BREAKING NEWS

ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ : ಹೈ ಕೋರ್ಟ್‌ನಲ್ಲಿ ಡಿಕೆಶಿ ಮೇಲ್ಮನವಿ ವಿಚಾರಣೆ

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇಂದು ಹೈ ಕೋರ್ಟ್‌ ನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರ ಮೆಲ್ಮನವಿ ಅರ್ಜಿಯ ವಿಚಾರಣೆ ನಡೆಯಲಿದೆ.

ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪ್ರಾಸಿಕ್ಯೂಷನ್‌ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಡಿಕೆಶಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಾಸಿಕ್ಯೂಷನ್‌ ನೀಡಿದ್ದ ಅನುಮತಿಯನ್ನು ಹೈ ಕೋರ್ಟ್‌ ನ ಏಕಸದಸ್ಯಪೀಠ ಎತ್ತಿ ಹಿಡಿದಿತ್ತು. ಹಾಗಾಗಿ ಈ ಪ್ರಕಣವನ್ನು ಪುನರ್‌ ಪರಿಶೀಲಿಸಲು ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ಪರಿಗಣಿಸಿದ ಹೈ ಕೋರ್ಟ್‌ನ ದ್ವಿ ಸದಸ್ಯ ಪೀಠ ತಡೆ ನೀಡಿತ್ತು. ಈ ತಡೆಯಾಗ್ನೆಯನ್ನು ಪ್ರಶ್ನಿಸಿ ಸಿಬಿಐ ಸುಪ್ರಿಂ ಅಂಗಳ ತಲುಪಿತ್ತು. ಈ ಪ್ರಕರಣವನ್ನು ಸುಪ್ರಿಂ ಕೋರ್ಟ್‌ ಮತ್ತೆ ಹೈ ಕೋರ್ಟ್‌ಗೆ ವಹಿಸಿ ಆದೇಶ ಹೊರಡಿಸಿತ್ತು. ಅದರನ್ವಯ ಇಂದು ಹೈ ಕೋರ್ಟ್‌ ನ ದ್ವಿಸದಸ್ಯ ಪೀಠದಲ್ಲಿ ಇಂದು ಡಿಕೆಶಿ ಅರ್ಜಿಯ ವಿಚಾರಣೆ ನಡೆಯಲಿದೆ.

ನವೆಂಬರ್‌ 10 ರಂದು ಪ್ರಕರಣದ ವಿಚಾರಣೆ ನಡೆಸಿದ್ದ ಸುಪ್ರಿಂ ಕೋರ್ಟ್‌ನ ನ್ಯಾ.ಬೇಲಾ ತ್ರಿವೇದಿ ನೇತೃತ್ವದ ದ್ವಿ ಸದಸ್ಯ ಪೀಠ, ಪ್ರಕರಣವನ್ನು ಹೈಕೋರ್ಟ್‌ ನಲ್ಲಿಯೇ ಇತ್ಯರ್ಥಪಡಿಸುವಂತೆ ನಿರ್ದೇಶನ ನೀಡಿತ್ತು.

ವಿಚಾರಣೆಯ ವೇಳೆ ಸಿಬಿಐ ಪರವಾಗಿ ವಾದ ಮಂಡಿಸಿದ್ದ ವಕೀಲರು ಹೈ ಕೋರ್ಟ್‌ ನ ಏಕ ಸದಸ್ಯ ಪೀಠ ಪ್ರಕರಣವನ್ನು ತನಿಖೆಗೆ ನೀಡಿರಲಿಲ್ಲ, ಆದರೆ ವಿಭಾಗೀಯ ಪೀಠ ತಡೆ ನೀಡಿತ್ತು. ಆ ತಡೆಯನ್ನು ರದ್ದುಗೊಳಿಸುವಂತೆ ಕೋರಿ ಹೈ ಕೋರ್ಟ್‌ ನಲ್ಲಿ ಅರ್ಜಿ ಸಲ್ಲಿಸಲಾಗಿದೆ.ಹಾಗಾಗಿ ಪ್ರಕರಣವನ್ನು ತನಿಖೆ ಮಾಡಲು ಅವಕಾಶ ನೀಡಬೇಕು ಎಂದು ಕೇಳಿಕೊಂಡಿದ್ದರು.

ವಾದ ಆಲಿಸಿದ ನ್ಯಾಯಾಧೀಶರು ಹೈ ಕೋರ್ಟ್‌ ನಲ್ಲಿ ಪ್ರಕರಣ ಬಾಕಿ ಇರುವುದರಿಂದ ಅಲ್ಲೇ ಮರು ಪ್ರಸ್ತಾಪಿಸಿ ಅರ್ಜಿಯನ್ನು ಇತ್ಯರ್ಥ ಪಡಿಸುವಂತೆ ನಿರ್ದೇಶನ ನೀಡುತ್ತೇವೆ ಎಂದು ಆದೇಶ ನೀಡುವ ಮೂಲಕ ಪ್ರಕರಣವನ್ನು ಮತ್ತೊಮ್ಮೆ ಹೈ ಅಂಗಳಕ್ಕೆಸೆದಿದ್ದರು. ಹಾಗಾಗಿ ಇಂದು ಆ ಪ್ರಕರಣದ ವಿಚಾರಣೆ ನಡೆಯಲಿದೆ.

lokesh

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago