ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್‌ಐ ಪರೀಕ್ಷೆಯನ್ನು ಮುಂದೂಡಲಾಗಿದೆ.
ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿವಿಲ್), ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿತ್ತು. ಅದರಂತೆ ಮೇ. 8 ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.
ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ಮೇ.8ಕ್ಕೆ ನಡೆಯಬೇಕಿದ್ದ ಎಲ್ಲ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷೆಯ ದಿನಾಂಕವನ್ನು ಪ್ರಾಧಿಕಾರದ ವೈಬ್‌ಸೈಟ್‌ನಲ್ಲಿ ಹೊರಡಿಸಲಾಗುವುದು ಎಂದು ಪ್ರಕಟಣೆ ಹೊರಡಿಸಿದೆ.
ಯುಪಿಎಸ್‌ಸಿ ಪರೀಕ್ಷೆಯೂ ಮುಂದೂಡಿಕೆ :ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗದಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. 2024ನೇ ಸಾಲಿನ ಪೂರ್ವಭಾವಿ ಪರೀಕ್ಷೆಯನ್ನು ಮೇ 26ರ ಬದಲು ಜೂನ್ 16ರಂದು ನಡೆಸಲಾಗುವುದು ಎಂದು ಯುಪಿಎಸ್‌ಸಿ ತಿಳಿಸಿದೆ. ಮೇ 26ರಂದು ನಡೆಸಲಾಗುವುದು ಎಂದು ಯುಪಿಎಸ್‌ಸಿಯು ಮಾರ್ಚ್ 19ರಂದು ಘೋಷಿಸಿತ್ತು. ಈಗ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.