ಮಂಡ್ಯ : ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನಿರಂತರ ನೀರು ಹರಿಸುತ್ತಿರುವ ಬೆನ್ನಲ್ಲೇ ಮೈಸೂರಿನ ರಾಜವಂಶಸ್ಥೆ ಪ್ರಮೋದಾದೇವಿ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿ ವೀಕ್ಷಣೆ ಮಾಡಿದ್ದಾರೆ.
ಕೆಆರ್‌ಎಸ್ ಡ್ಯಾಂನಲ್ಲಿ ನೀರು ಕಡಿಮೆ ಇರುವ ಹಿನ್ನೆಲೆ ತಮಿಳುನಾಡಿಗೆ ನೀರು ಹರಿಸದಂತೆ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ಈ ಪ್ರತಿಭಟನೆಯ ನಡುವೆಯೂ ಅ.15ರವರೆಗೆ ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ.
ಈ ಬೆನ್ನಲ್ಲೇ ಮೈಸೂರಿನ ರಾಜಮಾತೆ ಪ್ರಮೋದಾದೇವಿ ಒಡೆಯರ್ ಮಂಡ್ಯದ ಕೆಆರ್‌ಎಸ್ ಡ್ಯಾಂಗೆ ಭೇಟಿ ನೀಡಿದ್ದು, ಮಳೆಗಾಲದಲ್ಲೂ ಬರಿದಾದ ಡ್ಯಾಂ ನೋಡಿ ಬೇಸರಗೊಂಡಿದ್ದಾರೆ.
ರಾಜಮಾತೆ ಒಬ್ಬರೇ ಡ್ಯಾಂ ಬಳಿ ಭೇಟಿ ನೀಡಿ ವೀಕ್ಷಣೆ ನಡೆಸಿದ್ದಾರೆ. ಬರಿದಾಗಿರುವ ಡ್ಯಾಂ ನೋಡಿ ಬೇಸರಗೊಂಡ ಪ್ರಮೋದಾದೇವಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದಾರೆ.