BREAKING NEWS

ಆಸ್ಪತ್ರೆಗೆ ಹೋಗಲು 7 ಕಿಮೀ ನಡೆದ ಗರ್ಭಿಣಿ, ಬಿಸಿಲಿನ ತಾಪದಿಂದ ಸಾವು

ಪಾಲ್ಘಾರ್: ಬಿಸಿಲಿನ ತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮೇ ತಿಂಗಳಲ್ಲಿ ಬಿಸಿಲಿನ ಝಳ ಇನ್ನೂ ಹೆಚ್ಚಾಗಿದೆ. ಹೊರಗಡೆ ಓಡಾಡುವುದು ಕಷ್ಟವಾಗಿದೆ. ಬಿಸಿಲಿನ ಝಳ ತಾಳಳಾರದೇ, ಆರೋಗ್ಯದಲ್ಲಿ ವ್ಯತ್ಯಾಸವಾಗಿ ಸಾವನ್ನಪ್ಪಿರುವ ಘಟನೆಗಳೂ ವರದಿಯಾಗಿದೆ.

ಮಹಾರಾಷ್ಟ್ರದ ಫಲ್ಘಾರ್ ಜಿಲ್ಲೆಯಲ್ಲೂ ಇಂತದ್ದೇ ಘಟನೆ ನಡೆದಿದೆ. ಇಲ್ಲಿನ 21 ವರ್ಷದ ಗರ್ಭಿಣಿಯೊಬ್ಬರು, ತಮ್ಮ ಊರಿನಿಂದ 7 ಕಿಮೀ ದೂರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಆರೋಗ್ಯ ತಪಾಸಣೆಗಾಗಿ ರಣ ಬಿಸಿಲಿನಲ್ಲಿ ನಡೆದುಕೊಂಡು ಹೋಗಿದ್ದಾರೆ. ಅಲ್ಲಿಂದ ವಾಪಸ್ ಬರುವಾಗ ಸೂರ್ಯಾಘಾತ (Sun Stroke) ನಿಂದ ಮೃತಪಟ್ಟಿದ್ದಾರೆ.

ಈ ಘಟನೆ ಬಗ್ಗೆ ಜಿಲ್ಲಾ ಸಿವಿಲ್ ಸರ್ಜನ್ ಡಾ ಸಂಜಯ್ ಬೋಡಾಡೆ ಪ್ರತಿಕ್ರಿಯಿಸಿ, “ಆಕೆ 9 ತಿಂಗಳ ಗರ್ಭಿಣಿಯಿದ್ದರು. ನಿಯಮಿತವಾಗಿ ಪ್ರಾಥಮಿಕ ಕೇಂದ್ರಕ್ಕೆ ತಪಾಸಣೆಗಾಗಿ ಬರುತ್ತಿದ್ದರು. ಎಂದಿನಂತೆ ಬಿಸಿಲಿನಲ್ಲಿ 7 ಕಿಮೀ ನಡೆದುಕೊಂಡು ಬಂದಿದ್ದಾರೆ. ಚಿಕಿತ್ಸೆ ಪಡೆದು ವಾಪಸ್ ತೆರಳುವಾಗ 3.5 ಕಿಮೀ ನಡೆದುಕೊಂಡು ಹೋಗಿದ್ದಾರೆ.

ಅಲ್ಲಿ ಅವರಿಗೆ ಸನ್ ಸ್ಟ್ರೋಕ್ ಆಗಿದೆ. ಕೂಡಲೇ ಪ್ರಾಥಮಿಕ ಕೇಂದ್ರದಲ್ಲಿ ವೈದ್ಯರು ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ದಹಾನುವಿನ ಧುಂಡಲವಾಡಿಯಲ್ಲಿರುವ ವಿಶೇಷ ಆಸ್ಪತ್ರೆಗೆ ದಾಖಲಿಸಲು ಸೂಚಿಸಿದ್ದಾರೆ. ದುರಾದೃಷ್ಟವಶಾತ್, ಮಾರ್ಗಮಧ್ಯೆ ಆಕೆ ಆಂಬ್ಯುಲೆನ್ಸ್‌ನಲ್ಲಿ ಸಾವನ್ನಪ್ಪಿದ್ದಾಳೆ ಮತ್ತು ಭ್ರೂಣವನ್ನೂ ಕಳೆದುಕೊಂಡಿದ್ದಾಳೆ” ಎಂದಿದ್ದಾರೆ.

