ನವದೆಹಲಿ : ವಿಶ್ವ ಹಿಂದೂ ಪರಿಷದ್ ಮತ್ತು ಬಜರಂಗದಳವು ದಿಲ್ಲಿ-ಎನ್‌ಸಿಆರ್ ನಲ್ಲಿ ಆಯೋಜಿಸುವ ಪ್ರತಿಭಟನೆಗಳ ವೇಳೆ ಯಾವುದೇ ದ್ವೇಷದ ಭಾಷಣ ಅಥವಾ ಹಿಂಸೆ ಉಂಟಾಗದಂತೆ ನೋಡಿಕೊಳ್ಳಬೇಕೆಂದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಇಂದು ನಿರ್ದೇಶನ ನೀಡಿದೆ.
ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಪಡೆ ಅಥವಾ ಅರೆಸೇನಾ ಪಡೆಗಳನ್ನು ನಿಯೋಜಿಸಬೇಕು ಮತ್ತು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ಎಸ್ ವಿ ಭಟ್ಟಿ ಅವರ ಪೀಠ ಹೇಳಿದೆ.
ವಿಹಿಂಪ ಮತ್ತು ಬಜರಂಗದಳ ದಿಲ್ಲಿ ಮತ್ತು ಎನ್‌ಸಿಆರ್‌ನಲ್ಲಿ 23 ಪ್ರತಿಭಟನೆಗಳನ್ನು ಘೋಷಿಸಿವೆ ಎಂದು ಪತ್ರಕರ್ತ ಶಹೀನ್ ಅಬ್ದುಲ್ಲಾ ಪರ ವಾದಿಸಿದ ಹಿರಿಯ ವಕೀಲ ಸಿ ಯು ಸಿಂಗ್ ನ್ಯಾಯಾಲಯದ ಗಮನ ಸೆಳೆದಾಗ ಮೇಲಿನ ಆದೇಶ ಹೊರಡಿಸಲಾಗಿದೆ.
ಜುಲೈ 31ರಂದು ನೂಹ್ ಎಂಬಲ್ಲಿ ವಿಹಿಂಪ ಮೆರವಣಿಗೆಯನ್ನು ಗುಂಪೊಂದು ತಡೆಯಲು ಯತ್ನಿಸಿದಾಗ ಉಂಟಾದ ಮತೀಯ ಘರ್ಷಣೆಯಲ್ಲಿ ಇಬ್ಬರು ಹೋಂಗಾರ್ಡ್‌ಗಳ ಸಹಿತ ಆರು ಜನರು ಗಾಯಗೊಂಡಿದ್ದರು. ಘಟನೆ ಸಂಬಂಧ ಇಲ್ಲಿಯ ತನಕ 116 ಜನರನ್ನು ಬಂಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…
ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…
ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ಸದಸ್ಯರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಈಗ ಎಂಡಿಎ)ದಿಂದ ಕಾನೂನು ಬಾಹಿರವಾಗಿ…
ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…
ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…