ಬೆಂಗಳೂರು: ಪ್ರಶಾಂತ್ ನೀಲ್ ಆ್ಯಕ್ಷನ್ ಕಟ್ ಹೇಳಿರುವ ‘ಸಲಾರ್’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆಯಾಗಿದೆ. ಇದರಿಂದ ಪ್ರಭಾಸ್ ಅಭಿಮಾನಿಗಳಲ್ಲಿ ಕುತೂಹಲ ಮತ್ತಷ್ಟು ಹೆಚ್ಚಿದೆ.
ಸಿನಿಮಾ 2023ರ ಸೆ.28ರಂದು ವಿಶ್ವದಾದ್ಯಂತ ತೆರೆಕಾಣಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿ ಘೋಷಣೆ ಮಾಡಿದೆ.
ವಿಜಯ್ ಕಿರಗಂದೂರು ತಮ್ಮ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯಡಿ ಸಲಾರ್ ಸಿನಿಮಾವನ್ನೂ ನಿರ್ಮಾಣ ಮಾಡುತ್ತಿದ್ದಾರೆ. ₹400 ಕೋಟಿಗೂ ಮೀರಿದ ಬಜೆಟ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗುತ್ತಿದೆ. ತನ್ನ ಹೈವೋಲ್ಟೇಜ್ ಆ್ಯಕ್ಷನ್ ದೃಶ್ಯಗಳಿಂದ ಸಿನಿಮಾ ಸಾಕಷ್ಟು ಸುದ್ದಿಯಲ್ಲಿದೆ.
‘ಸಲಾರ್’ ಪಕ್ಕಾ ಆ್ಯಕ್ಷನ್ ಚಿತ್ರವಾಗಿದ್ದು ಭಾರತವಲ್ಲದೆ, ಯೂರೋಪ್, ಆಫ್ರಿಕಾ ಮುಂತಾದ ಕಡೆ ಚಿತ್ರೀಕರಣವಾಗಿದೆ. ಈ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದ್ದು, ಈಗಾಗಲೇ ಮೊದಲ ಭಾಗದ ಚಿತ್ರೀಕರಣ ಸಂಪೂರ್ಣವಾಗಿದೆ.
ಈ ಚಿತ್ರವು ಐದು ಭಾಷೆಗಳಲ್ಲಿ ಮೂಡಿ ಬರಲಿದ್ದು, ನಾಯಕಿಯಾಗಿ ಶ್ರುತಿ ಹಾಸನ್ ಅಭಿನಯಿಸಿದ್ದಾರೆ. ಪೃಥ್ವಿರಾಜ್ ಸುಕುಮಾರನ್, ಜಗಪತಿ ಬಾಬು, ಈಶ್ವರಿ ರಾವ್, ಶ್ರೀಯಾ ರೆಡ್ಡಿ ಮುಂತಾದ ಖ್ಯಾತ ಕಲಾವಿದರ ದಂಡೇ ಈ ಚಿತ್ರಕ್ಕೆ ರವಿ ಬಸ್ರೂರು ಸಂಗೀತವಿದೆ
ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ…
ಏ.೨ರಿಂದ ೨೮ ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ; ೩೦೦ಕ್ಕೂ ಅಧಿಕ ತಂಡಗಳು ಪಾಲ್ಗೊಳ್ಳುವ ನಿರೀಕ್ಷೆ ಮಡಿಕೇರಿ:ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ…
ಮೈಸೂರು: ನಗರದ ಹೊರವಲಯದ ನಾಲ್ಕು ದಿಕ್ಕುಗಳಲ್ಲಿರುವ ಹಲವು ಪ್ರದೇಶಗಳನ್ನು ಸೇರಿಸಿ ಗ್ರೇಡ್- ೧ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ರಚಿಸಲು ರಾಜ್ಯಸರ್ಕಾರ…
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…