ಕಲಬುರ್ಗಿ : ಪ್ರಿಯಾಂಕ್ ಖರ್ಗೆ ಸಚಿವ ಸ್ಥಾನಕ್ಕೆ ಯೋಗ್ಯವಲ್ಲ ಎಂದು ಚಿತ್ತಾಪುರ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್ ಕಿಡಿಕಾರಿದ್ದಾರೆ.
ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಕಾಂಗ್ರೆಸ್ ಸರ್ಕಾರಕ್ಕೆ ನಾನು ವಿನಂತಿ ಮಾಡುತ್ತೇನೆ. ಪ್ರಿಯಾಂಕ್ ಖರ್ಗೆಯನ್ನು ಸಚಿವ ಸ್ಥಾನದಿಂದ ವರ್ಗಾವಣೆ ಮಾಡಬೇಕು. ಇಲ್ಲದೆ ಹೋದರೆ ಸಚಿವ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಒತ್ತಾಯಿಸಿದ್ದಾರೆ.
ಇಲ್ಲಿಯವರೆಗೂ ಕಾಂಗ್ರೆಸ್ ಸರ್ಕಾರ ನಾನು ಹೇಳಿರೋದನ್ನು ಮಾಡಿಕೊಂಡು ಬಂದಿದೆ. ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಅಕ್ಕಿ ಕೊಡೀಕೆ ಆಗದೆ ಇದ್ದಾಗ ದುಡ್ಡು ಕೊಡಿ ಅಂತ ಹೇಳಿದ್ದೆ. ಅಜಯ್ ಸಿಂಗ್ ಅವರಿಗೆ ಕೆಕೆಆರ್ಡಿಬಿ ಅಧ್ಯಕ್ಷ ಸ್ಥಾನ ಕೋಡುವಂತೆ ಹೇಳಿದ್ದೆ. ಸಿದ್ದರಾಮಯ್ಯ ಅವರು ನಾನು ಹೇಳಿದ ಎರಡನ್ನು ಕೂಡ ಮಾಡಿದ್ದಾರೆ. ಹಾಗಾಗಿ, ಇದೊಂದು ಮಾಡುವಂತೆ ಕಾಂಗ್ರೆಸ್ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.
ಪ್ರಿಯಾಂಕ್ ಖರ್ಗೆ ಅಧಿಕಾರ ಸ್ವಿಕಾರ ಮಾಡಿದ ದಿನದಿಂದ ಕಲಬುರಗಿಯಲ್ಲಿ ಲಾ ಅಂಡ್ ಆರ್ಡರ್ ಹದಗೆಟ್ಟಿದೆ. ಕಲಬುರ್ಗಿಯ ಜನರಿಗೆ ಪೊಲೀಸರಿಂದ ರಕ್ಷಣೆ ಸಿಗುತ್ತಿಲ್ಲ. ಜನರಿಗೆ ಪೊಲೀಸರು ಅಂದ್ರೆ ಭಯ ಪಡುವಂತಹ ಸ್ಥಿತಿ ನಿರ್ಮಾಣವಾಗಿದೆ. ಪ್ರಿಯಾಂಕ್ ಖರ್ಗೆ ಪೊಲೀಸರ ಸಭೆಯಲ್ಲಿ ಪೊಲೀಸರು ಅಂದ್ರೆ ಹೆದರಬೇಕು ಅಂತ ಹೇಳಿದ್ರು. ಹಾಗಾಗಿಯೇ ನಿನ್ನೆ ಮಾಡಬೂಳ ಪೊಲೀಸರು ನನ್ನ ಅರೆಸ್ಟ್ ಮಾಡಿದ್ದಾರೆ. ಪ್ರಿಯಾಂಕ್ ಖರ್ಗೆ ಹೇಳಿಕೆ ಹಿನ್ನೆಲೆ ನಾನು ದೂರು ನೀಡಿದ್ದೇನೆ. ಆದ್ರೆ, ಪೊಲೀಸರು ಜಸ್ಟ್ ರಿಸೀವಡ್ ಕೊಟ್ಟು ಕಳುಹಿಸಿದ್ದಾರೆ ಎಂದು ದೂರಿದ್ದಾರೆ.
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…