BREAKING NEWS

ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು : ಸಚಿವ ಎಂಬಿ ಪಾಟೀಲ್‌

ಬೆಂಗಳೂರು : ಸ್ವಪಕ್ಷ-ವಿಪಕ್ಷದವರಿಗೂ ಬೇಕಾಬಿಟ್ಟಿ ಮಾತನಾಡಿಕೊಂಡು ದಿನ ಕಳೆಯುವುದೇ ಸಂಸದ ಪ್ರತಾಪ ಸಿಂಹ ದಿನಚರಿಯಾಗಿದೆ ಎಂದು ಬೃಹತ್‌ ಹಾಗೂ ಮಧ್ಯಮ ಕೈಗಾರಿಕ ಸಚಿವ ಎಂಬಿ ಪಾಟೀಲ್‌ ಹರಿಹಾಯ್ದಿದ್ದಾರೆ.

ಬೆಂಗಳೂರಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪ್ರತಾಪ್ ಸಿಂಹ ಅವರಿಗೆ ಚೇಲಾಗಿರಿ ಮಾಡಿ ರೂಢಿ ಇರಬೇಕು. ನಾನು ಕಾಂಗ್ರೆಸ್ ‌ಪಕ್ಷದ ಚೇಲಾ, ಬೇರೆ ಯಾರಿಗೂ ಚೇಲಾ ಅಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯರಿಗಿಂತ ಮುಂಚೆ ನಾನು ಕಾಂಗ್ರೆಸ್​ಗೆ ಬಂದವನು. ಆರು ಬಾರಿ ಶಾಸಕ, ಒಂದು ಬಾರಿ ಸಂಸದನಾಗಿ ಕೆಲಸ ಮಾಡಿದ್ದೇನೆ. ಪ್ರತಾಪ್ ಸಿಂಹಗೆ ಚೇಲಾ ಕೆಲಸ ಮಾಡಿದ ಅನುಭವ ಇರಬೇಕು ಎಂದು ತಿರುಗೇಟು ನೀಡಿದ್ದಾರೆ.

ಇವರು ಚೇಲಾ ಅಂತಾರೆ, ಬಿ ಎಲ್ ಸಂತೋಷ್ ಚೇಳು ಅಂತಾರೆ. ಬಹುಶಃ ಸಂತೋಷ್ ಬುಟ್ಟಿಯಲ್ಲಿ ಇಂಥ ಚೇಳುಗಳೇ ಬಹಳ ಇರಬೇಕು. ಇವತ್ತು ಅವರಿಗೆ ಕಡಿಯಿರಿ, ನಾಳೆ ಇವರಿಗೆ ಕಡಿಯಿರಿ ಅಂತ ಸಂತೋಷ್ ಚೇಳು ಬಿಡುತ್ತಾರೆ ಅನಿಸುತ್ತದೆ. ಪ್ರತಾಪ್ ಸಿಂಹ ಅವರಿಗೆ ಸದ್ಬುದ್ಧಿ ಕೊಡಲಿ.ಇದನ್ನೆಲ್ಲ ನಿಲ್ಲಿಸಿ ಅಕ್ಕಿ ಕೊಡಿಸುವ ಕೆಲಸ ಮಾಡಲಿ. ಇನಿಷಿಯೇಟಿವ್​ ತೆಗೆದುಕೊಂಡು ಅಕ್ಕಿ ಕೊಡಿಸುವ ಪ್ರಯತ್ನ ಮಾಡಲಿ ಎಂದರು.

ನನ್ನ ಹೆಗಲ ಮೇಲೆ ಯಾರೂ ಬಂದೂಕು ಇಟ್ಟು ಹೊಡೆಯಬೇಕಿಲ್ಲ. ಯಾರಿಗಾದರೂ ಹೊಡೆಯಬೇಕು ಅಂದರೇ ನಾನೇ ಹೊಡೆಯುತ್ತೇನೆ. ನಾನು ವಿಜಯಪುರದವನು, ಆ ಶಕ್ತಿ ನನಗೆ ಇದೆ ಎಂದು ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ ಮಾಡಿದರು.

ಇಂತಹ ಮಾನಸಿಕ ಸ್ಥಿತಿಯನ್ನು ಪ್ರತಾಪ್ ಸಿಂಹ ಎಲ್ಲಿ ಕಲಿತರೋ.ಅವರ ಸಂಸದ ಸ್ಥಾನ ಇನ್ನು 10 ತಿಂಗಳು ಅಷ್ಟೇ ಇದೆ. ದಿನವೆಲ್ಲ ಅವರಿಗೆ ಉತ್ತರ ಕೊಡುತ್ತಾ ಇರಲು ಆಗಲ್ಲ. ಪ್ರತಾಪ್ ಸಿಂಹ ಮನಸ್ಥಿತಿ ಬಗ್ಗೆ ಪಾಪ ಅನಿಸುತ್ತೆ. ಎಲ್ಲ ಜಾತಿಯ ಜನರನ್ನು ಒಟ್ಟಾಗಿ ಕೊಂಡೊಯ್ಯುವ ಹಿನ್ನೆಲೆ ನಮ್ಮದು. ಎಂ.ಬಿ.ಪಾಟೀಲ್​ ಬಳಿ ಇರೋದು ಚಿಲ್ಲರೆ ಖಾತೆ ಎಂದು ಹೇಳಿದ್ದಾರೆ. ಬೃಹತ್ ಕೈಗಾರಿಕೆ ಚಿಲ್ಲರೆ ಖಾತೆ ಎಂಬುದನ್ನು ಪ್ರಧಾನಿ ಬಳಿ ಕೇಳಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನೂ ಪ್ರತಾಪ್ ಸಿಂಹ ವಿರುದ್ಧ ಟ್ಟೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಬಿಎಲ್ ಸಂತೋಷನ ಮೌತ್ ಪೀಸ್ ಪ್ರತಾಪ್ ಸಿಂಹ ಅವರೇ ನಮ್ಮ ಸರ್ಕಾರದ, ನಮ್ಮ ಸಿಎಂ ಬಗ್ಗೆ ತಲೆ ಕೆಡಿಸಿಕೊಳ್ಳುವುದಕ್ಕಿಂತ ನಿಮ್ಮ ವಿರೋಧ ಪಕ್ಷದ ನಾಯಕನನ್ನು ಮೊದಲು ಆಯ್ಕೆ ಮಾಡಿಕೊಳ್ಳಿ. ಮೈಸೂರಿನ ಸಂಸದನಾಗಿ ಜಿಲ್ಲೆಯಲ್ಲಿ ಎಷ್ಟು ಬಿಜೆಪಿ ಶಾಸಕರನ್ನು ಗೆಲ್ಲಿಸಿದ್ದೀರಿ? ಚುನಾವಣೆಯಲ್ಲಿ ಬಿಜೆಪಿಯ ಹೀನಾಯ ಸೋಲಿಗೆ ಕಾರಣರಾದ ಬಿಎಲ್ ಸಂತೋಷ್ ಅವರನ್ನು ಟೀಕಿಸುವ ಮಿನಿಮಮ್ ದಮ್ಮು ತಾಕತ್ತು ಇದೆಯೇ? ಎಂದು ಪ್ರಶ್ನಿಸಿದೆ.

lokesh

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

6 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

7 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

8 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

10 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

11 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

12 hours ago