BREAKING NEWS

ವಿಶ್ವಪ್ರಸಿದ್ಧ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿತ

ಮೈಸೂರುಐತಿಹಾಸಿಕ ಹಿನ್ನೆಲೆಯುಳ್ಳ ಜಗತ್ಪ್ರಸಿದ್ದ ಮೈಸೂರು ಅರಮನೆಯ ಕೋಟೆ ಗೋಡೆ ಕುಸಿತಗೊಂಡಿದೆ. ಕೋಟೆ ಮಾರಮ್ಮ ದೇಗುಲ ಹಾಗೂ ಜಯಮಾರ್ತಾಂಡ ದ್ವಾರದ ನಡುವೆ ಕೋಟೆಯ ಗೋಡೆ ಕುಸಿದಿದೆ. ಮೈಸೂರು ಅರಮನೆಯ ಸುತ್ತಲೂ ನಿರ್ಮಾಣ ಮಾಡಿರುವ ಕೋಟೆ‌‌ಗೆ ದೊಡ್ಡ ಇತಿಹಾಸವಿದೆ. ಅಂದಿನ ಆಳರಸರ ಕಾಲದಲ್ಲಿ ಅರಮನೆಯ ರಕ್ಷಣೆಗಾಗಿ ‌ನಿರ್ಮಿಸಲಾಗಿದ್ದ ಕೋಟೆ‌ ನೋಡಲು ಸಹ ಆಕರ್ಷಕವಾಗಿದೆ. ಶತ್ರುಗಳ ದಾಳಿಯಿಂದ ರಕ್ಷಣೆ ಪಡೆಯಲು ನಿರ್ಮಿಸಲಾಗಿದ್ದ ಕೋಟೆ ಚಿತ್ತಾಕರ್ಷಕವಾಗಿತ್ತು.ಕೆಲ ದಿನಗಳಿಂದ ಶಿಥಿಲಾವಸ್ಥೆಯಲ್ಲಿತ್ತು ಈಗ ಕುಸಿತವಾಗಿದೆ.

ನಿರಂತರ ಮಳೆಗೆ ಅರಮನೆಯ ಕೋಟೆ ಕುಸಿಯುವ ಹಂತ ತಲುಪಿತ್ತು. ಕೋಟೆ ದುರಸ್ತಿಗೆ ಅರಮನೆ ಮಂಡಳಿ, ಜಿಲ್ಲಾಡಳಿತ ಮುಂದಾಗಬೇಕಿತ್ತು. ಯಾವ ಕ್ಷಣದಲ್ಲಾದ್ರೂ ಮೈಸೂರು ಅರಮನೆಯ ಐತಿಹಾಸಿಕ ಕೋಟೆ ಕುಸಿಯುವ ಭೀತಿ ಎದುರಾದರೂ ಯಾರೊಬ್ಬರೂ ಗಮನಿಸದ ಕಾರಣ ಇದೀಗ ಕೋಟೆ ಕುಸಿದು ಬಿದ್ದಿದೆ. ಈ ಬಾರಿ ಮೈಸೂರಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಸುರಿಯುತ್ತಿದೆ. ಅದರಲ್ಲೂ ಕಳೆದ 3 ತಿಂಗಳಿಂದ ಹೆಚ್ಚು ಮಳೆಯಾಗಿದ್ದು, ಇದ್ರ ಎಫೆಕ್ಟ್ ನಿಂದ ಶಿಥಿಲಾವಸ್ಥೆಯಲ್ಲಿದ್ದ ಕೋಟೆ ಕುಸಿತವಾಗಿದೆ. ಅರಮನೆ ಆಡಳಿತ ಮಂಡಳಿ ಈ ಬಗ್ಗೆ ತ್ವರಿತವಾಗಿ ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ.

andolana

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

9 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

13 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

13 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

13 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

13 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

14 hours ago