Mysore
18
broken clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ವಿಧಾನ ಸೌಧದಲ್ಲಿ ಪಾಕ್‌ ಪರ ಘೋಷಣೆ ಪ್ರಕರಣ: ಮೂವರ ಬಂಧನ

ಬೆಂಗಳೂರು: ರಾಜ್ಯ ಸಭಾ ಚುನಾವಣೆ ನಂತರ ವಿಧಾನ ಸೌಧ ಆವರಣದಲ್ಲಿ ಪಾಕ್‌ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪದಡಿಯಲ್ಲಿ ಮೂವರನ್ನು ವಿಧಾನ ಸೌಧ ಪೊಲೀಸರು ಸೋಮವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಆರ್‌.ಟಿ.ನಗರದ ನಿವಾಸಿ ಮುನಾವರ್, ಹಾವೇರಿ ಜಿಲ್ಲೆಯ ಬ್ಯಾಡಗಿ ನಿವಾಸಿ ಮೊಹಮ್ಮದ್ ಶಫಿ ನಾಶಿಪುಡಿ, ದೆಹಲಿ ಮೂಲದ ಇಲ್ತಾಜ್‌ ಎಂಬುವವರನ್ನು ಪಾಕ್‌ ಪರ ಘೋಷಣೆ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಪಾಕ್‌ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.

ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ ಬಳಿಕ, ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೊಷಣೆ ಕೂಗಿದ ಆರೋಪ ಕೇಳಿಬಂದಿತ್ತು. ಇದು ರಾಜ್ಯ ರಾಜಕೀಯದಲ್ಲಿ ಭಾರಿ ಗದ್ದಲಕ್ಕೆ ದಾರಿ ಮಾಡಿಕೊಟ್ಟಿತ್ತು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿಯ ಪಟ್ಟಿಯನ್ನ ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ನಡೆಸಲಾಗಿತ್ತು. ಅದರಲ್ಲಿ ಮೂವರ ವಾಯ್ಸ್​ ಸ್ಯಾಂಪಲ್ಸ್​ ಹಾಗೂ ದೃಶ್ಯಗಳನ್ನು ಎಫ್​​ಎಸ್​ಎಲ್​ಗೆ ರವಾನೆ ಮಾಡಲಾಗಿದ್ದು, ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಿದೆ.

ಈ ಪ್ರಕರಣ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡಾ ಅಸಮಧಾನ ಹೊರಹಾಕಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