ಬೆಂಗಳೂರು : ಬೇಡಿಕೆ ಈಡೇರಿಕೆಯ ಬಗ್ಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಭರವಸೆ ನೀಡಿದ ಹಿನ್ನೆಲೆ ಜುಲೈ 27 ರಂದು ಕರೆ ನೀಡಿದ್ದ ಬೆಂಗಳೂರು ಬಂದ್ ಅನ್ನು ಖಾಸಗಿ ಸಾರಿಗೆ ಒಕ್ಕೂಟ ವಾಪಸ್ ಪಡೆದಿದೆ.
ಈ ಬಗ್ಗೆ ಮಾಹಿತಿ ನೀಡಿದ ಒಕ್ಕೂಟದ ಮುಖಂಡ ನಟರಾಜ ಶರ್ಮಾ, ನಮ್ಮ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಆಗಸ್ಟ್ 10ರ ವರೆಗೆ ಕಾಲಾವಕಾಶ ನೀಡಲಾಗಿದೆ. ಬೇಡಿಕೆ ಈಡೇರಿಸಿದ್ದರೆ ಮುಂದಿನ ನಡೆ ನಿರ್ಧರಿಸುತ್ತೇವೆ ಎಂದರು.
ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾಗಿರುವ ಶಕ್ತಿ ಯೋಜನೆ ಜಾರಿ ನಂತರ ಖಾಸಗಿ ಬಸ್, ಆಟೋ ಟ್ಯಾಕ್ಸಿ ಮಾಲೀಕರಿಗೆ ಭಾರೀ ಹೊಡೆತ ನೀಡಿದೆ. ಹೀಗಾಗಿ ಯೋಜನೆ ಸ್ಥಗಿತಕ್ಕೆ ಖಾಸಗಿ ಸಾರಿಗೆ ಒಕ್ಕೂಟ ಆಗ್ರಹಿಸುತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆಟೋ ಚಾಲಕರ ಸಮಸ್ಯೆ ಬೇರೆ ಇದೆ, ಟ್ಯಾಕ್ಸಿ ಸಮಸ್ಯೆಯೂ ಇದೆ. ಶಕ್ತಿಯೋಜನೆ ಕುರಿತು ನಾನೊಬ್ಬನೆ ತೀರ್ಮಾನ ಕೈಗೊಳ್ಳಲು ಸಾಧ್ಯವಿಲ್ಲ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಬೇಕು ಎಂದರು.
ಬಂದ್ಗೆ ಕರೆ ನೀಡಿದ ಹಿನ್ನೆಲೆ ಇಂದು ಬೆಂಗಳೂರಿನ ಶಾಂತಿನಗರದ ಸಾರಿಗೆ ಇಲಾಖೆ ಕೇಂದ್ರ ಕಚೇರಿಯಲ್ಲಿ ಖಾಸಗಿ ಸಾರಿಗೆ ಒಕ್ಕೂಟದ ಜೊತೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಭೆ ನಡೆಸಿದರು.
ಬೆಳಗ್ಗೆ ನಡೆದಿದ್ದ ಸಭೆಯಲ್ಲಿ ಒಮ್ಮತ ಮೂಡಿ ಬಾರದ ಹಿನ್ನೆಲೆ ಸಭೆ ವಿಫಲಗೊಂಡಿತ್ತು. ಹೀಗಾಗಿ ಮಧ್ಯಾಹ್ನದ ನಂತರ ಮತ್ತೆ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಒಕ್ಕೂಟಕ್ಕೆ ಬೇಡಿಕೆ ಈಡೇರಿಸುವ ಬಗ್ಗೆ ಸಾರಿಗೆ ಸಚಿವರು ಭರವಸೆ ನೀಡಿದ್ದಾರೆ. ಹೀಗಾಗಿ ಸಂಧಾನ ಸಭೆ ಯಶಸ್ವಿಯಾಗಿದ್ದು, ಬಂದ್ ವಾಪಸ್ ಪಡೆಯಲಾಗಿದೆ.
ಮುಂಬೈ : ನೀಟ್ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…