ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖ ಯೋಜನೆಯಾಗಿದ್ದ ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಚಾಲನೆ ಸಿಗಬೇಕಿತ್ತು. ಕಳೆದ ಕ್ಯಾಬಿನೆಟ್ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಇದನ್ನು ಘೋಷಣೆ ಮಾಡಿದ್ದು ಮಾತ್ರವಲ್ಲದೆ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೂಡ ಗುರುವಾರ ಇದರ ಮಾಹಿತಿ ನೀಡಿದ್ದರು.
ಯಾವ ರೀತಿಯಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು ಯಾರೆಲ್ಲಾ ಸಲ್ಲಿಕೆ ಮಾಡಬೇಕು ಎನ್ನುವುದರ ಬಗ್ಗೆ ಪತ್ರಿಕಾ ಪ್ರಕಟಣೆ ಕೂಡ ನೀಡಲಾಗಿತ್ತು. ಆದರೆ, ಗುರುವಾರ ಸರ್ಕಾರದ ಕ್ಯಾಬಿನೆಟ್ ಸಭೆಯ ಬಳಿಕ ಈ ಗ್ಯಾರಂಟಿ ಜಾರಿ ಮುಂದೂಡಿಕೆಯಾಗಿದ್ದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನಿಷ್ಠ ನಾಲ್ಕೈದು ದಿನಗಳ ಕಾಲ ಗೃಹ ಲಕ್ಷ್ಮೀ ಯೋಜನೆ ಮುಂದೂಡಿಕೆಯಾಗಿದ್ದಾಗಿ ತಿಳಿಸಿದ್ದಾರೆ. ಶುಕ್ರವಾರ ಯೋಜನೆ ಲಾಂಚ್ ಆಗೋದಿಲ್ಲ ಎಂದು ತಿಳಿಸಿದ್ದಾರೆ. ಯೋಜನೆ ಅರ್ಜಿ ಭರ್ತಿ ಮಾಡಲು ಬೇರೆ ಬೇರೆ ಅವಕಾಶ ಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
ಇದಕ್ಕೂ ಮುನ್ನ ನೀಡಿದ್ದ ಪ್ರತಿಕಾ ಪ್ರಕಟಣೆಯಲ್ಲಿ ಗೃಹಲಕ್ಷ್ಮೀ ಯೋಜನೆಯ ನೋಂದಣಿ ಶುಕ್ರವಾರದಿಂದ ಆರಂಭವಾಗಲಿದೆ ಎಂದು ತಿಳಿಸಲಾಗಿತ್ತು. ಬೆಂಗಳೂರು ಒನ್, ಗ್ರಾಮ್ ಒನ್‌ನಲ್ಲಿ ನೋಂದಣಿಗೆ ಅವಕಾಶ ಇರಲಿದೆ. ಸೇವಾಸಿಂಧು ಪೋರ್ಟಲ್‌ನಲ್ಲಿಯೂ ನೋಂದಣಿಗೆ ಅವಕಾಶವಿದೆ. ಇದಕ್ಕೆ ಬ್ಯಾಂಕ್, ಆಧಾರ್,ಪತಿ ಅಥವಾ ಮಗ ತೆರಿಗೆದಾರರು ಅಲ್ಲ ಎಂದು ತೋರಿಸುವ ಒಂದು ಪ್ರತಿಯನ್ನು ಲಗತ್ತಿಸಬೇಕಾಗಿದೆ. ಗೃಹಲಕ್ಷ್ಮಿ ಯೋಜನೆಯ ಮೂಲಕ ಮುಂದಿನ ಐದು ವರ್ಷಗಳ ಕಾಲ ಮನೆ ಒಡತಿಯ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು 2,000 ರೂ. ಜಮೆ ಮಾಡಲಾಗುತ್ತದೆ. ಮುಂದಿನ ಆಗಸ್ಟ್ 15ರಿಂದ ಪ್ರತಿ ತಿಂಗಳು ರಾಜ್ಯದಲ್ಲಿರುವ ಬಿಪಿಎಲ್ ಹಾಗೂ ಎಪಿಎಲ್ ಕುಟುಂಬಗಳ ಮನೆ ಒಡತಿಯ ಖಾತೆಗೆ 2000 ರೂಪಾಯಿ ಹಣ ವರ್ಗಾವಣೆಯಾಗಲಿದೆ.
ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…
ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್ ಪೊಲೀಸ್…