ಕೊಡಗು ಜಿಲ್ಲೆಗೆ ರಾಷ್ಟ್ರಪತಿ ಆಗಮನ

ಮಡಿಕೇರಿ: ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಭಾಗಮಂಡಲ ಹೆಲಿಪ್ಯಾಡಗೆ ಭಾರತೀಯ ವಾಯು ಪಡೆಯ ವಿಶೇಷ ಹೆಲಿಕಾಪ್ಟರ್‌ನಲ್ಲಿ ಶನಿವಾರ ಆಗಮಿಸಿದರು.

ರಾಷ್ಟ್ರದ ಪ್ರಥಮ ಮಹಿಳೆ ಸವಿತಾ ಕೋವಿಂದ ಅವರೂ ರಾಷ್ಟ್ರಪತಿಯವರ ಜೊತೆಯಲ್ಲಿ ಆಗಮಿಸಿದರು. ಈ ವೇಳೆ ಕೊಡಗು ಜಿಲ್ಲಾ ಉಸ್ತುವಾರಿ ಹಾಗೂ ವಸತಿ ಸಚಿವ ವಿ.ಸೋಮಣ್ಣ ಸಹ ರಾಷ್ಟ್ರಪತಿ ಜೊತೆಗಿದ್ದರು.

ರಾಷ್ಟ್ರಪತಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಆತ್ಮೀಯವಾಗಿ ಬರ ಮಾಡಿಕೊಳ್ಳಲಾಯಿತು. ರಾಷ್ಟ್ರಪತಿ ತಲಕಾವೇರಿ ದೇವಸ್ಥಾನಕ್ಕೆ ತೆರಳಿದ್ದು, ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಪೂಜೆಯ ಬಳಿಕ ಮಡಿಕೇರಿಯ ಹೆಲಿಪ್ಯಾಡ್‍ಗೆ ಆಗಮಿಸಲಿದ್ದಾರೆ.

× Chat with us