ಬೆಂಗಳೂರು : ರಾಜ್ಯ ವಿಧಾನಸಭಾ ಚುನಾಣೆಯಲ್ಲಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ ಐದು ಗ್ಯಾರಂಟಿಗಳನ್ನು ಜಾರಿಗೆ ತರಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಈ ಸಂಬಂಧ ನಿಯೋಜಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪದಗ್ರಹಣಕ್ಕೂ ಮುನ್ನ ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದಾರೆ.
ಸರ್ಕಾರದ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ, ಹಣಕಾಸು ಇಲಾಖೆಯ ಹಿರಿಯ ಅಧಿಕಾರಿ ಐ.ಎಸ್.ಎನ್. ಪ್ರಸಾದ್ ಸೇರಿದಂತೆ ಹಿರಿಯ ಅಧಿಕಾರಿಗಳ ಜತೆ ಸಿದ್ದರಾಮಯ್ಯ ಅವರು ತಮ್ಮ ಸರ್ಕಾರಿ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದರು. ಅಂತಿಮವಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ 5 ಗ್ಯಾರಂಟಿಗಳನ್ನು ಜಾರಿಗೆ ಮಾಡಲು ಮುಂದಾಗಿದ್ದು, ಅದಕ್ಕೂ ಮುನ್ನ ಈಗ ಅಧಿಕಾರಿಗಳ ಜತೆ ನಿಯೋಜಿತ ಸಿಎಂ ಚರ್ಚಿಸಿದ್ದಾರೆ.
ಕಾಂಗ್ರೆಸ್ನ ಐದು ಗ್ಯಾರಂಟಿಗಳು ಯಾವುವು? : ಮೊದಲನೇ ಗ್ಯಾರಂಟಿಯಾಗಿ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ತರುತ್ತೇವೆ ಎಂದು ಕಾಂಗ್ರೆಸ್ ಹೇಳಿದೆ. ಈ ಮೂಲಕ ಪ್ರತಿ ತಿಂಗಳು ಮಹಿಳೆಯರಿಗೆ 2000 ರೂಪಾಯಿ ಅಕೌಂಟ್ ಸೇರಲಿದೆ ಎಂದು ಭರವಸೆ ನೀಡಿದೆ. ಎರಡನೇ ಗ್ಯಾರಂಟಿಯಾಗಿ ಮನೆ ಮನೆಗೂ 200 ಯೂನಿಟ್ ವಿದ್ಯುತ್ ಉಚಿತ ನೀಡುತ್ತಾರಂತೆ. ಮೂರನೇ ಗ್ಯಾರಂಟಿ ಏನೆಂದರೆ, ಅನ್ನ ಭಾಗ್ಯದ ಮೂಲಕ ಪ್ರತಿ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಘೋಷಿಸಿದೆ. ನಾಲ್ಕನೇ ಗ್ಯಾರಂಟಿ ನಿರುದ್ಯೋಗಿ ಪದವೀಧರರಿಗೆ ಪ್ರತಿ ತಿಂಗಳು 3000 ರೂ. ನೀಡಲಾಗುವುದು. ಡಿಪ್ಲೊಮಾ ಪದವೀಧರರಿಗೆ ಒಂದೂವರೆ ಸಾವಿರ ರೂಪಾಯಿ ನೀಡುತ್ತಾರಂತೆ. ಐದನೇ ಗ್ಯಾರಂಟಿಯಾಗಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಕಾಂಗ್ರೆಸ್ ಘೋಷಿಸಿದೆ.
62 ಸಾವಿರ ಕೋಟಿ ರೂ. ಹೊರೆ : ಅಂದಹಾಗೆ ಈ ಗ್ಯಾರಂಟಿಗಳನ್ನು ಈಡೆರಿಸಲು ಸರ್ಕಾರದ ಬೊಕ್ಕಸಕ್ಕೆ ಹೆಚ್ಚುವರಿಯಾಗಿ 62 ಸಾವಿರ ಕೋಟಿ ರೂ. ಅವಶ್ಯಕತೆ ಇದೆ. ರಾಜ್ಯದ ಆರ್ಥಿಕ ಸ್ಥಿತಿಯನ್ನು ಕಾಪಾಡಿಕೊಂಡು ಐದು ಗ್ಯಾರಂಟಿಗಳನ್ನು ಕಾಂಗ್ರೆಸ್ ಹೇಗೆ ಜಾರಿಗೆ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…
ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…
ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…