ಬೆಂಗಳೂರು : ಚಂದ್ರಯಾನ-3 ಯಶಸ್ಸಿಗಾಗಿ ಶ್ರಮಿಸಿದ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ನಗರಕ್ಕೆ ಆಗಮಿಸಿದ್ದು, ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಚಿವ ಆರ್.ಅಶೋಕ್ ಸೇರಿದಂತೆ ಕೆಲವು ಬಿಜೆಪಿ ಶಾಸಕರು ರಸ್ತೆ ಬದಿ ನಿಂತು ಪ್ರಧಾನಿ ಮೋದಿ ಅವರನ್ನು ಸ್ವಾಗತಿಸಿದ್ದಾರೆ.
ಈ ಕುರಿತ ಫೋಟೊವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿರುವ ಕಾಂಗ್ರೆಸ್, ʼʼಬಿಜೆಪಿ ನಾಯಕರದ್ದು ಎಂತಹಾ ದುಸ್ಥಿತಿ..ʼʼ ಎಂದು ಬಿಜೆಪಿ ನಾಯಕರ ಕಾಲೆಳೆದಿದೆ.
ʼರಾಜ್ಯ ಬಿಜೆಪಿಯ ‘ದಂಡ’ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆʼʼ ಎಂದು ಕಾಂಗ್ರೆಸ್ ಟೀಕಿಸಿದೆ.
'@BJP4Karnataka ನಾಯಕರದ್ದು ಎಂತಹಾ ದುಸ್ಥಿತಿ..
ರಾಜ್ಯ ಬಿಜೆಪಿಯ 'ದಂಡ'ನಾಯಕರು, ಚಕ್ರವರ್ತಿಗಳು, ಸಾಮ್ರಾಟರೆಲ್ಲಾ ಬೀದಿ ಪಾಲಾಗಿದ್ದಾರೆ!
ಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ!
ಛೇ, ಮಿನಿಮಮ್ ಮರ್ಯಾದೆಯೂ… pic.twitter.com/QOZ3k8ZiXQ
— Karnataka Congress (@INCKarnataka) August 26, 2023
ʼʼಬಿಜೆಪಿಯ ಹೈಕಮಾಂಡ್ ಹಾಗೂ ಮೋದಿ ಹೀನಾಯ ಸೋಲಿನ ಬಳಿಕ ರಾಜ್ಯದ ನಾಯಕರನ್ನು ಹತ್ತಿರಕ್ಕೂ ಸೇರಿಸದೇ ಬೀದಿ ಪಾಲು ಮಾಡಿದ್ದಾರೆ ಎಂಬುದಕ್ಕೆ ಈ ಚಿತ್ರಗಳೇ ಸಾಕ್ಷಿ. ಛೇ, ಮಿನಿಮಮ್ ಮರ್ಯಾದೆಯೂ ಇಲ್ಲದಾಯಿತೇ?ʼʼ ಎಂದು ಕಾಂಗ್ರೆಸ್ ಕುಟುಕಿದೆ.