BREAKING NEWS

ಕ್ರಿಮಿನಲ್‌ಗಳ ಸ್ಪರ್ಧೆಗೆ ನಿಷೇಧ: 4 ವಾರದಲ್ಲಿ ಉತ್ತರಿಸಲು ಕೇಂದ್ರಕ್ಕೆ ನೋಟಿಸ್‌

ನವದೆಹಲಿ : ‘ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸುವ ಕಾರ್ಯವು ನಮ್ಮ ವ್ಯಾಪ್ತಿಯನ್ನು ಮೀರಿದ್ದಾಗಿದೆ. ಇದಕ್ಕಾಗಿ ಕಾಯ್ದೆಗೆ ತಿದ್ದುಪಡಿ ತರುವುದು ಅಗತ್ಯವಾಗಿದೆ’ ಎಂದು ಕೇಂದ್ರ ಚುನಾವಣಾ ಆಯೋಗವು ಸೋಮವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿತು.

‘ರಾಜಕಾರಣವನ್ನು ಅಪರಾಧೀಕರಣ ಮುಕ್ತಗೊಳಿಸಲು ಆಯೋಗವು ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಈ ನಿಟ್ಟಿನಲ್ಲಿ ಕೆಲ ಶಿಫಾರಸುಗಳನ್ನೂ ಮಾಡಿದೆ. ಆದರೆ, ಇದನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಕಾಯ್ದೆಗೆ ತಿದ್ದುಪಡಿ ಅಗತ್ಯ‘ ಎಂದು ಹೇಳಿತು.

ಈ ಸಂಬಂಧ ಲಿಖಿತ ಪ್ರತಿಕ್ರಿಯೆಯನ್ನು ದಾಖಲಿಸಿದ ಆಯೋಗವು, ‘2016ರ ಚುನಾವಣಾ ಸುಧಾರಣೆಗಳು’ ಕುರಿತ ಅಂಶಗಳನ್ನು 2004ರಲ್ಲಿ ಮಾಡಿದ್ದ ಶಿಫಾರಸುಗಳಲ್ಲಿಯೂ ಉಲ್ಲೇಖಿಸಿದೆ. ನಿರ್ದಿಷ್ಟ ಸ್ವರೂಪದ ಅಪರಾಧಗಳಿರುವ, ಕನಿಷ್ಠ 5 ವರ್ಷ ಸಜೆಗೆ ಒಳಗಾಗಿರುವ, ಆರೋಪಪಟ್ಟಿ ದಾಖಲಿಸಿರುವ, ಚುನಾವಣೆಗೆ ಕನಿಷ್ಠ ಆರು ತಿಂಗಳು ಮೊದಲು ಪ್ರಕರಣ ದಾಖಲಾಗಿರುವ ವ್ಯಕ್ತಿಗೆ ಚುನಾವಣೆಗಳಲ್ಲಿ ಸ್ಪರ್ಧಿಸಲು ಅವಕಾಶ ಇರದಂತೆ ನಿಷೇಧ ಹೇರಬೇಕು ಎಂದು ಶಿಫಾರಸು ಮಾಡಲಾಗಿದೆ ಎಂದು ಆಯೋಗವು ತಿಳಿಸಿದೆ.

ವಕೀಲ ಅಶ್ವಿನ್‌ ಕುಮಾರ್ ಉಪಾಧ್ಯಾಯ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿ ಸುಪ್ರೀಂ ಕೋರ್ಟ್‌ನ ಸೂಚನೆಯಂತೆ ಪ್ರತಿಕ್ರಿಯೆಯಾಗಿ ಆಯೋಗವು ಈ ಪ್ರಮಾಣಪತ್ರ ಸಲ್ಲಿಸಿತು. ಗಂಭೀರ ಪ್ರಕರಣಗಳಿರುವರಿಗೆ ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಬೇಕು ಎಂದು ಅರ್ಜಿದಾರರು ಕೋರಿದ್ದರು.

