ಹಣ, ಹೆಣದ ಮೇಲೆ ಕಾಂಗ್ರೆಸ್‌ನವ್ರು ರಾಜಕೀಯ ಮಾಡ್ತಾರೆ: ಪ್ರಹ್ಲಾದ್‌ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್‌ನವರು ಹಣ, ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಟೀಕಿಸಿದರು.

ಕಾಂಗ್ರೆಸ್‌ ಆರೋಪಗಳಿಗೆ ಪ್ರತಿಕ್ರಿಯಿಸಿದ ಅವರು, ಯಾವುದೇ ದೇಶದಲ್ಲಿ ಕೊವಿಡ್ ವಿಚಾರದಲ್ಲಿ ರಾಜಕಾರಣ ಮಾಡಿಲ್ಲ. ರಾಜಸ್ಥಾನ ಮತ್ತು ಪಂಜಾಬ್‌ಲ್ಲಿ ದೊಡ್ಡ ಪ್ರಮಾಣದಲ್ಲಿ ಲಸಿಕೆ ನಷ್ಟ ಆಗಿದೆ. ಎರಡು ವರ್ಷವಾದರೂ ಕಾಂಗ್ರೆಸ್​ನವರಿಗೆ ತಮ್ಮ ಪಕ್ಷದ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಕೇವಲ ಬೇಜಾವಾಬ್ದಾರಿತನದ ಹೇಳಿಕೆಗಳನ್ನು ನೀಡುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಸಚಿವ ಸಂಪುಟದ ಬಗ್ಗೆ ಮಾತನಾಡಿದ ಅವರು, ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆಯಾಗಿಲ್ಲ. ಸಂಪುಟ ವಿಸ್ತರಣೆಯ ಬಗ್ಗೆ ನನಗೆ ಮಾಹಿತಿಯೇ ಇಲ್ಲ. ಈ ಬಗ್ಗೆ ಪ್ರಧಾನಿ ಮೋದಿ ನಿರ್ಧಾರ ಮಾಡುತ್ತಾರೆ.

× Chat with us