ಚೆನ್ನೈ: ಕಾಲಿವುಡ್ ನಲ್ಲಿ ನಟ, ನಿರ್ದೇಶಕರಾಗಿ ಅಪಾರ ಖ್ಯಾತಿ ಗಳಸಿದ್ದ ಮನೋಬಾಲಾ (69) ಬುಧವಾರ (ಮೇ 3) ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಳೆದ ಕೆಲ ಸಮಯದಿಂದ ಶ್ವಾಸಕೋಶ ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚೆನ್ನೈನ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ಅವರ ನಿಧನದ ಸುದ್ದಿಯನ್ನು ನಟ-ನಿರ್ದೇಶಕ ಜಿಎಂ ಕುಮಾರ್ ಟ್ವಿಟರ್ ನಲ್ಲಿ ತಿಳಿಸಿದ್ದಾರೆ.
1979 ರಲ್ಲಿ ಭಾರತಿರಾಜ ಅವರ ʼಪುತಿಯ ವಾರ್ಪುಗಳ್ʼ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು, ನೂರಕ್ಕೂ ಅಧಿಕ ಸಿನಿಮಾದಲ್ಲಿ ಪೋಷಕ ಪಾತ್ರ, ಹಾಸ್ಯ ಪಾತ್ರಗಳಲ್ಲಿ ನಟಿಸಿ ಅಪಾರ ಮೆಚ್ಚುಗೆ ಪಡೆದುಕೊಂಡಿದ್ದರು.
ಕಮಲ್ ಹಾಸನ್ ಅವರ ಸಲಹೆಯ ಮೇರೆಗೆ ಭಾರತಿರಾಜ ಅವರಡಿಯಲ್ಲಿ ಸಹಾಯಕ ನಿರ್ದೇಶಕರಾಗಿಯೂ ಕೆಲಸ ಮಾಡಿದ್ದರು. ಇದಾದ ಬಳಿಕ 1982 ರಲ್ಲಿ ʼಆಗಾಯ ಗಂಗೈʼ ಚಿತ್ರದ ಮೂಲಕ ಮೊದಲ ಬಾರಿ ತಮ್ಮ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದರು.
ʼಪಿಳ್ಳೈ ನಿಲಾʼ, ʼಊರ್ಕಾವಲನ್ʼ, ʼಎನ್ ಪುರುಷಾನ್ತನ್ ಎನಕ್ಕು ಮಟ್ಟುಮ್ತಾನ್ʼ, ʼಕರುಪ್ಪು ವೆಳ್ಳೈʼ, ʼಮಲ್ಲು ವೆಟ್ಟಿ ಮೈನರ್ʼ ʼಪಾರಂಬರಿಯಂʼ.. ಹೀಗೆ 25 ಸಿನಿಮಾಗಳನ್ನು ನಿರ್ದೇಶನ ಮಾಡಿ ಮಿಂಚಿದ್ದರು. ಸಿನಿಮಾ ಮಾತ್ರವಲ್ಲದೆ ಧಾರಾವಾಹಿಗಳಲ್ಲೂ ನಟಿಸಿ, ಕಿರುತೆರೆಯ ಕೆಲ ಧಾರಾವಾಹಿಗಳನ್ನೂ ನಿರ್ದೇಶಿಸಿದ್ದರು. ನಿರ್ಮಾಪಕರಾಗಿಯೂ ಇಂಡಸ್ಟ್ರಿಯಲ್ಲಿ ಹೆಸರು ಮಾಡಿದ್ದರು.
2022 ರಲ್ಲಿ ʼಕುಕು ವಿತ್ ಕೊಮಾಲಿʼ ಕಾರ್ಯಕ್ರಮದ ಸ್ಪರ್ಧಿಗಳಲ್ಲಿ ಒಬ್ಬರಾಗಿ ಕಾಣಿಸಿಕೊಂಡಿದ್ದರು.
35 ವರ್ಷಗಳ ಸಿನಿ ಜರ್ನಿಯಲ್ಲಿ ಸುಮಾರು 450 ಹೆಚ್ಚಿನ ಸಿನಿಮಾಗಳಲ್ಲಿ ನಟಿಸಿರುವ ಅವರು,ಕಾಜಲ್ ಅಗರ್ವಾಲ್ ಅವರ ʼಘೋಸ್ಟಿʼ ಚಿತ್ರದಲ್ಲಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು.
ಪತ್ನಿ ಮತ್ತು ಮಗನನ್ನು ಅವರು ಅಗಲಿದ್ದಾರೆ.
ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…
ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…