ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್‌ನಲ್ಲಿ ಘೋಷಿಸಿದ ಪ್ರಕಾರ, ಮದ್ಯದ ಬೆಲೆ ಇಂದಿನಿಂದ (ಜುಲೈ 20) ಅನ್ವಯವಾಗುವಂತೆ ಹೆಚ್ಚಳವಾಗಿದೆ. ಇದರೊಂದಿಗೆ ಗರಿಷ್ಠ ಶೇ.20ರಷ್ಟು ಹೆಚ್ಚಿನ ದರದೊಂದಿಗೆ ಹೊಸ ಬೆಲೆಯಲ್ಲಿ ಶುಕ್ರವಾರದಿಂದ ಮದ್ಯ ಮಾರಾಟವಾಗಲಿದೆ.
ಸರ್ಕಾರಿ ಆದೇಶದ ಪ್ರಕಾರ ಗುರುವಾರ ಮಧ್ಯರಾತ್ರಿಯಿಂದ ಈ ದರ ಹೆಚ್ಚಳ ಜಾರಿಗೆ ಬಂದಿದೆ. ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರಾಜ್ಯ ಸರ್ಕಾರ ಬ್ರಾಂದಿ, ವಿಸ್ಕಿ, ಜಿನ್, ರಮ್ ಮತ್ತು ಅಂಥಹ ಇತರ ಮದ್ಯಗಳ ಸುಂಕವನ್ನು ಶೇ.20ರಷ್ಟು ಏರಿಕೆ ಮಾಡಿತ್ತು. ಅಲ್ಲದೆ, ಬಿಯರ್ ಮೇಲಿನ ಅಬಕಾರಿ ಸುಂಕವನ್ನು ಶೇ.10ರಷ್ಟು ಹೆಚ್ಚಿಸಿದ್ದನ್ನು ತಿಳಿಸಿತ್ತು.
ಹೀಗಾಗಿ ಹಾಲಿ ದರಕ್ಕೆ ಹೋಲಿಸಿದಾಗ ಶೇ.10ರಷ್ಟು ಬಿಯರ್ ದರ ಹೆಚ್ಚಳವಾಗಲಿದೆ. ಭಾರತೀಯ ಮದ್ಯ (ಐಎಂಎಲ್) ಒಂದು ಪೆಗ್ (60 ಎಂಎಲ್ )ಗೆ 10ರಿಂದ 20 ರೂ. ಹಾಗೂ ಬಿಯರ್ ಬೆಲೆ ಪ್ರತಿ ಬಾಟಲ್‌ಗೆ ಶೇ.10ರಷ್ಟು ಹೆಚ್ಚಳವಾಗಲಿದೆ.
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…
ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…
ನವದೆಹಲಿ: ದಲಿತರು, ಹಿಂದುಳಿದವರು, ಆದಿವಾಸಿಗಳು ಸೇರಿದಂತೆ ಪ್ರತಿಯೊಂದು ಸಮುದಾಯದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು…