BREAKING NEWS

ರಾಜ್ಯದ ‌ರೈತರ ಹಿತ ಕಾಪಾಡಿ: ಕೇಂದ್ರ ಬರ ಅಧ್ಯಯನ ತಂಡಕ್ಕೆ ಸಿಎಂ ಸಲಹೆ

ಬೆಂಗಳೂರು : ಬರಗಾಲ ಸಂಕಷ್ಟದಲ್ಲಿರುವ ರಾಜ್ಯದ ರೈತರ ರಕ್ಷಣೆಗೆ ಪೂರಕವಾಗಿ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಬರ ಅಧ್ಯಯನ ತಂಡದ ಸದಸ್ಯರಿಗೆ ಸಲಹೆ ನೀಡಿದರು.

ಗುರುವಾರ ವಿಧಾನಸೌಧದಲ್ಲಿ ತಮ್ಮನ್ನು ಭೇಟಿಯಾದ ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಮಾತುಕತೆ ನಡೆಸಿದ ಅವರು, ಕೇಂದ್ರದ ಮಾರ್ಗಸೂಚಿಯನ್ವಯ 195 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಇನ್ನೂ 32 ತಾಲ್ಲೂಕುಗಳು ನಿಗದಿತ ಮಾನದಂಡಗಳನ್ನು ಪೂರೈಸುತ್ತಿವೆ ಎಂದರು.

ರಾಜ್ಯದಲ್ಲಿ ನೈಋತ್ಯ ಮುಂಗಾರು ವಿಳಂಬದಿಂದ ಹಾಗೂ ಮಳೆಯ ಕೊರತೆಯಿಂದ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರಾಜ್ಯದಲ್ಲಿ ಶೇ.90ರಷ್ಟು ಬಿತ್ತನೆ ಆಗಿದ್ದು, ಅದರಲ್ಲಿ 42 ಲಕ್ಷ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿಯಾಗಿದೆ. ರೈತರ ಜಮೀನಿನಲ್ಲಿ ಹಸಿರು ಕಾಣಿಸಿದರೂ ಬೆಳೆಯಿಲ್ಲದ ಪರಿಸ್ಥಿತಿ ಉಂಟಾಗಿದ್ದು, ರಾಜ್ಯದಲ್ಲಿ ಹಸಿರು ಬರ ತಲೆದೋರಿದೆ ಎಂದು ವಾಸ್ತವ ಪರಿಸ್ಥಿತಿಯನ್ನು ವಿವರಿಸಿದರು.

ಪ್ರವಾಸದ ಸಂದರ್ಭದಲ್ಲಿ ರಾಜ್ಯದ ವಸ್ತುಸ್ಥಿತಿಯನ್ನು ಅರಿತು ಕೇಂದ್ರಕ್ಕೆ ಮನವರಿಕೆ ಮಾಡುವ ಮೂಲಕ ರೈತರ ಸಂಕಷ್ಟಕ್ಕೆ ಕೇಂದ್ರ ಸರಕಾರ ತ್ವರಿತವಾಗಿ ಸ್ಪಂದಿಸಬೇಕು.ಅದೇ ರೀತಿ, ಮುಂಗಾರು ವಿಳಂಬ ಹಾಗೂ ಆಗಸ್ಟ್ ತಿಂಗಳಲ್ಲಿ ಕಳೆದ 122 ವರ್ಷಗಳಲ್ಲೇ ಅತಿ ಕಡಿಮೆ ಮಳೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಅಣೆಕಟ್ಟುಗಳು ಬರಿದಾಗಿವೆ. ಸೆಪ್ಟೆಂಬರ್ ತಿಂಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಿದೆ. ಆದರೆ ಮುಂಗಾರು ಮುಗಿಯುತ್ತ ಬಂದಿದೆ. ಇದು ಕುಡಿಯುವ ನೀರಿನ ಕೊರತೆ, ವಿದ್ಯುತ್ ಕೊರತೆಯ ಆತಂಕವನ್ನೂ ಸೃಷ್ಟಿಸಿದೆ ಎಂದು ವಿವರಿಸಿದರು.

ಕೊಡಗು ಜಿಲ್ಲೆಯಲ್ಲಿ ಮಳೆ ಕೊರತೆಯಿಂದಾಗಿ ಕೆಆರ್ ಎಸ್ ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಕುಡಿಯುವ ನೀರಿಗಾಗಿಯೇ ರಾಜ್ಯಕ್ಕೆ 33 ಟಿಎಂಸಿ ನೀರಿನ ಅವಶ್ಯಕತೆಯಿದೆ. ಆದರೆ ಮಳೆಯ ಕೊರತೆಯಿಂದ ಆತಂಕದ ಸ್ಥಿತಿ ಎದುರಾಗಿದೆ. ರಾಜ್ಯದಲ್ಲಿ ಸಣ್ಣ ಮತ್ತು ಮಧ್ಯಮ ರೈತರ ಸಂಖ್ಯೆ ಹೆಚ್ಚಿದ್ದು, ಇವರ ದತ್ತಾಂಶವನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಗ್ರಹಿಸಲಾಗಿದೆ. ಜೊತೆಗೆ ಬೆಳೆ ಸಮೀಕ್ಷೆಯನ್ನು ಸಹ ಡಿಜಿಟೈಸ್ ಮಾಡಿರುವುದರಿಂದ ನಿಖರ ಮಾಹಿತಿ ದೊರೆಯುವುದು ಎಂದು ಅವರು ಹೇಳಿದರು.

