ಮೈಸೂರು: ಐತಿಹಾಸಿಕ ಹಿನ್ನೆಲೆಯುಳ್ಳ ಜಗತ್ಪ್ರಸಿದ್ದ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿತಗೊಂಡಿದೆ. ಕೋಟೆ ಮಾರಮ್ಮ ದೇಗುಲ ಹಾಗೂ ಜಯಮಾರ್ತಾಂಡ ದ್ವಾರದ ನಡುವೆ ಕೋಟೆಯ ಗೋಡೆ ಕುಸಿದಿದೆ. ಮೈಸೂರು ಅರಮನೆಯ ಸುತ್ತಲೂ ನಿರ್ಮಾಣ ಮಾಡಿರುವ ಕೋಟೆಗೆ ದೊಡ್ಡ ಇತಿಹಾಸವಿದೆ. ಅಂದಿನ ಆಳರಸರ ಕಾಲದಲ್ಲಿ ಅರಮನೆಯ ರಕ್ಷಣೆಗಾಗಿ ನಿರ್ಮಿಸಲಾಗಿದ್ದ ಕೋಟೆ ನೋಡಲು ಸಹ ಆಕರ್ಷಕವಾಗಿದೆ. ಶತ್ರುಗಳ ದಾಳಿಯಿಂದ ರಕ್ಷಣೆ ಪಡೆಯಲು ನಿರ್ಮಿಸಲಾಗಿದ್ದ ಕೋಟೆ ಚಿತ್ತಾಕರ್ಷಕವಾಗಿತ್ತು.ಕೆಲ ದಿನಗಳಿಂದ ಶಿಥಿಲಾವಸ್ಥೆಯಲ್ಲಿತ್ತು ಈಗ ಕುಸಿತವಾಗಿದೆ.
ನಿರಂತರ ಮಳೆಗೆ ಅರಮನೆಯ ಕೋಟೆ ಕುಸಿಯುವ ಹಂತ ತಲುಪಿತ್ತು. ಕೋಟೆ ದುರಸ್ತಿಗೆ ಅರಮನೆ ಮಂಡಳಿ, ಜಿಲ್ಲಾಡಳಿತ ಮುಂದಾಗಬೇಕಿತ್ತು. ಯಾವ ಕ್ಷಣದಲ್ಲಾದ್ರೂ ಮೈಸೂರು ಅರಮನೆಯ ಐತಿಹಾಸಿಕ ಕೋಟೆ ಕುಸಿಯುವ ಭೀತಿ ಎದುರಾದರೂ ಯಾರೊಬ್ಬರೂ ಗಮನಿಸದ ಕಾರಣ ಇದೀಗ ಕೋಟೆ ಕುಸಿದು ಬಿದ್ದಿದೆ. ಈ ಬಾರಿ ಮೈಸೂರಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಅದರಲ್ಲೂ ಕಳೆದ 3 ತಿಂಗಳಿಂದ ಹೆಚ್ಚು ಮಳೆಯಾಗಿದ್ದು, ಇದ್ರ ಎಫೆಕ್ಟ್ ನಿಂದ ಶಿಥಿಲಾವಸ್ಥೆಯಲ್ಲಿದ್ದ ಕೋಟೆ ಕುಸಿತವಾಗಿದೆ. ಅರಮನೆ ಆಡಳಿತ ಮಂಡಳಿ ಈ ಬಗ್ಗೆ ತ್ವರಿತವಾಗಿ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.
ಸದ್ದು ಮಾಡದ ಕನ್ನಡ ಶಾಲೆಗಳ ಉಳಿವಿನ ಯೋಜನೆ ವಿಷಯ • ಚಿರಂಜೀವಿ ಸಿ. ಹುಲ್ಲಹಳ್ಳಿ ಮಂಡ್ಯ: ಕನ್ನಡ ನಾಡು ನುಡಿಗೆ…
'ಪುನಶ್ಚತನವಾಗಬೇಕಾಗಿರುವ ಸಾಹಿತ್ಯ ಪ್ರಕಾರಗಳು' ಕುರಿತ ವಿಚಾರಗೋಷ್ಠಿಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಗಾರ್ತಿ ಅಕೈ ಪದ್ಮಶಾಲಿ ಆಗ್ರಹ ಜಿ.ತಂಗಂ ಗೋಪಿನಾಥಂ ಮಂಡ್ಯ:…
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್ನಾಥ್ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…