ಇಂದು ಹೊಸ ಸಂಸತ್ ಭವನದ ಒಳಗೆ ದುಷ್ಕರ್ಮಿಗಳು ನುಗ್ಗಿದ ಘಟನೆ ಇಡೀ ದೇಶದ ರಾಜಕಾರಣವನ್ನು ಅಲ್ಲೋಲ ಕಲ್ಲೋಲವಾಗುವಂತೆ ಮಾಡಿದ್ದು, ನಾಲ್ವರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಇದರಲ್ಲಿ ಮೈಸೂರು ಮೂಲದ ಮನೋರಂಜನ್ ಎಂಬುವವನೂ ಸಹ ಶಾಮೀಲಾಗಿದ್ದು, ಸಾಗರ್ ಶರ್ಮಾ, ಅಮೋಲ್ ಹಾಗೂ ನೀಲಂ ಅಜಾದ್ ಇನ್ನಿತರ ಬಂಧಿತ ಆರೋಪಿಗಳಾಗಿದ್ದಾರೆ.
ಈ ನಾಲ್ವರ ಪೈಕಿ ಸಾಗರ್ ಶರ್ಮಾ ವಿಸಿಟರ್ಸ್ ಪಾಸ್ ಬಳಸಿ ಸಂಸತ್ ಒಳಗೆ ಪ್ರವೇಶಿಸಿದ್ದು, ಸಂಸತ್ ಪ್ರವೇಶಿಸಲು ಮೈಸೂರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿಯಿಂದ ಪಾಸ್ ಪಡೆದಿದ್ದಾನೆ. ಹೀಗೆ ಪ್ರತಾಪ್ ಸಿಂಹ ಕಚೇರಿಯಿಂದ ಪಾಸ್ ಪಡೆದವರು ಈ ರೀತಿ ಕೃತ್ಯ ಎಸಗಿದ್ದು, ಕೂಡಲೇ ಪ್ರತಾಪ್ ಸಿಂಹ ಅವರನ್ನು ಅಮಾನತು ಮಾಡಬೇಕು ಎಂಬ ಕೂಗು ಕೇಳಿ ಬರುತ್ತಿದೆ.
ಒಂದೆಡೆ ತಮ್ಮ ವಿರುದ್ಧ ಹೇಳಿಕೆಗಳು ಹಾಗೂ ಪ್ರತಿಭಟನೆಗಳು ನಡೆಯುತ್ತಿದ್ದು, ಮತ್ತೊಂದೆಡೆ ಸಾಮಾಜಿಕ ಜಾಲತಾಣದಲ್ಲಿ ಪ್ರತಾಪ್ ಸಿಂಹ ದೆಹಲಿಯ ಹಳೆ ಸಂಸತ್ ಭವನದ ಎದುರು ಕಾಲೇಜು ವಿದ್ಯಾರ್ಥಿಗಳ ಜತೆ ಇರುವ ಫೋಟೊವನ್ನು ಟ್ವಟರ್‌ನಲ್ಲಿ ಹಂಚಿಕೊಂಡಿದ್ದಾರೆ. “ವಿದ್ಯಾವರ್ಧಕ ಕಾಲೇಜಿನ ಪೊಲಿಟಿಕಲ್ ಸೈನ್ಸ್ ಸ್ಟೂಡೆಂಟ್ಸ್ ಜತೆಗೆ ಸೋಮವಾರ ಕ್ಲಿಕ್ಕಿಸಿಕೊಂಡ ಫೋಟೊʼ ಎಂದು ಕ್ಯಾಪ್ಷನ್ ಬರೆದುಕೊಂಡಿದ್ದಾರೆ ಪ್ರತಾಪ್ ಸಿಂಹ.
ಬೆಂಗಳೂರು : ಬಂಡೀಪುರ ಮತ್ತು ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭಿಸಲು ಮತ್ತು ಧಾರಣಾ ಶಕ್ತಿ ಮತ್ತು ಹುಲಿಗಳು ನಾಡಿನತ್ತ…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತವರು ಜಿಲ್ಲೆ ಮೈಸೂರಿನಲ್ಲಿ ಎರಡು ದಿನಗಳ ಕಾಲ ಪ್ರವಾಸ ಹಮ್ಮಿಕೊಂಡಿದ್ದಾರೆ. ಜ.5ರಂದು ಬೆಳಿಗ್ಗೆ…
ಮೈಸೂರು : ಅರಮನೆ ನಗರಿ ಮೈಸೂರಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಚಾಮುಂಡಿಬೆಟ್ಟದ ಸಂರಕ್ಷಣೆ ಮತ್ತು ಉಳಿವಿಗಾಗಿ ಜ.4ರಂದು(ಭಾನುವಾರ) ಜಾಗೃತಿ ಆಂದೋಲನವನ್ನು…
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…