ರೈತರಿಗೆ ಎನ್‍ಡಿಆರ್ ಎಫ್ ಮಾರ್ಗ ಸೂಚಿಯಲ್ಲಿ ನಿಗದಿ ಪಡಿಸಿರುವ ಬೆಳೆ ನಷ್ಟ ಪರಿಹಾರ ಅತ್ಯಂತ ಕಡಿಮೆಯಿದ್ದು, ಹೆಚ್ಚಿಸುವ ಅಗತ್ಯವಿದೆ. ರಾಜ್ಯದಲ್ಲಿ ಹೆಚ್ಚುವರಿಯಾಗಿ ಬೆಳೆ ನಷ್ಟ ಪರಿಹಾರ ನೀಡಲಾಗುತ್ತಿದೆ ಎಂದೂ ಸಿದ್ದರಾಮಯ್ಯ ತಿಳಿಸಿದರು. ಸಭೆಯಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕಂದಾಯ ಇಲಾಖೆ ಕಾರ್ಯದರ್ಶಿ ರಶ್ಮಿ ವಿ.ಮಹೇಶ್, ಕೇಂದ್ರ ತಂಡದ ಮುಖ್ಯಸ್ಥ ಅಜಿತ್ ಕುಮಾರ್ ಸಾಹು ಸೇರಿದಂತೆ ಪ್ರಮುಖರಿದ್ದರು.

andolanait

Recent Posts

ಓದುಗರ ಪತ್ರ: ಬಾಗೂರು ಅಣೆಕಟ್ಟೆಗೆ ನೀರು ತುಂಬಿಸಿ

ನಂಜನಗೂಡು ತಾಲ್ಲೂಕು ಬಾಗೂರು ಅಣೆಕಟ್ಟೆ ದೊಡ್ಡ ಅಣೆಕಟ್ಟೆಯಾಗಿದೆ. ಹಿಂದೆ ಅನೇಕ ಹಳ್ಳಿಗಳಿಗೆ ಕೋಡಿ ತುಂಬಿ ಯಥೇಚ್ಛವಾಗಿ ಇದರಿಂದ ನೀರು ಹರಿದು…

3 hours ago

ಓದುಗರ ಪತ್ರ: ಈ ‘ಕೆಲಸ’ ಮುಂಚೆಯೇ ಆಗಬೇಕಿತ್ತು

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರುಪಯೋಗ ಪ್ರಕರಣದಲ್ಲಿ ಸಚಿವ ಬಿ.ನಾಗೇಂದ್ರ ಅವರು ರಾಜೀನಾಮೆ ನೀಡಿದ್ದಾರೆ. ಇದೇ ಹಗರಣಕ್ಕೆ ಸಂಬಂಧಿಸಿದಂತೆ, ಸಿದ್ದರಾಮಯ್ಯ…

3 hours ago

ಓದುಗರ ಪತ್ರ: ದಂಡ ವಸೂಲಿಯೇ ಪೊಲೀಸರ ಆದ್ಯತೆ ಆಗಬಾರದು

ಸಾಂಸ್ಕೃತಿಕ ನಗರಿ, ಅರೆಮನೆ ನಗರಿ, ಸ್ವಚ್ಛನಗರಿ, ಹಿರಿಯ ನಾಗರಿಕರ ಸ್ವರ್ಗ ಎಂದೆಲ್ಲಾ ಹೆಸರುವಾಸಿಯಾಗಿರುವ ಮೈಸೂರಿನಲ್ಲೂ ಈಗಿನ ಕಾನೂನು ವ್ಯವಸ್ಥೆಯ ಬಗ್ಗೆ…

3 hours ago

ವ್ಯವಸ್ಥೆಯನ್ನು ಪ್ರಶ್ನಿಸುವವರು ದಿಮಾಗಿ ನಕ್ಸಲರೇ?

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ದೇವರು, ಧರ್ಮ ಮತ್ತು ಪುರಾಣಗಳ ಗೊತ್ತಿಲ್ಲದ ಮತ್ತು ಅನುಮಾನಗೊಂಡ ಹಾಗೂ ಅರ್ಥವಾಗದ ವಿಷಯಗಳ…

3 hours ago

ಅಸಂಗತ ಜಾತ್ರೆಯಲ್ಲಿ ಅಪರೂಪದ ಯಾತ್ರಿಕ

ರಾಮನಾಥ ಎಸ್. ಹೆಚ್.ಕೆ.ದ್ವಾರಕಾನಾಥ್, ಕರ್ನಾಟಕ ರಂಗಭೂಮಿಗೆ ರಂಗಭೀಷ್ಮ ಬಿ.ವಿ.ಕಾರಂತರಿತ್ತ ಕೊಡುಗೆ. ಚಾಮರಾಜೇಂದ್ರ ದೃಶ್ಯ ಕಲಾ ಅಕಾಡೆಮಿಯಲ್ಲಿ ಓದುತ್ತಾ, ಬದುಕಿಗಾಗಿ ಬವಣೆಪಡುತ್ತಾ,…

3 hours ago

ಗಲಿವರನ ಕಥೆಯಲ್ಲಿ ಕಂಡ ಜಂತರ್ ಮಂತರ್ ಹುಡುಗಿ

ಶೇಷಾದ್ರಿ ಗಂಜೂರು ದೆಹಲಿಯ ಜಂತರ್ ಮಂತರಿನಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ಪ್ರತಿಭಟನೆಯಲ್ಲಿ ಬಳಕೆ ಯಾದ ‘ಅಸಭ್ಯ ಭಾಷೆ’ ಅದರಲ್ಲೂ ಹುಡುಗಿಯರು…

3 hours ago