ಆಕೆಗೆ ಹೆರಿಗೆ ನೋವು ಕಾಣಿಸಿಕೊಂಡಿಲ್ಲ ಮತ್ತು ಕಳಸ ಪಿಎಚ್‌ಸಿ ವೈದ್ಯರು ತಕ್ಷಣ ಗಮನ ಹರಿಸಿದ್ದರು. ಆಕೆಯ “ಅರೆ ಕೊಮೊರ್ಬಿಡ್ ಸ್ಥಿತಿ” ಯಿಂದ ಅವರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗದ ಕಾರಣ, ಅವರು ಅವಳನ್ನು ವಿಶೇಷ ಆಸ್ಪತ್ರೆಗೆ ಕಳುಹಿಸಿದ್ದಾರೆ ಎಂದು ಅವರು ಹೇಳಿದರು.

ತಾಪಮಾನ ಹೆಚ್ಚಿದ್ದರಿಂದ ಮಹಿಳೆ 7 ಕಿಮೀ ನಡೆದಿದ್ದರಿಂದ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಪರಿಣಾಮವಾಗಿ, ಸನ್‌ ಸ್ಟ್ರೋಕ್ ಆಗಿದೆ ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಪಲ್ಘಾರ್ ಜಿಲ್ಲಾ ಪರಿಷದ್ ಅಧ್ಯಕ್ಷ ಪ್ರತಿಕ್ರಿಯಿಸಿ, “ಗರ್ಭಿಣಿಯಾಗಿದ್ದ ಆಕೆ ಅನಿಮಿಯಾದಿಂದ ಬಳಲುತ್ತಿದ್ದರು. ಅಲ್ಲಿನ ಆಶಾ ಕಾರ್ಯಕರ್ತೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತರುತ್ತಾರೆ. ವೈದ್ಯರು ಪರೀಕ್ಷಿಸಿ ಔಷಧಗಳನ್ನು ಕೊಟ್ಟರೂ ವ್ಯರ್ಥವಾಯಿತು. ಜೊತೆಗೆ ಈ ಪ್ರಾಥಮಿಕ ಕೇಂದ್ರದಲ್ಲಿ ಐಸಿಯು ವ್ಯವಸ್ಥೆ ಇಲ್ಲ. ಇದ್ದಿದ್ದರೆ ಉಳಿಸಿಕೊಳ್ಳಬಹುದಾಗಿತ್ತು. ಇದನ್ನು ಇಲ್ಲಿಗೇ ಬಿಡುವುದಿಲ್ಲ. ಉನ್ನತ ಮಟ್ಟದವರೆಗೆ ಕೊಂಡೊಯ್ದು, ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವುದಾಗಿ’ ಹೇಳಿದರು.

ಪದೇ ಪದೇ ಇಂತಹ ಘಟನೆಗಳು ವರದಿ

ಸರಿಯಾದ ಚಿಕಿತ್ಸೆ ಸಿಗದೇ, ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿಯ ಸಾವು ವರದಿಯಾಗುತ್ತಲೇ ಇರುತ್ತದೆ. ರಾಜ್ಯದ ವಿಚಾರಕ್ಕೆ ಬರುವುದಾದರೆ, ಹೆರಿಗೆ ಕಾರ್ಡ್ ಇಲ್ಲ ಎನ್ನುವ ಕಾರಣಕ್ಕಾಗಿ ಚಿಕಿತ್ಸೆ ಸಿಗದೇ ಅವಳಿ ಮಕ್ಕಳಿಗೆ ಜನ್ಮ ನೀಡುವ ಸಂದರ್ಭದಲ್ಲಿ ಗರ್ಭಿಣಿ ಸಾವನ್ನಪ್ಪಿರುವ ಮನಕಲಕುವ ಘಟನೆ ತುಮಕೂರಿನಲ್ಲಿ ನಡೆದಿತ್ತು. ಇದು ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಕಹಿ ಮರೆಯಾಗುವ ಮುನ್ನ, ಮತ್ತೊಂದು ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನಲ್ಲಿ ಹೆಚ್ಚಿನ ಚಿಕಿತ್ಸೆ ಸಿಗದೇ, ಬೆಂಗಳೂರಿನ ವಾಣಿವಿಲಾಸ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಹೆರಿಯಾಗಿದೆ. ಮಗು ಸಾವನ್ನಪ್ಪಿದೆ.

ಹೆರಿಗೆಗೆಂದು ಯಾದಗಿರಿ ಜಿಲ್ಲಾಸ್ಪತ್ರೆಗೆ ಹೋಗಿದ್ದ ಗರ್ಭಿಣಿ ಸಾವನ್ನಪ್ಪಿರುವ ಘಟನೆ ನಡೆದಿದೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಆರೋಪಿಸಲಾಗಿದೆ.

andolanait

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

13 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

13 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

20 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

20 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

20 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

20 hours ago