Mysore
28
overcast clouds

Social Media

ಗುರುವಾರ, 18 ಡಿಸೆಂಬರ್ 2025
Light
Dark

ಪ್ರಧಾನಮಂತ್ರಿ ʼಸೂರ್ಯೋದಯʼ ಯೋಜನೆ ಘೋಷಿಸಿದ ಕೇಂದ್ರ ಸರ್ಕಾರ

ನವದೆಹಲಿ: ನಮ್ಮ ದೇಶವಾಸಿಗಳು ತಮ್ಮ ಮನೆಗಳ ಮೇಲ್ಚಾವಣಿಯ ಮೇಲೆ ಸೌರ ವ್ಯವಸ್ಥೆಯ ಹೊಂದಬೇಕೆಂಬ ಸಂಕಲ್ಪವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ಮೋದಿಯವರ ಘೋಷಣೆಯ ಪ್ರಕಾರ, ದೇಶಾದ್ಯಂತ ಒಂದು ಕೋಟಿ ಮನೆಗಳಲ್ಲಿ ರೂಫ್‌ಟಾಪ್‌ ಸೋಲಾರ ಅಳವಡಿಸುವ ಪ್ರಧಾನಮಂತ್ರಿ ʼಸೂರ್ಯೋದಯʼ ಯೋಜನೆಯನ್ನು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.

ಇಂದು (ಜನವರಿ 22) ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ನಂತರ ಪ್ರಧಾನಿ ಮೋದಿ ಅವರು ಸೂರ್ಯೋದಯ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

ಈ ಕುರಿತು ತಮ್ಮ ಅಧಿಕೃತ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ʼಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು, ಅಯೋಧ್ಯೆಯಲ್ಲಿ ಜೀವನದ ಪವಿತ್ರೀಕರಣದ ಶುಭ ಸಂದರ್ಭದಲ್ಲಿ, ಭಾರತದ ಜನರು ತಮ್ಮ ಮನೆಗಳ ಛಾವಣಿಯ ಮೇಲೆ ತಮ್ಮದೇ ಆದ ಸೋಲಾರ್ ರೂಫ್ ಟಾಪ್ ವ್ಯವಸ್ಥೆಯನ್ನು ಹೊಂದಿರಬೇಕು ಎಂಬ ನನ್ನ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಲಿದೆ ಎಂದಿದ್ದಾರೆ.

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅನ್ನು ಸ್ಥಾಪಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸುತ್ತದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಕಡಿಮೆಯಾಗುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತ ಸ್ವಾವಲಂಬಿಯಾಗಲಿದೆ ಎಂದು ಪಿಎಂ ಮೋದಿ ಬರೆದುಕೊಂಡಿದ್ದಾರೆ.

ಪ್ರಧಾನಿ ಅವರು ಅಯೋಧ್ಯೆಯಿಂದ ಹಿಂದಿರುಗಿದ ನಂತರ ಅಧಿಕಾರಿಗಳೊಂದಿಗೆ ಸೂರ್ಯೋದಯ ಯೋಜನೆಯ ಕುರಿತು ಚರ್ಚಿಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

https://x.com/narendramodi/status/1749415140662055073?s=20

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!