ಅತ್ಯಾಚಾರ, ಕೊಲೆ, ಅಪಹರಣ, ಸುಲಿಗೆ, ಲಂಚ, ಹಣ ಅಕ್ರಮ ವರ್ಗಾವಣೆ, ಆದಾಯ ಮೀರಿದ ಆಸ್ತಿ ಗಳಿಕೆ ಇತ್ಯಾದಿ ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಿರುವ ವ್ಯಕ್ತಿಗೆ ಚುನಾವಣೆಗೆ ಸ್ಪರ್ಧಿಸುವುದರಿಂದ ನಿಷೇಧ ಹೇರಬೇಕು ಎಂದು ಕೋರಿದ ಅರ್ಜಿಗೆ ಸಂಬಂಧಿಸಿದಂತೆ ನಾಲ್ಕು ವಾರದಲ್ಲಿ ಪ್ರತಿಕ್ರಿಯೆಯನ್ನು ದಾಖಲಿಸುವಂತೆ ಸೂಚಿಸಿ ಕೇಂದ್ರಕ್ಕೆ ನೋಟಿಸ್‌ ಅನ್ನು ಕೋರ್ಟ್‌ ಜಾರಿ ಮಾಡಿತು.

ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್‌ ಮತ್ತು ಬಿ.ವಿ.ನಾಗರತ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆ ನಡೆಸಿತು. ‘ಭ್ರಷ್ಟಾಚಾರವು ಜನಸಾಮಾನ್ಯರ ಮೇಲೆ ಪರಿಣಾಮ ಬೀರುವ ಕಾರಣ, ಇದು ಬಹುಮುಖ್ಯವಾದ ವಿಷಯ‘ ಎಂದು ಅಭಿಪ್ರಾಯಪಟ್ಟಿದ್ದ ಪೀಠ, ಈ ಬಗ್ಗೆ ಪ್ರತಿಕ್ರಿಯೆ ದಾಖಲಿಸಲು ಫೆ. 26ರಂದು ಕೇಂದ್ರಕ್ಕೆ ಕೊನೆಯ ಅವಕಾಶ ನೀಡಿತ್ತು.

lokesh

Recent Posts

ಓದುಗರ ಪತ್ರ: ಶಾಸಕರ ಅಸಂಬದ್ಧ ಹೇಳಿಕೆ

ಕಾಡಾನೆಗಳ ಹಾವಳಿಯಿಂದಾಗಿ ಕಾಡಂಚಿನ ಜನರಿಗೆ ತೊಂದರೆಯಾಗುತ್ತಿದೆ. ಆದ್ದರಿಂದ ಆನೆಗಳನ್ನು ಕೊಲ್ಲಲು ಅನುಮತಿ ನೀಡಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ…

2 hours ago

ಓದುಗರ ಪತ್ರ: ಅಮಿತ್‌ ಶಾ ಹೇಳಿಕೆ ಖಂಡನೀಯ

ರಾಜ್ಯಸಭೆಯ ಕಲಾಪದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡುವ ಭರದಲ್ಲಿ ಕೆಲವರು ಅಂಬೇಡ್ಕರ್ ಎನ್ನುವುದನ್ನು ಈಗ ಫ್ಯಾಷನ್…

2 hours ago

ವಾಹನ ಸಂಚಾರಕ್ಕೆ ಸಂಚಕಾರ ತರುತ್ತಿರುವ ಅವರೆಕಾಯಿ ವ್ಯಾಪಾರ

ದಾ.ರಾ. ಮಹೇಶ್‌ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…

3 hours ago

ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

  ಮಂಡ್ಯ: ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20,21 ಮತ್ತು 22ರಂದು ಮೂರು ದಿನಗಳ ಕಾಲ ಜರುಗಲಿರುವ ಕನ್ನಡ ನುಡಿ ಜಾತ್ರೆ…

4 hours ago

59 ಸಾವಿರ ಶಿಕ್ಷಕರ ಹುದ್ದೆ ಖಾಲಿ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…

13 hours ago

ಮೈಸೂರಿಗೆ ತೆರಳಲು ಅನುಮತಿ ಕೋರಿ ಕೋರ್ಟ್‌ ಮೋರಿ ಹೋದ ದರ್ಶನ್‌

ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್‌ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…

13 hours ago