BREAKING NEWS

ಪಿಎಸ್‌ಐ ಪರೀಕ್ಷೆ ಮುಂದೂಡಿಕೆ !

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 8 ಕ್ಕೆ ನಿಗದಿಯಾಗಿದ್ದ ಪಿಎಸ್‌ಐ ಪರೀಕ್ಷೆಯನ್ನು ಮುಂದೂಡಲಾಗಿದೆ.

ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌ (ಸಿವಿಲ್)‌, ಕಲ್ಯಾಣ ಕರ್ನಾಟಕದ ಪ್ರದೇಶದ ಸ್ಥಳೀಯ ಹುದ್ದೆಗಳನ್ನು ಒಳಗೊಂಡಂತೆ ಒಟ್ಟು 402 ಖಾಲಿ ಹುದ್ದೆಗಳ ನೇರ ನೇಮಕಾತಿಯ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಿದ್ಧತೆ ನಡೆಸಿತ್ತು. ಅದರಂತೆ ಮೇ. 8 ಕ್ಕೆ ಪರೀಕ್ಷಾ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು.

ಆದರೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ದೇಶಾದ್ಯಂತ ನೀತಿ ಸಂಹಿತೆ ಜಾರಿಯಲ್ಲಿದೆ. ಈ ಕಾರಣದಿಂದ ಮೇ.8ಕ್ಕೆ ನಡೆಯಬೇಕಿದ್ದ ಎಲ್ಲ ಪರೀಕ್ಷೆಯನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷೆಯ ದಿನಾಂಕ‌ವನ್ನು ಪ್ರಾಧಿಕಾರದ ವೈಬ್‌ಸೈಟ್‌ನಲ್ಲಿ ಹೊರಡಿಸಲಾಗುವುದು ಎಂದು ಪ್ರಕಟಣೆ ಹೊರಡಿಸಿದೆ.

ಯುಪಿಎಸ್‌ಸಿ ಪರೀಕ್ಷೆಯೂ ಮುಂದೂಡಿಕೆ :ಲೋಕಸಭೆ ಚುನಾವಣೆ  ಹಿನ್ನೆಲೆಯಲ್ಲಿ ಕೇಂದ್ರ ಲೋಕಸೇವಾ ಆಯೋಗದಪೂರ್ವಭಾವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. 2024ನೇ ಸಾಲಿನ ಪೂರ್ವಭಾವಿ ಪರೀಕ್ಷೆಯನ್ನು ಮೇ 26ರ ಬದಲು ಜೂನ್‌ 16ರಂದು ನಡೆಸಲಾಗುವುದು ಎಂದು ಯುಪಿಎಸ್‌ಸಿ ತಿಳಿಸಿದೆ. ಮೇ 26ರಂದು ನಡೆಸಲಾಗುವುದು ಎಂದು ಯುಪಿಎಸ್‌ಸಿಯು ಮಾರ್ಚ್‌ 19ರಂದು ಘೋಷಿಸಿತ್ತು. ಈಗ ಚುನಾವಣೆ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿದೆ.

 

 

 

andolanait

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

5 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

6 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

7 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

8 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

11 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

11 hours ago