BREAKING NEWS

ಜು.27 ರ ಬಂದ್‌ ವಾಪಸ್‌ ಪಡೆದ ಖಾಸಗಿ ಸಾರಿಗೆ ಒಕ್ಕೂಟ: ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆ.10 ವರೆಗೆ ಗಡುವು

ಬೆಂಗಳೂರು : ಬೇಡಿಕೆ ಈಡೇರಿಕೆಯ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರವಸೆ ನೀಡಿದ ಹಿನ್ನೆಲೆ ಜುಲೈ 27 ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಅನ್ನು ಖಾಸಗಿ ಸಾರಿಗೆ ಒಕ್ಕೂಟ ವಾಪಸ್ ಪಡೆದಿದೆ.

ಈ ಬಗ್ಗೆ ಮಾಹಿತಿ ನೀಡಿದ ಒಕ್ಕೂಟದ ಮುಖಂಡ ನಟರಾಜ ಶರ್ಮಾ, ನಮ್ಮ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆಗಸ್ಟ್ 10ರ ವರೆಗೆ ಕಾಲಾವಕಾಶ ನೀಡಲಾಗಿದೆ. ಬೇಡಿಕೆ ಈಡೇರಿಸಿದ್ದರೆ ಮುಂದಿನ ನಡೆ ನಿರ್ಧರಿಸುತ್ತೇವೆ ಎಂದರು.

ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಜಾರಿ ನಂತರ ಖಾಸಗಿ ಬಸ್, ಆಟೋ ಟ್ಯಾಕ್ಸಿ ಮಾಲೀಕರಿಗೆ ಭಾರೀ ಹೊಡೆತ ನೀಡಿದೆ. ಹೀಗಾಗಿ ಯೋಜನೆ ಸ್ಥಗಿತಕ್ಕೆ ಖಾಸಗಿ ಸಾರಿಗೆ ಒಕ್ಕೂಟ ಆಗ್ರಹಿಸುತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆಟೋ ಚಾಲಕರ ಸಮಸ್ಯೆ ಬೇರೆ ಇದೆ, ಟ್ಯಾಕ್ಸಿ ಸಮಸ್ಯೆಯೂ ಇದೆ. ಶಕ್ತಿಯೋಜನೆ ಕುರಿತು ನಾನೊಬ್ಬನೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಬೇಕು ಎಂದರು.

ಬಂದ್​ಗೆ ಕರೆ ನೀಡಿದ ಹಿನ್ನೆಲೆ ಇಂದು ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ ಕೇಂದ್ರ ಕಚೇರಿಯಲ್ಲಿ ಖಾಸಗಿ ಸಾರಿಗೆ ಒಕ್ಕೂಟದ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಭೆ ನಡೆಸಿದರು.

ಬೆಳಗ್ಗೆ ನಡೆದಿದ್ದ ಸಭೆಯಲ್ಲಿ ಒಮ್ಮತ ಮೂಡಿ ಬಾರದ ಹಿನ್ನೆಲೆ ಸಭೆ ವಿಫಲಗೊಂಡಿತ್ತು. ಹೀಗಾಗಿ ಮಧ್ಯಾಹ್ನದ ನಂತರ ಮತ್ತೆ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಒಕ್ಕೂಟಕ್ಕೆ ಬೇಡಿಕೆ ಈಡೇರಿಸುವ ಬಗ್ಗೆ ಸಾರಿಗೆ ಸಚಿವರು ಭರವಸೆ ನೀಡಿದ್ದಾರೆ. ಹೀಗಾಗಿ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಂದ್ ವಾಪಸ್ ಪಡೆಯಲಾಗಿದೆ.

andolanait

Recent Posts

ಘೋಷಣೆಗೆ ಸೀಮಿತವಾದ ವಾಣಿಜ್ಯ ಗ್ಯಾಸ್ ಪೂರೈಕೆ

ಪ್ರಶಾಂತ್ ಮಲ್ಲಿಕ್‌  ಹೋಟೆಲ್ ಉದ್ಯಮದ ಕಂಗಾಲು ಸ್ಥಿತಿ ಮುಂದುವರಿಕೆ ಮೈಸೂರಲ್ಲಿ ಶೇ.೧೦ರಷ್ಟು ಹೋಟೆಲ್‌ಗಳು ಬಂದ್ ಗ್ಯಾಸ್ ಸಿಗದ ಕಾರಣ ಸೌದೆಗೆ…

2 hours ago

ಇಂದಿರಾ ಕ್ಯಾಂಟೀನ್‌ಗೂ ಸಂಕಷ್ಟ ; ಸೀಮಿತಗೊಂಡ ತಿನಿಸುಗಳ ತಯಾರಿ

ನವೀನ್ ಡಿಸೋಜ ಹೋಟೆಲ್‌ಗಳಿಗೆ ಪೂರೈಕೆಯಾಗದ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಗತ್ಯವಿರುವಷ್ಟು ವಾಣಿಜ್ಯ ಬಳಕೆಯ ಅನಿಲ…

2 hours ago

ಮಂಡ್ಯ ಜಿಲ್ಲೆಯ 307 ಗ್ರಾಮಗಳಲ್ಲಿ ನೀರಿನ ಸಮಸ್ಯೆ

ಖಾಸಗಿ ಬೋರ್‌ವೆಲ್‌ಗಳನ್ನು ವಶಕ್ಕೆ ಪಡೆದು ನೀರು ಪೂರೈಸಲು ಜಿಲ್ಲಾಡಳಿತ ನಿರ್ಧಾರ ಮಂಡ್ಯ: ಪಂಚ ನದಿಗಳು ಹರಿಯುವ ಮಂಡ್ಯ ಜಿಲ್ಲೆಯಲ್ಲಿ ಬೇಸಿಗೆ…

3 hours ago

ಚಾಮುಂಡಿ ವಿಹಾರದಲ್ಲಿರುವ ಈಜುಕೊಳಕ್ಕೆ ಹೈಟೆಕ್ ಸ್ಪರ್ಶ!

ಚಿರಂಜೀವಿ ಸಿ.ಹುಲ್ಲಹಳ್ಳಿ ದಸರಾ ವೇಳೆ ಆರಂಭವಾಗಿದ್ದ ಕಾಮಗಾರಿ ಈಗ ಪೂರ್ಣ; ಈಜು ಸ್ಪರ್ಧೆಗಳು ಆರಂಭ ಮೈಸೂರು: ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿರುವ…

3 hours ago

ರಸ್ತೆಗೆ ಹರಿಯುತ್ತಿರುವ ಒಳಚರಂಡಿ ಕೊಳಚೆ ನೀರು

೬ ತಿಂಗಳಿಂದ ಪರಿಹಾರವಾಗದ ಸಮಸ್ಯೆ; ರಾಮಕೃಷ್ಣನಗರ ‘ಐ’ ಬ್ಲಾಕ್ ನಿವಾಸಿಗಳಿಗೆ ನರಕಯಾತನೆ ಮೈಸೂರು: ರಾಮಕೃಷ್ಣನಗರ ‘ಐ’ ಬ್ಲಾಕ್‌ನ ೨ನೇ ಮುಖ್ಯರಸ್ತೆಯಲ್ಲಿ…

3 hours ago

ನಾಮಪತ್ರ ಭರಾಟೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆಯ ಬಿಸಿಲಿನ ಝಳ ಏರುತ್ತಿರುವಾಗಲೇ ಉಪಚುನಾವಣೆಯ ಕಾವೂ ಏರತೊಡಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

3 hours ago