ನವದೆಹಲಿ: “ನಮ್ಮ ಸರ್ಕಾರವನ್ನು ಹೊರ ಹಾಕುವುದು ಇಂಡಿಯಾ ಮೈತ್ರಿಕೂಟದ ಗುರಿಯಾದರೆ, ದೇಶದ ಉಜ್ವಲ ಭವಿಷ್ಯ ಸೃಷ್ಠಿಸುವುದು ನಮ್ಮ ಸರ್ಕಾರದ ಕೆಲಸವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೆಹಲಿಯಲ್ಲಿಂದು (ಮಂಗಳವಾರ) ನಡೆಯುತ್ತಿರುವ ಇಂಡಿಯಾ ಬ್ಲಾಕ್‌ನ ಸಭೆಯ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಬಿಜೆಪಿ ಸಂಸದೀಯ ಸಮಿತಿ ಸಭೆಯಲ್ಲಿ ಈ ಹೇಳಿಕೆ ನೀಡಿದ್ದಾರೆ.
ಕೆಲವು ಪಕ್ಷಗಳು ಸಂಸತ್ ಭದ್ರತಾ ಉಲ್ಲಂಘನೆಗೆ ಬೆಂಬಲ ನೀಡುತ್ತವೆ, ಇದು ಉಲ್ಲಂಘನೆಯಷ್ಟೇ ಅಪಾಯಕಾರಿಯಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆಯುಳ್ಳವರು ಎಲ್ಲರೂ ಈ ಲೋಪವನ್ನು ಖಂಡಿಸಬೇಕಿತ್ತು. ಇದರಿಂದ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಅದರ ಸಂಖ್ಯೆ ಕಡಿಮೆಯಾಗುವ ಬಗ್ಗೆ ಸೂಚಿಸುತ್ತದೆ. ಮತ್ತು ಚುನಾವಣೆಯಲ್ಲಿ ಬಿಜೆಪಿ ಸಂಖ್ಯೆ ಲೋಕಸಭೆಯಲ್ಲಿ ಹೆಚ್ಚಾಗುತ್ತದೆ ಎಂದು ಇಂಡಿಯಾ ಬ್ಲಾಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಡಿಸೆಂಬರ್ 13 ರ ಭದ್ರತಾ ಉಲ್ಲಂಘನೆಯ ಬಗ್ಗೆ ಗೃಹ ಸಚಿವರು ಹೇಳಿಕೆ ನೀಡುವಂತೆ ಪ್ರತಿಪಕ್ಷಗಳು ಪಟ್ಟು ಹಿಡಿದವು. ಸಂಸತ್ತಿನಲ್ಲಿ ನಿನ್ನೆ ಭಾರೀ ಗದ್ದಲ-ಕೋಲಾಹಲ ಉಂಟಾದ ಹಿನ್ನಲೆ ಅಂತಿಮವಾಗಿ 78 ಸಂಸದರನ್ನು ಅಮಾನತುಗೊಳಿಸಲಾಯಿತು, ಭಾರತೀಯ ಸಂಸತ್ತಿನ ಇತಿಹಾಸದಲ್ಲಿ ಒಂದೇ ದಿನದಲ್ಲಿ ಇಷ್ಟು ದೊಡ್ಡ ಸಂಖ್ಯೆಯಲ್ಲಿ ಸಂಸದರನ್ನು ಹೊರಹಾಕಲಾಗಿದ್ದು ಇದೇ ಮೊದಲು.
ಇಂದು ಇತ್ತೀಚಿನ ಪಂಚರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹಿನ್ನೆಡೆಯಾದ ನಂತರ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಜಂಟಿ ಪ್ರಚಾರ, ಸೀಟು ಹಂಚಿಕೆ ಮತ್ತು ಕಾರ್ಯತಂತ್ರ ಪುನರ್ ರೂಪಿಸುವ ಕುರಿತು ಇಂಡಿಯಾ ಮೈತ್ರಿಕೂಟದ ಮಹತ್ವದ ಸಭೆ ಇಂದು ನಡೆಯಲಿದೆ.
ಇದು ಇಂಡಿಯಾ ಮೈತ್ರಿಕೂಟದ ನಾಲ್ಕನೇ ಸಭೆಯಾಗಿದೆ. ಇಂದಿನ ಸಭೆಯಲ್ಲಿ “ಮೇನ್ ನಹಿಂ, ಹಮ್ (ನಾವು, ನಾನಲ್ಲ)” ಎಂಬ ಥೀಮ್‌ನೊಂದಿಗೆ ಮುಂದುವರಿಯಲು ಪ್ರತಿಪಕ್ಷಗಳು ಉದ್ದೇಶಿಸಿವೆ.
ಹೊಸ ವರ್ಷದಂದು ಹಲವರು ಬಂಧು,ಬಳಗ, ಸ್ನೇಹಿತರ ಜತೆ ಸೇರಿ ಸಂಭ್ರಮಿಸಿದರು. ಆದರೆ ಸಾಂಸ್ಕ ತಿಕ ನಗರ ಮೈಸೂರಿನಲ್ಲಿ ದಾಖಲೆ ಮದ್ಯ…
ಸ್ವಾಗತಾರ್ಹ ನಡೆ! ಜಾತಿ ಮೀರಿ ಪ್ರೀತಿಸಿದರೆ ಕುಂದಲ್ಲವದು ಮರ್ಯಾದೆಗೆ ಬದಲಿಗೆ ಹೆಚ್ಚುವುದು ಮರ್ಯಾದೆ ಗೌರವ! ಜಾತಿ ಕಟ್ಟಳೆ ಮುರಿವ ಸಮತೆಯ…
ಸಾಂಸ್ಕ ತಿಕ ನಗರಿ ಮೈಸೂರಿನಲ್ಲಿ ಪೊಲೀಸ್ ಇಲಾಖೆಗೆ ಸೇರಿದ ಬ್ಯಾರಿಕೇಡ್‌ಗಳು ಬಳಕೆಯಾದ ನಂತರ ನಿರ್ಲಕ್ಷ್ಯಕ್ಕೆ ಒಳಪಡುತ್ತಿವೆ. ಅವುಗಳನ್ನು ಸುರಕ್ಷಿತವಾಗಿ ಒಂದೆಡೆ…
ಲೊಕ್ಕನಹಳ್ಳಿ ಬಳಿ ಶಾಲಾ-ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಹನೂರು: ಒಂದೆಡೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸುವಂತೆ ಒತ್ತಾಯಿಸಿ ಶಾಲಾ-ಕಾಲೇಜು…
ನವೀನ್ ಡಿಸೋಜ ೧೮,೫೦೦ ಹೆಕ್ಟೇರ್ ಪ್ರದೇಶದಲ್ಲಿ ಭತ್ತ ಬೆಳೆದಿರುವ ರೈತರು; ಹವಾಮಾನ ವೈಪರೀತ್ಯದ ನಡುವೆಯೂ ಕಟಾವು ಕಾರ್ಯ ಚುರುಕು ಮಡಿಕೇರಿ:…
ಚಾಮರಾಜನಗರ: ತೀವ್ರ ಚಳಿಯಿಂದ ತತ್ತರಿಸಿದ್ದ ಜಿಲ್ಲೆಯ ಜನತೆ ಕಳೆದ ೨-೩ ದಿನಗಳಿಂದ ಎದುರಾಗಿರುವ ಮೋಡ ಕವಿದ ವಾತಾವರಣ ಮತ್ತು ಅಲ್ಲಲ್ಲಿ…