ಬೆಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ರಾವಣನಂತೆ ಬಿಂಬಿಸಿ ಬಿಜೆಪಿ ಬಿಡುಗಡೆ ಗೊಳಿಸಿದ ಪೋಸ್ಟರ್ ಗೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿದೆ. ಬಿಜೆಪಿಯ ವರ್ತನೆ ಖಂಡಿಸಿ, ಶನಿವಾರ ನಗರದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ.
ಬಿಜೆಪಿ ಪಕ್ಷ ತನ್ನ ಅಧಿಕೃತ ಸಾಮಾಜಿಕ ಜಾಲತಾಣದಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿಬಗ್ಗೆ ಧರ್ಮವಿರೋಧಿತನದ ಪೋಸ್ಟರ್‌ಗಳನ್ನು ಬಳಸಿದ್ದಾರೆ ಎಂಬುದು ಕಾಂಗ್ರೆಸ್ ಆರೋಪವಾಗಿದೆ.
ಬಿಜೆಪಿ ನಡೆಯನ್ನು ಖಂಡಿಸಿ, ಶನಿವಾರ ಮಧ್ಯಾಹ್ನ 12 ಗಂಟೆಗೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ. ಈ ಪ್ರತಿಭಟನೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ, ವಿಧಾನ ಪರಿಷತ್ ಮುಖ್ಯ ಸಚೇತಕ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಸಚಿವರುಗಳು, ಸಂಸದರು, ಶಾಸಕರುಗಳು, ಮಾಜಿ ಶಾಸಕರುಗಳು, ಕೆಪಿಸಿಸಿ ಪದಾಧಿಕಾರಿಗಳು, ಪಕ್ಷದ ಹಿರಿಯ ಮುಖಂಡರುಗಳು ಭಾಗವಹಿಸಲಿದ್ದಾರೆ.
ರಾಹುಲ್ ಗಾಂಧಿ ಅವರನ್ನು ರಾವಣನಂತೆ ಬಿಂಬಿಸಿದ ಪೋಸ್ಟರ್ ವಿವಾದ ಸೃಷ್ಟಿಸಿದೆ. ಪೋಸ್ಟರ್ ನಲ್ಲಿ ನವಯುಗದ ರಾವಣ ಎಂದು ಬಿಜೆಪಿ ಬಿಂಬಿಸಿದೆ.. ಈ ವಿವಾದಾತ್ಮಕ ಪೋಸ್ಟರ್‌ನ್ನು ಬಿಜೆಪಿ ತನ್ನ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದೆ. ಈ ಟ್ವೀಟ್ ಈಗ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…
ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…
ಬೆಳಗಾವಿ: ಗಡಿನಾಡು ಬೆಳಗಾವಿ ಜಿಲ್ಲೆಯ ಜನರ ಬಹುದಿನದ ಬೇಡಿಕೆ ಈಡೇರಿದೆ. ಬೆಳಗಾವಿ ಮತ್ತು ನವಿ ಮುಂಬೈ ನಡುವೆ ನೇರ ವಿಮಾನ…