಿನಲ್ಲಿ ಜನರ ಅನಗತ್ಯ ಓಡಾಟಕ್ಕೆ ಬ್ರೇಕ್‌, ಪೊಲೀಸರಿಂದ ವಾಹನ ತಪಾಸಣೆ

ಮೈಸೂರು: ಕೋವಿಡ್‌ ಪ್ರಕರಣಗಳ ಸಂಖ್ಯೆ ಏರುತ್ತಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಜನರ ಅನಗತ್ಯ ಓಡಾಟಕ್ಕೆ ಬ್ರೇಕ್‌ ನೀಡಲು ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಸುಖಾಸುಮ್ಮನೆ ವಾಹನಗಳಲ್ಲಿ ಓಡಾಡುವವರನ್ನು ತಡೆದು ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಅನಗತ್ಯವಾಗಿ ಹೊರಗಡೆ ಬಂದವರ ವಾಹನ ಸೀಜ್‌ ಮಾಡುತ್ತಿದ್ದು, ದಂಡವನ್ನೂ ವಿಧಿಸಲಾಗುತ್ತಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ಪೊಲೀಸರು ತಪಾಸಣೆ ಕಾರ್ಯ ಕೈಗೊಂಡಿದ್ದಾರೆ.

ಜಿಲ್ಲೆಯಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಕೋವಿಡ್‌ ನಿಯಮಗಳನ್ನು ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

× Chat with us