ಬೆಂಗಳೂರು: ಇಡೀ ಕರ್ನಾಟಕದಲ್ಲೇ ಸದ್ಯ ಹೈವೋಲ್ವೇಜ್ ಕ್ಷೇತ್ರ ಎಂದರೆ ವರುಣಾ, ಒಂದೆಡೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದು ನನ್ನ ಕೊನೇ ಚುನಾವಣೆ, ಮತ್ತೊಮ್ಮೆ ಆಶೀರ್ವಾದ ಮಾಡಿ ಎಂದು ಅಖಾಡಕ್ಕೆ ಧುಮುಕಿದ್ದಾರೆ. ಇನ್ನೊಂದೆಡೆ ಹೈಕಮಾಂಡ್ ನಿರ್ಧಾರಕ್ಕೆ ತಲೆ ಬಾಗಿದ ವಿ. ಸೋಮಣ್ಣ ಸಿದ್ದರಾಮಯ್ಯ ಎದುರು ತೊಡೆ ತಟ್ಟಿ ನಿಂತಿದ್ದಾರೆ.
ಇಷ್ಟು ದಿನ ಸಿದ್ದರಾಮಯ್ಯಗೆ ಅವಕಾಶ ನೀಡಿದ್ದೀರಿ, ನನಗೆ ಒಮ್ಮೆ ಆಶೀರ್ವಾದ ಮಾಡಿ ಎಂದು ಸೋಮಣ್ಣ ಪ್ರಚಾರ ನಡೆಸುತ್ತಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ ಪರ ದೊಡ್ಮನೆ ಕುಡಿ ಡಾ. ರಾಜ್‌ಕುಮಾರ್ ಪುತ್ರ ಶಿವಣ್ಣ ಮತಬೇಟೆಗೆ ಮುಂದಾಗಿರುವುದು ಬಿಜೆಪಿ ನಿದ್ದೆಗೆಡಿಸಿದೆ. ಈ ಬಗ್ಗೆ ಸಚಿವ ವಿ. ಸೋಮಣ್ಣ ಬಹಿರಂಗವಾಗಿ ಶಿವಣ್ಣ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ವಿ. ಸೋಮಣ್ಣ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಶಿವಣ್ಣನ ನಡೆ ಬಗ್ಗೆ ಟ್ವಿಟ್ ಮಾಡಿದ್ದಾರೆ. ‘ಪುನೀತ್ ರಾಜಕುಮಾರ್ ಹೆಸರಿನಲ್ಲಿ ಬಡವರಿಗಾಗಿ ಆಸ್ಪತ್ರೆ ಕಟ್ಟಿದ ವಿ. ಸೋಮಣ್ಣ, ಮನಮೆಚ್ಚಿ ಶ್ಲಾಘಿಸಿದ ರಾಘಣ್ಣ. ಸಿದ್ರಾಮಣ್ಣ ಪರವಾಗಿ ಪ್ರಚಾರಕ್ಕಿಳಿದ ಶಿವಣ್ಣ! ಅವರವರ ಭಾವ ಭಕುತಿಗೆ ‘ ಎಂದು ಪ್ರತಾಪ್ ಸಿಂಹ ಟ್ವಿಟ್ ಮಾಡಿರುವುದು ಭಾರೀ ಟೀಕೆಗೆ ಗುರಿಯಾಗಿದೆ.
ಅದರಲ್ಲೂ ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್ ಪ್ರಚಾರ ಮಾಡುತ್ತಿರುವ ಫೋಟೋ, ರಾಘಣ್ಣ ಪುನೀತ್ ಹೆಸರಿನಲ್ಲಿ ಆಸ್ಪತ್ರೆ ಕಟ್ಟಿಸಿದ ಸೋಮಣ್ಣರನ್ನು ಶ್ಲಾಘಿಸುತ್ತಿರುವ ವಿಡಿಯೋ ಟ್ವಿಟ್ ಮಾಡಿದ್ದಾರೆ. ಈ ಪೋಸ್ಟ್ ಈಗ ವೈರಲ್ ಆಗಿದ್ದು, ದೊಡ್ಡನೆ ಕುಟುಂಬದ ಮಧ್ಯೆಯೇ ಪ್ರತಾಪ್ ಸಿಂಹ ಬೆಂಕಿ ಹಚ್ಚಲು ಮುಂದಾಗಿದ್ದಾರೆ ಎಂದು ಶಿವಣ್ಣ ಫ್ಯಾನ್ಸ್ ಕೆಂಡಕಾರಿದ್ದಾರೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…