ಬೆಂಗಳೂರು : ರಾಜಕೀಯ ಮಾಡುವುದಾದರೆ ಮಂಡ್ಯ ಕ್ಷೇತ್ರದಿಂದಲೇ ಮಾಡುತ್ತೇನೆ. ಕ್ಷೇತ್ರ ಬದಲಾವಣೆ ಮಾತೇ ಇಲ್ಲ ಎಂದು ಸಂಸದೆ ಸುಮಲತಾ ಅಂಬರೀಷ್ ತಿಳಿಸಿದ್ದಾರೆ.
ಟಿಕೆಟ್ ವಿಚಾರವಾಗಿ ಬಿಜೆಪಿ ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಿ ಹಿಂದಿರುಗಿದ ಬಳಿಕ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಾಜಕೀಯ ಮಾಡುವುದಾದರೆ ಅದು ಮಂಡ್ಯದಿಂದ ಮಾತ್ರ ಬೇರೆಯಾವ ಕ್ಷೇತ್ರಕ್ಕೆ ಹೋಗುವ ಮಾತೇ ಇಲ್ಲ ಎಂದಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಪಕ್ಷದ ವರಿಷ್ಠರಿಗೂ ತಿಳಿಸಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರಿನಿಂದ ಸ್ಪರ್ಧೆ ಮಾಡಲು ಅವಕಾಶ ಬಂದಿತ್ತು. ಆದರೆ ಯಾವುದೇ ಕಾರಣಕ್ಕು ಒಪ್ಪಲಿಲ್ಲ ಎಂದರು.
ಈಗಲು ನನ್ನ ನಿಲುವು ಒಂದೆ. ರಾಜಕಾರಣ ಮಾಡುವುದಾದರೆ ಅದು ಮಂಡ್ಯದಿಂದ ಮಾತ್ರ ಎಂದು ಸ್ಪಷ್ಠಪಡಿಸಿದರು.





