ಬೆಂಗಳೂರು: ರಾಜ್ಯ ಸಭಾ ಚುನಾವಣೆ ನಂತರ ವಿಧಾನ ಸೌಧ ಆವರಣದಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಾರೆ ಎಂಬ ಆರೋಪದಡಿಯಲ್ಲಿ ಮೂವರನ್ನು ವಿಧಾನ ಸೌಧ ಪೊಲೀಸರು ಸೋಮವಾರ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಆರ್.ಟಿ.ನಗರದ ನಿವಾಸಿ ಮುನಾವರ್, ಹಾವೇರಿ ಜಿಲ್ಲೆಯ ಬ್ಯಾಡಗಿ ನಿವಾಸಿ ಮೊಹಮ್ಮದ್ ಶಫಿ ನಾಶಿಪುಡಿ, ದೆಹಲಿ ಮೂಲದ ಇಲ್ತಾಜ್ ಎಂಬುವವರನ್ನು ಪಾಕ್ ಪರ ಘೋಷಣೆ ಆರೋಪದಡಿ ಪೊಲೀಸರು ಬಂಧಿಸಿದ್ದಾರೆ. ಪಾಕ್ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು.
ರಾಜ್ಯಸಭಾ ಚುನಾವಣೆಯಲ್ಲಿ ನಾಸಿರ್ ಹುಸೇನ್ ಗೆಲುವು ಸಾಧಿಸಿದ ಬಳಿಕ, ನಾಸಿರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಸಂಭ್ರಮಾಚರಣೆ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೊಷಣೆ ಕೂಗಿದ ಆರೋಪ ಕೇಳಿಬಂದಿತ್ತು. ಇದು ರಾಜ್ಯ ರಾಜಕೀಯದಲ್ಲಿ ಭಾರಿ ಗದ್ದಲಕ್ಕೆ ದಾರಿ ಮಾಡಿಕೊಟ್ಟಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 26 ಮಂದಿಯ ಪಟ್ಟಿಯನ್ನ ಸಿದ್ದಪಡಿಸಲಾಗಿತ್ತು. ಇದರಲ್ಲಿ 7 ಮಂದಿ ವಿಚಾರಣೆ ನಡೆಸಲಾಗಿತ್ತು. ಅದರಲ್ಲಿ ಮೂವರ ವಾಯ್ಸ್ ಸ್ಯಾಂಪಲ್ಸ್ ಹಾಗೂ ದೃಶ್ಯಗಳನ್ನು ಎಫ್ಎಸ್ಎಲ್ಗೆ ರವಾನೆ ಮಾಡಲಾಗಿದ್ದು, ವರದಿ ನಂತರ ಮುಂದಿನ ಕ್ರಮ ಕೈಗೊಳ್ಳಲಿದೆ.
ಈ ಪ್ರಕರಣ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡಾ ಅಸಮಧಾನ ಹೊರಹಾಕಿದ್ದು, ತಪ್ಪಿತಸ್ಥರ ವಿರುದ್ಧ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದರು.
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…
ಟೆಹ್ರಾನ್ : ಇರಾನ್ ಹಾರ್ಮುಜ್ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳ ಮೇಲೆ ಶುಲ್ಕ ವಿಧಿಸುತ್ತಿದ್ದರೆ, ಅದು ತಕ್ಷಣವೇ ಅದನ್ನು ನಿಲ್ಲಿಸಬೇಕು…
ಮಲ್ಕುಂಡಿ : ರಾತ್ರಿ ವೇಳೆ ರಸ್ತೆ ಮಧ್ಯೆ ಚಿರತೆ ಪ್ರತ್ಯಕ್ಷವಾಗಿರುವ ಘಟನೆ ದೇವರಾಯಶೆಟ್ಟಿಪುರ ಗ್ರಾಮದಿಂದ ಹುರ ಗ್ರಾಮಕ್ಕೆ ತೆರಳುವ ಮುಖ್ಯ…
ಹನೂರು : ಮೂರು ಪ್ರತ್ಯೇಕ ಮನೆಗಳಲ್ಲಿ ಕಳ್ಳತನ ನಡೆಸಿ ನಗದು ಹಾಗೂ ಚಿನ್ನ ದೋಚಿಕೊಂಡು ಪರಾರಿಯಾಗಿದ್ದ ಐವರು ಆರೋಪಿಗಳನ್ನು ರಾಮಾಪುರ…
ಮೈಸೂರು : ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬಡಜನರ ಕಲ್ಯಾಣಕ್ಕಾಗಿ ಸಾಕಷ್ಟು ಕಾರ್ಯಕ್ರಮಗಳನ್ನು ರೂಪಿಸುತ್ತವೆ. ಅಧಿಕಾರಿಗಳು ಪ್ರಾಮಾಣಿಕವಾಗಿ ಬದ್ಧತೆಯಿಂದ ಅವುಗಳನ್ನು…
ಮೈಸೂರು : ನಾನು ಅಹಿಂದ ಚಾಂಪಿಯನ್ ಎನ್ನುವ ಸಿದ್ದರಾಮಯ್ಯ, ಕಾಂಗ್ರೆಸ್ ಬಿಟ್ಟು ಹೊರ ಬಂದು 5-10 ಕ್ಷೇತ್ರಗಳಲ್ಲಿ ಅವರ ಅಭ್ಯರ್ಥಿಗಳನ್ನು…