ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಂದು ಹೈ ಕೋರ್ಟ್ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಮೆಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ.
ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್ ನೀಡಿದ್ದ ಅನುಮತಿಯನ್ನು ಹೈ ಕೋರ್ಟ್ ನ ಏಕಸದಸ್ಯಪೀಠ ಎತ್ತಿ ಹಿಡಿದಿತ್ತು. ಹಾಗಾಗಿ ಈ ಪ್ರಕಣವನ್ನು ಪುನರ್ ಪರಿಶೀಲಿಸಲು ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಪರಿಗಣಿಸಿದ ಹೈ ಕೋರ್ಟ್‌ನ ದ್ವಿ ಸದಸ್ಯ ಪೀಠ ತಡೆ ನೀಡಿತ್ತು. ಈ ತಡೆಯಾಗ್ನೆಯನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂ ಅಂಗಳ ತಲುಪಿತ್ತು. ಈ ಪ್ರಕರಣವನ್ನು ಸುಪ್ರಿಂ ಕೋರ್ಟ್ ಮತ್ತೆ ಹೈ ಕೋರ್ಟ್‌ಗೆ ವಹಿಸಿ ಆದೇಶ ಹೊರಡಿಸಿತ್ತು. ಅದರನ್ವಯ ಇಂದು ಹೈ ಕೋರ್ಟ್ ನ ದ್ವಿಸದಸ್ಯ ಪೀಠದಲ್ಲಿ ಇಂದು ಡಿಕೆಶಿ ಅರ್ಜಿಯ ವಿಚಾರಣೆ ನಡೆಯಲಿದೆ.
ನವೆಂಬರ್ 10 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರಿಂ ಕೋರ್ಟ್‌ನ ನ್ಯಾ.ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ, ಪ್ರಕರಣವನ್ನು ಹೈಕೋರ್ಟ್ ನಲ್ಲಿಯೇ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿತ್ತು.
ವಿಚಾರಣೆಯ ವೇಳೆ ಸಿಬಿಐ ಪರವಾಗಿ ವಾದ ಮಂಡಿಸಿದ್ದ ವಕೀಲರು ಹೈ ಕೋರ್ಟ್ ನ ಏಕ ಸದಸ್ಯ ಪೀಠ ಪ್ರಕರಣವನ್ನು ತನಿಖೆಗೆ ನೀಡಿರಲಿಲ್ಲ, ಆದರೆ ವಿಭಾಗೀಯ ಪೀಠ ತಡೆ ನೀಡಿತ್ತು. ಆ ತಡೆಯನ್ನು ರದ್ದುಗೊಳಿಸುವಂತೆ ಕೋರಿ ಹೈ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.ಹಾಗಾಗಿ ಪ್ರಕರಣವನ್ನು ತನಿಖೆ ಮಾಡಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದರು.
ವಾದ ಆಲಿಸಿದ ನ್ಯಾಯಾಧೀಶರು ಹೈ ಕೋರ್ಟ್ ನಲ್ಲಿ ಪ್ರಕರಣ ಬಾಕಿ ಇರುವುದರಿಂದ ಅಲ್ಲೇ ಮರು ಪ್ರಸ್ತಾಪಿಸಿ ಅರ್ಜಿಯನ್ನು ಇತ್ಯರ್ಥ ಪಡಿಸುವಂತೆ ನಿರ್ದೇಶನ ನೀಡುತ್ತೇವೆ ಎಂದು ಆದೇಶ ನೀಡುವ ಮೂಲಕ ಪ್ರಕರಣವನ್ನು ಮತ್ತೊಮ್ಮೆ ಹೈ ಅಂಗಳಕ್ಕೆಸೆದಿದ್ದರು. ಹಾಗಾಗಿ ಇಂದು ಆ ಪ್ರಕರಣದ ವಿಚಾರಣೆ ನಡೆಯಲಿದೆ.
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…
ಬೆಂಗಳೂರು: ನಟ ಕಿಚ್ಚ ಸುದೀಪ್ ಅಭಿನಯದ ಮಾರ್ಕ್ ಸಿನಿಮಾ ಟ್ರೈಲರ್ ಅದ್ಧೂರಿಯಾಗಿ ಬಿಡುಗಡೆ ಮಾಡಲಾಗಿದೆ. ವಿಜಯ್ ಕಾರ್ತಿಕೇಯ-ಸುದೀಪ್ ಕಾಂಬಿನೇಷನ್‌ನಲ್ಲಿ ಮೂಡಿಬಂದಿರುವ…
ಉಡುಪಿ: ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು. ಇಂದು…
ಹಾಸನ: ಕಾಫಿ ಬೆಳೆಗೆ ಉತ್ತಮ ಬೆಲೆ ಬಂದಿರುವ ಪರಿಣಾಮ ಮಲೆನಾಡು ಭಾಗದಲ್ಲಿ ಕಾಫಿ ಕಳವು ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.…
ಮುಂಬೈ: ಭಾರತ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂದಾನ ಹಾಗೂ ಸಂಗೀತ ಸಂಯೋಜಕ ಪಲಾಶ್ ಮುಚ್ಚಲ್ ಮದುವೆ ಮುಂದೂಡಿಕೆಯಾಗಿತ್ತು.…
ಗುಂಡ್ಲುಪೇಟೆ: ಬಂಡೀಪುರ ರಾಜ್ಯದಲ್ಲೇ ಅತಿ ಹೆಚ್ಚು ಹುಲಿ, ಚಿರತೆ ಹಾಗೂ ಆನೆಗಳಿರುವ ತಾಣ. ಈ ಅರಣ್ಯದಲ್ಲಿ ದೇಶದಲ್ಲೇ ಮೊದಲ ಟ್ರ್ಯಾಕರ್…